ಅಂಗನವಾಡಿ ಕಾರ್ಯಕರ್ತೆಯರಿಂದ ಸಚಿವೆ ಹೆಬ್ಬಾಳ್ಕರ್‌ಗೆ ದೂರು

ಅಂಗನವಾಡಿ ಕಾರ್ಯಕರ್ತೆಯರಿಂದ ಸಚಿವೆ ಹೆಬ್ಬಾಳ್ಕರ್‌ಗೆ ದೂರು

ಮುದ್ದೇಬಿಹಾಳ : ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ ಅವರ ವಿರುದ್ಧ ಅಂಗನವಾಡಿ ಸಂಘಟನೆ ಹೆಸರಿನಲ್ಲಿ ಕೆಲವರನ್ನು ಗುಂಪು ಕಟ್ಟಿಕೊಂಡು ನೀಲಮ್ಮ ಬೋರಾವತ್ ಎನ್ನುವವರು ತೇಜೋವಧೆ ನಡೆಸಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು 30ಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು ಬುಧವಾರ ತಹಶೀಲ್ದಾರ್ ಮೂಲಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಪಟ್ಟಣದ ತಹಸೀಲ್ದಾರ್ ಕಚೇರಿಗೆ ಆಗಮಿಸಿದ್ದ ಕಾರ್ಯಕರ್ತೆಯರು, ಶಿರಸ್ತೇದಾರ ಎಂ.ಎಸ್.ಬಾಗೇವಾಡಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಅಂಗನವಾಡಿ ಕಾರ್ಯಕರ್ತೆ ನೀಲಮ್ಮ ಬೋರಾವತ್ ಅವರು, ಮಾಜಿ ಸೈನಿಕರಾಗಿರುವ ನಮ್ಮ ಇಲಾಖೆಯ ಅಧಿಕಾರಿ ಕುಂಬಾರ ಹಾಗೂ ಸಿಬ್ಬಂದಿ, ಸೂಪರ ವೈಸರ್‌ಗಳ ವಿರುದ್ಧ ಅತ್ಯಂತ ಕೆಳಮಟ್ಟದ ಪದಗಳನ್ನು ಬಳಸಿ ಅಂಗನವಾಡಿ ನೌಕರರು ತಲೆ ತಗ್ಗಿಸುವಂತೆ ಮಾಡಿದ್ದಾರೆ.ಅವರು ಮಾಡಿರುವ ಆರೋಪಗಳಿಗೆ ಆಧಾರಗಳನ್ನು ಒದಗಿಸಬೇಕು.

ಮೇಲಧಿಕಾರಿಗಳು ಅವರ ಆರೋಪಗಳ ಬಗ್ಗೆ ತನಿಖೆ ಮಾಡಬೇಕು. ಅಲ್ಲಿಯವರೆಗೂ ಅವರನ್ನು ಸೇವೆಯಿಂದ ಅಮಾನತಿನಲ್ಲಿಡಬೇಕು.ಶಾಸಕರ ಹೆಸರನ್ನು ಬಳಸಿಕೊಂಡು ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತಿರುವ ಈ ಹೋರಾಟಗಾರ್ತಿಯ ಸಂಘಟನೆ ಅಸಲಿಯೋ ನಕಲಿಯೋ ಎಂಬುದನ್ನು ಪರಿಶೀಲನೆ ನಡೆಸಿ ಸುಳ್ಳು, ಆಧಾರ ರಹಿತ ಆರೋಪಗಳನ್ನು ಮಾಡುತ್ತಿರುವ ಬೋರಾವತ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಸಿಡಿಪಿಒ ವಿರುದ್ಧ ಮಂಗಳವಾರ ಬೀದಿಗಿಳಿದ ಎಲ್ಲ ಕಾರ್ಯಕರ್ತೆಯರನ್ನು ವಜಾ ಮಾಡಬೇಕು ಎಂದು ಸಚಿವೆ ಹೆಬ್ಬಾಳ್ಕರ್ ಅವರಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಲಾಗಿದೆ. ಮನವಿಯನ್ನು ಶಿರಸ್ತೇದಾರ ಎಂ.ಎಸ್.ಬಾಗೇವಾಡಿ ಅವರಿಗೆ ಸಲ್ಲಿಸಲಾಯಿತು.

ಅಂಗನವಾಡಿ ಕಾರ್ಯಕರ್ತೆಯರಾದ ಸಾವಿತ್ರಿ ನಾಗರತ್ತಿ,ರೇಣುಕಾ ಹಡಪದ, ಕೆ.ಜೆ.ಪಾದಗಟ್ಟಿ, ಮಹಾದೇವಿ ನಾಗೋಡ, ಸುವರ್ಣಾ ಕಾಳೆ, ಜಯಶ್ರೀ ಹಿರೇಮಠ, ಸರಸ್ವತಿ ಮದ್ದರಕಿ, ಮೈರುನಬಿ ಮುಲ್ಲಾ, ನಿರ್ಮಲಾ ಕುಲಕರ್ಣಿ, ಗುರುಬಾಯಿ ಮಲಗೌಡರ, ರೇಣುಕಾ ಕುಂಟೋಜಿ, ಕಲಾವತಿ ವಂದಾಲ, ರೇಣುಕಾ ಲಮಾಣಿ, ಎಚ್.ಆರ್.ಯರಗುಂಟಿ, ಎ.ಆಯ್.ಕುಂಬಾರ, ಬಸಮ್ಮ ಭಜಂತ್ರಿ, ಬಸಮ್ಮ ಮಾದರ, ಜಯಶ್ರೀ ಜೀರಲಭಾವಿ, ಮಾದೇವಿ ನಾಯಕರ, ಜಯಶ್ರೀ ಗೌಂಡಿ, ಶರಣಮ್ಮ ಗೌಂಡಿ, ಪಾರ್ವತಿ ಹಿರೇಮಠ, ಎಸ್.ಎಸ್.ಸಣಕಲಗೌಡರ, ಕೆ.ಎ.ದೇಶಪಾಂಡೆ ಮೊದಲಾದವರು ಇದ್ದರು.

Latest News

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಮುದ್ದೇಬಿಹಾಳ : ರೈತರ ಬೆಳೆದ ಬೆಳೆ ವಿವರಗಳನ್ನು ದಾಖಲಿಸುವಲ್ಲಿ ಬೆಳೆಯ ಸಮೀಕ್ಷೆದಾರರ ಪಾತ್ರವು ಅತಿ ಮುಖ್ಯವಾಗಿದ್ದು ಅವರ ಬೇಡಿಕೆಯಂತೆ ಐಡಿ ಕಾರ್ಡ್ ಹಾಗೂ ಕಿಟ್ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಕೀರ್ತಿ ಚಾಲಕ್ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಹಾಗೂ ಸರ್ಕಾರದ ಪ್ರತಿನಿಧಿಯಾಗಿ ಈ ಬೆಳೆ ಸಮೀಕ್ಷೆದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದರು. ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಗೋವಿಂದರೆಡ್ಡಿ