ಬೆಂಗಳೂರು: ವ್ಯಕ್ತಿಯೋರ್ವನ ಕೊಲೆ ಆರೋಪದಡಿಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಸೆ.27ಕ್ಕೆ ವಿಚಾರಣೆ ಮುಂದೂಡಿ ಆದೇಶಿಸಿದೆ.
ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada
ಶನಿವಾರ ಈ ಬಗ್ಗೆ ವಿಚಾರಣೆ ನಡೆಸಿದ್ದ ಬೆಂಗಳೂರಿನ 57ನೇ CCH ಕೋರ್ಟ್, ಇಂದಿಗೆ ಅರ್ಜಿ ವಿಚಾರಣೆ ಮುಂದೂಡಿತ್ತು. ಸದ್ಯ ಬಳ್ಳಾರಿ ಜೈಲಿನಲ್ಲಿರುವ ದರ್ಶನ್, ಪ್ರಕರಣದಲ್ಲಿ ಮೊದಲ ಬಾರಿಗೆ ಅವರು ಜಾಮೀನು ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾ ಜೈ.ಶಂಕರ್ ಅವರು ಎಸ್‌ಪಿಪಿಗೆ ಆಕ್ಷೇಪಣೆ ಸಲ್ಲಿಸುವ ನೋಟಿಸ್ ನೀಡಿ ಮುಂದಿನ ವಿಚಾರಣೆಯನ್ನು ಮುಂದೂಡಿ ಆದೇಶ ನೀಡಿದ್ದಾರೆ. ಹತ್ಯೆ ಕೇಸ್‌ನಲ್ಲಿ ದರ್ಶನ್ ಜೈಲು ಸೇರಿ 105 ದಿನಗಳ ನಂತರದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಇದೇ ಪ್ರಕರಣದಲ್ಲಿ ಕೇಸ್‌ನಲ್ಲಿ ಮೊದಲ ಬಾರಿಗೆ ಒಟ್ಟು 17 ಆರೋಪಿಗಳ ಪೈಕಿ ಓರ್ವ ಆರೋಪಿಗೆ ಇದೇ ಮೊದಲ ಸಲ ಬೇಲ್ ಸಿಕ್ಕಿದೆ.
ಪ್ರಕರಣದ A-16 ಕೇಶವ ಮೂರ್ತಿ ಎಂಬುವವನಿಗೆ ಹೈಕೋರ್ಟ್ ನ್ಯಾಎಸ್.ವಿಶ್ವಜಿತ್ ಶೆಟ್ಟಿ ಅವರ ಪೀಠವು ಓರ್ವರ ಶೂರಿಟಿ ಮೇರೆಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಇದನ್ನೂ ಓದಿ: ಕುಸಿದ ಅಂಗನವಾಡಿ ಚಾವಣಿ ಅಪಾಯದಿಂದ ಪಾರದ ಮಕ್ಕಳು