Ankita to the Ordinance of Karnataka stage-based gig worker

ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ ಸುಗ್ರೀವಾಜ್ಞೆಗೆ ಅಂಕಿತ

ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ ಸುಗ್ರೀವಾಜ್ಞೆಗೆ ಅಂಕಿತ

ಬೆಂಗಳೂರು, ಮೇ 29: ಬಹು ನಿರೀಕ್ಷಿತ ‘ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಹಾಗೂ ಕ್ಷೇಮಾಭಿವೃದ್ಧಿ) ಸುಗ್ರೀವಾಜ್ಞೆ ́ಗೆ ಅಂಕಿತ ದೊರೆತ ಹಿನ್ನೆಲೆಯಲ್ಲಿ, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು, ಗಿಗ್ ಕಾರ್ಮಿಕರೊಂದಿಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ ಅಭಿನಂದನೆಗಳನ್ನು ಸಲ್ಲಿಸಿದರು.

‘ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಹಾಗೂ ಕ್ಷೇಮಾಭಿವೃದ್ಧಿ) ವಿಧೇಯಕಗಳ ಸುಗ್ರೀವಾಜ್ಞೆ ́ಗೆ ರಾಜ್ಯಪಾಲರು ಇತ್ತೀಚೆಗೆ ಸಹಿ ಹಾಕಿದ್ದರು.

ರಾಜ್ಯದಲ್ಲಿ ಪ್ಲಾಟ್‌ಫಾರಂ ಆಧಾರಿತ ಗಿಗ್‌ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ಸಂಬಂಧ ಪ್ರತ್ಯೇಕ ಮಂಡಳಿ ಸ್ಥಾಪನೆಗೆ ಸರ್ಕಾರದ ಹಾದಿ ಇದರಿಂದ ಸುಗಮವಾಗಿದೆ.

ಗಿಗ್‌ ಕಾರ್ಮಿಕರಿಗೆ ಅಪಘಾತ ಪರಿಹಾರ, ಶೈಕ್ಷಣಿಕ ಸಹಾಯಧನ, ವಸತಿ ಸೌಲಭ್ಯ ಸೇರಿದಂತೆ ಹಲವಾರು ಸಾಮಾಜಿಕ ಸೇವಾ ಸೌಲಭ್ಯಗಳನ್ನು ಈ ಮಂಡಳಿಯ ಮೂಲಕ ಒದಗಿಸಲು ಸರ್ಕಾರ ಚಿಂತನೆ ನಡೆಸಿದೆ.

ಅಗ್ರಿಗೇಟರ್‌ ಸಂಸ್ಥೆಗಳು ವಹಿವಾಟಿನಿಂದ ಪಡೆದ ಆದಾಯದಿಂದ ಮಂಡಳಿಯಲ್ಲಿ ನಿಧಿ ಸ್ಥಾಪಿಸಿ ಅದನ್ನು ಗಿಗ್‌ ಕಾರ್ಮಿಕರ ಕಲ್ಯಾಣಕ್ಕೆ ಬಳಸುವುದು ಸುಗ್ರೀವಾಜ್ಞೆಯ ಮುಖ್ಯ ಉದ್ದೇಶವಾಗಿದೆ.

ರಾಜ್ಯಪಾಲರ ಭೇಟಿ ವೇಳೆ ಕಾರ್ಮಿಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಡಾ. ಎನ್‌ ವಿ ಪ್ರಸಾದ್‌, ಕಾರ್ಮಿಕ ಆಯುಕ್ತರಾದ ಡಾ. ಎಚ್‌ ಎನ್‌ ಗೋಪಾಲ ಕೃಷ್ಣ, ಕಾರ್ಮಿಕ ಇಲಾಖೆಯ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Latest News

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀಟ್

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕು ಬಣಜಿಗ ಸಮಾಜದ ನೂತನ ಕಾರ್ಯಕಾರಿಣಿ ಮಂಡಳಿಯನ್ನು ಸರ್ವಾನುಮತದಿಂದ ಭಾನುವಾರ ಆಯ್ಕೆ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ರಾಯಚೂರು,ಜೂ 15- ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಡೆದಿರುವ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ನಾರಾಯಣಪುರ: ಕೊಡೇಕಲ್ ಪಟ್ಟಣದ ಸರರ್ಕಾರಿ ಪ್ರೌಢಶಾಲೆಯಲ್ಲಿ ವಲಯ ವ್ಯಾಪ್ತಿಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಹಿರಿಯ, ಕಿರಿಯ ಪ್ರಾಥಮಿಕ ಶಾಲೆಗಳ ಮುಖ್ಯಶಿಕ್ಷಕರ ಸಭೆ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸುರುಪುರ ಬಿಇಒ ಯಲ್ಲಪ್ಪ ಕಾಡ್ಲೂರ ಮಾತನಾಡಿ ಮಕ್ಕಳಿಗೆ ಕಲಿಕೆಗೆ ಪೂರಕವಾದ ವಾತವರಣ ನಿರ್ಮಾಣದ ಜೊತೆಗೆ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸುವದು ಹಾಗೂ ಕ್ಲಸ್ಟರ್ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಸೇರಿ ಅನುದಾನಿತ ಶಾಲೆಗಳಲ್ಲಿ ಸಿಗುವ ಬಿಸಿಯೂಟ, ಸಮವಸ್ತ್ರ ಪಠ್ಯಪುಸ್ತಕಗಳ ವಿತರಣೆ ಸೇರಿ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಮುದ್ದೇಬಿಹಾಳ : ಜನೌಷಧಿ ಕೇಂದ್ರಗಳು, ಉಚಿತ ಅಕ್ಕಿ ಕೊಡುವ ಯೋಜನೆ, ಆಯುಷ್ಮಾನ್ ಆರೋಗ್ಯ ಕಾರ್ಡ ಇಂತಹ ನೂರಾರು ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಮಾಡಲಾಗಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಬಿಜೆಪಿ ಸರ್ಕಾರ ಕೇಂದ್ರದಲ್ಲಿ 11 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಐದು ಲಕ್ಷ ರೂ.ಗಳವರೆಗೆ ಆರೋಗ್ಯ ವಿಮೆ ಕಲ್ಪಿಸುವ ಯೋಜನೆಯನ್ನು ಮೋದಿ