Apply under various schemes including Ganga Kalyan: Kashappan's call

ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಯಡಿ ಅರ್ಜಿ‌ ಸಲ್ಲಿಸಿ: ಕಾಶಪ್ಪನವರ ಕರೆ (ವಿಡಿಯೋ ನೋಡಿ)

ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಯಡಿ ಅರ್ಜಿ‌ ಸಲ್ಲಿಸಿ: ಕಾಶಪ್ಪನವರ ಕರೆ (ವಿಡಿಯೋ ನೋಡಿ)

ಬೆಂಗಳೂರು: 2024-25 ನೇ ಸಾಲಿಗೆ ವೀರಶೈವ-ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರ (ಪ್ರವರ್ಗ-IIIಬಿ) ಅಭಿವೃದ್ಧಿಗಾಗಿ ಅರ್ಜಿ ಕರೆಯಲಾಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಶೈಕ್ಷಣಿಕ ಸಾಲ ಯೋಜನೆ (ಬಸವಬೆಳಗು ಮತ್ತು ವಿದೇಶ ವಿದ್ಯಾವಿಕಾಸ), ಜೀವಜಲ (ಗಂಗಾಕಲ್ಯಾಣ), ಸ್ವಯಂ ಉದ್ಯೋಗ ಯೋಜನೆಗಳು (ಕಾಯಕಕಿರಣ, ಸ್ವಾವಲಂಭಿ ಸಾರಥಿ, ವಿಭೂತಿ ನಿರ್ಮಾಣ ಘಟಕ, ಭೋಜನಾಲಯ ಕೇಂದ್ರ ಮತ್ತು ಸ್ವಯಂ ಉದ್ಯೋಗ ಬ್ಯಾಂಕ್‌ ಸಹಯೋಗದೊಂದಿಗೆ) ಗಳಿಗೆ ಸೇವಾಸಿಂಧು ತಂತ್ರಾಂಶದ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಫಲಾಪೇಕ್ಷಿಗಳು ಗ್ರಾಮ ಒನ್‌/ ಬೆಂಗಳೂರು ಒನ್‌/ ಕರ್ನಾಟಕ ಒನ್‌ ನಾಗರೀಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕಾಗಿರುತ್ತದೆ. 2023-24 ನೇ ಸಾಲಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾಗದವರು ಆದೇ ಯೋಜನೆಗೆ ಈ ವರ್ಷ ಮರುಅರ್ಜಿ ಸಲ್ಲಿಸುವ ಅಗತ್ಯತೆ ಇರುವುದಿಲ್ಲ.

ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಯಡಿ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ತರಬೇತಿಯನ್ನು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾದ ITIs, GTTC, KGTTI, ATDC, VTU ಮೂಲಕ ತರಬೇತಿಯನ್ನು ಪಡೆಯಲು ಅರ್ಜಿದಾರರು https://www.kaushalkar.com/ ಜಾಲತಾಣದೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ https://kvldcl.karnataka.gov.in ಅಥವಾ ನಿಗಮದ ದೂರವಾಣಿ ಸಂಖ್ಯೆ 080 22865522/ 9900012351 ಅನ್ನು ಸಂಪರ್ಕಿಸುವುದು ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ಕಛೇರಿಗಳನ್ನು ಸಂಪರ್ಕಿಸಬಹುದಾಗಿದೆ.

ಇದನ್ನೂ ಓದಿ: CM Siddaramaiahಗೆ ಖಾಸಗಿ ಸುದ್ದಿವಾಹಿನಿ ಅವಹೇಳನ..! ಗ್ರಹಚಾರ ಬಿಡಿಸಿದ ಭವ್ಯ ನರಸಿಂಹಮೂರ್ತಿ (ವಿಡಿಯೋ ವೈರಲ್)

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15.09.2024

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು