Announcement for Caste Census: Nadahalli is happy with the Centre's decision

ಜಾತಿ ಗಣತಿಗೆ ಘೋಷಣೆ : ಕೇಂದ್ರದ ನಿರ್ಧಾರಕ್ಕೆ ನಡಹಳ್ಳಿ ಹರ್ಷ

ಜಾತಿ ಗಣತಿಗೆ ಘೋಷಣೆ : ಕೇಂದ್ರದ ನಿರ್ಧಾರಕ್ಕೆ ನಡಹಳ್ಳಿ ಹರ್ಷ

ಮುದ್ದೇಬಿಹಾಳ : ದೇಶದ ಜಾತಿ, ಜನಗಣತಿ ಆಗಬೇಕು ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿರುವುದಕ್ಕೆ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಸ್ವಾಗತಿಸಿದ್ದಾರೆ.

ಪಟ್ಟಣದ ದಾಸೋಹ ನಿಲಯದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಪೂರ್ವದಲ್ಲಿ ನಡೆದಿದ್ದ ಜಾತಿ ಜನಗಣತಿ ಇದುವರೆಗೂ ಆಗಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದರು.

ಯಾವುದೇ ವರ್ಗಕ್ಕೆ ಅನ್ಯಾಯವಾಗದ ರೀತಿ ಜಾತಿ ಗಣತಿಗೆ ಮುಂದಾಗಲಿದ್ದಾರೆ. ಜಾತಿ ಜನಗಣತಿ ಮಾಡುವ ಅಧಿಕಾರ ಕೇವಲ ಕೇಂದ್ರ ಸರ್ಕಾರಕ್ಕೆ ಮಾತ್ರ ಇದ್ದು ರಾಜ್ಯ ಸರ್ಕಾರಕ್ಕೆ ಈ ಅಧಿಕಾರ ಇಲ್ಲ. ಆದರೆ, ಸಿಎಂ ಸಿದ್ದರಾಮಯ್ಯ ಸರ್ಕಾರ ವೋಟ್ ಬ್ಯಾಂಕ್‌ಗಾಗಿ, ಸ್ವಾರ್ಥಕ್ಕಾಗಿ ಜಾತಿ ಜನಗಣತಿ ಮಾಡಿಸಿದ್ದಾರೆ ಎಂದು ಆರೋಪಿಸಿದರು.

ದೇಶವನ್ನು 65 ವರ್ಷಗಳ ಕಾಲ ಆಳಿದ ಕಾಂಗ್ರೆಸ್ ಪಕ್ಷ ರಾಜಕೀಯ ಅಸ್ತ್ರವನ್ನಾಗಿ ಜಾತಿ ಗಣತಿಯನ್ನು ಬಳಕೆ ಮಾಡಿಕೊಂಡಿತ್ತು. ಜಾತಿ ಉಪಜಾತಿಗಳ ಸಮೀಕ್ಷೆಯ ನೆಪದಲ್ಲಿ ಹಿಂದೂ ಹಿಂದೂಗಳ ಮಧ್ಯೆ ವ್ಯತ್ಯಾಸವನ್ನು ತಂದಿಟ್ಟು ಸಮಾಜದಲ್ಲಿ ಒಡಕನ್ನುಂಟು ತಂದು ರಾಜಕೀಯ ಕುತಂತ್ರವನ್ನು ಮಾಡಿದೆ ಎಂದು ಆರೋಪಿಸಿದರು.

ಹಿಂದೂ ಸಮಾಜವನ್ನು ಒಗ್ಗೂಡಿಸಬೇಕು ಎಂಬ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಜಣಗಣತಿಯೊಂದಿಗೆ ಜಾತಿ ಗಣತಿ ದಿಟ್ಟ ನಿರ್ಧಾರವನ್ನು ಕೈಗೊಂಡಿದೆ. ಇದು ಕಾಂಗ್ರೆಸ್ಸಿಗರಿಗೆ ನುಂಗಲಾರದ ತುತ್ತಾಗಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಗಂಗಾಧರ ನಾಡಗೌಡ, ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಸೋಮನಗೌಡ ಬಿರಾದಾರ, ವಕೀಲ ಎಂ. ಆರ್. ಪಾಟೀಲ, ಹಣಮಂತ ನಲವಡೆ, ರಾಜಶೇಖರ ಹೊಳಿ, ಸಂಜೀವ ಬಾಗೇವಾಡಿ ಇದ್ದರು.

ದೇಶದಲ್ಲಿರುವುದು ಪಾಕಿಸ್ತಾನ ಕಾಂಗ್ರೆಸ್- ನಡಹಳ್ಳಿ ಟೀಕೆ

ಪೆಹಲ್ಗಾಮ್ ಘಟನೆ ಬಳಿಕ ಕಾಶ್ಮೀರದಲ್ಲಿರುವ ಮುಸ್ಲಿಂ ಜನಾಂಗದವರೇ ಕೇಂದ್ರ ಸರ್ಕಾರದ ಬೆಂಬಲಕ್ಕೆ ನಿಂತಿದ್ದು ಉಗ್ರರನ್ನು ಸದೆಬಡೆಯುವಂತೆ ಒತ್ತಾಯಿಸುತ್ತಿದ್ದಾರೆ.ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಸಿಎಂ ಸಿದ್ಧರಾಮಯ್ಯ ಯುದ್ಧ ಬೇಡ ಎನ್ನುತ್ತಿದ್ದರೆ ಸಚಿವ ಲಾಡ್, ಬಿ. ಕೆ. ಹರಿಪ್ರಸಾದ, ಸಚಿವ ತಿಮ್ಮಾಪೂರ ತಮ್ಮದೇ ಧಾಟಿಯಲ್ಲಿ ಈ ದಾಳಿಯ ಕುರಿತು ಮಾತನಾಡಿ ತಮ್ಮ ಸಣ್ಣತವನ್ನು ತೋರಿಸುತ್ತಿದ್ದಾರೆ ಎಂದು ನಡಹಳ್ಳಿ ಟೀಕಿಸಿದರು. ಸಿಎಂ ಆಗಿರುವ ಸಿದ್ಧರಾಮಯ್ಯನವರಂತಹ ಹಿರಿಯ ರಾಜಕಾರಣಿ ಇಂತಹ ಹೇಳಿಕೆಗಳನ್ನು ಕೊಡುವುದು ದೇಶದ್ರೋಹವಾಗುತ್ತದೆ ಎಂದು ಹೇಳಿದರು.

ದೇಶದಲ್ಲಿರುವ ಮುಸ್ಲಿಂ ಬಾಂಧವರು ಪಾಕಿಸ್ತಾನದವರು ಮಾಡುತ್ತಿರುವ ಭಯೋತ್ಪಾದಕ ದಾಳಿಗಳನ್ನು ಬೀದಿಗಿಳಿದು ಖಂಡಿಸಬೇಕು. ಕೇಂದ್ರ ಸರ್ಕಾರಕ್ಕೆ ಭಯೋತ್ಪಾದನೆ ಮಟ್ಟ ಹಾಕಲುಬೇಕಾದ ನೈತಿಕ ಬೆಂಬಲ ಮುಸ್ಲಿಂರು ನೀಡಬೇಕು.

ದೇಶದಲ್ಲಿರುವ ಕಾಂಗ್ರೆಸ್ ಭಾರತದ ಕಾಂಗ್ರೆಸ್ ಆಗಿ ಉಳಿದಿಲ್ಲ. ಅದು ಪಾಕಿಸ್ತಾನಿಯರ ಕಾಂಗ್ರೆಸ್ ಆಗಿದೆ ಎಂದು ನಡಹಳ್ಳಿ ಟೀಕಿಸಿದರಲ್ಲದೇ, ಪೆಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ ಉಗ್ರರಿಗೆ ಸೇರಿದಂತೆ ಇಷ್ಟು ವರ್ಷಗಳಲ್ಲಿ ಪಾಕಿಸ್ತಾನ ಮಾಡಿರುವ ಉಗ್ರರ ದಾಳಿಗಳಿಗೆ ಪ್ರತಿಯಾಗಿ ಎಲ್ಲವನ್ನೂ ಲೆಕ್ಕ ಹಾಕಿ ಬಡ್ಡಿ ಸಮೇತ ಕೇಂದ್ರ ಸರ್ಕಾರ, ಸೇನೆ ವಾಪಸ್ ತೀರಿಸಬೇಕು ಎಂದು ಹೇಳಿದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ