ಮುದ್ದೇಬಿಹಾಳ : ಪಟ್ಟಣದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ) ಮುದ್ದೇಬಿಹಾಳ ಘಟಕಕ್ಕೆ ನೂತನ ವ್ಯವಸ್ಥಾಪಕರಾಗಿ ವರ್ಗಾವಣೆಗೊಂಡು ಸೋಮವಾರ ಅಧಿಕಾರ ಸ್ವೀಕರಿಸಿದ ಅಶೋಕಕುಮಾರ ಭೋವಿ ಅವರನ್ನು ಬಿದರಕುಂದಿ ಆರ್‌ಎಂಎಸ್‌ಎ ಶಾಲೆಯ ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಲಾಯಿತು.
ಎಸ್‌ಡಿಎಂಸಿ ಸದಸ್ಯ ಬಂದೇನವಾಜ್ ಕುಮಸಿ, ಮುಖ್ಯಗುರು ಅನೀಲಕುಮಾರ ರಾಠೋಡ, ಎಚ್.ಆರ್. ಬಾಗವಾನ ಸೇರಿದಂತೆ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಬಿಸಿಯೂಟ ಯೋಜನೆಯ ಸಹಾಯಕ ನಿರ್ದೇಶಕ ಎಂ.ಎಂ.ಬೆಳಗಲ್ ಮಾತನಾಡಿ, ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಸುಧಾರಣೆ ಹಾಗೂ ವಿದ್ಯಾರ್ಥಿಗಳ ಸುರಕ್ಷಿತ ಪ್ರಯಾಣಕ್ಕೆ ಕೆಕೆಆರ್‌ಟಿಸಿ ಮಹತ್ವದ ಪಾತ್ರ ವಹಿಸುತ್ತಿದ್ದು, ನೂತನ ವ್ಯವಸ್ಥಾಪಕರ ನೇತೃತ್ವದಲ್ಲಿ ಘಟಕವು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿ ಎಂದು ಹಾರೈಸಿದರು.





