Astrology: ನಿಮಗೆ ಪ್ರಭಾವಿ ವ್ಯಕ್ತಿಗಳ ಬೆಂಬಲ.. ದಿನ ಭವಿಷ್ಯ: ಮಂಗಳವಾರ, ಆಗಸ್ಟ್ 20, 2024, ದೈನಂದಿನ ರಾಶಿ ಭವಿಷ್ಯ

Astrology: ನಿಮಗೆ ಪ್ರಭಾವಿ ವ್ಯಕ್ತಿಗಳ ಬೆಂಬಲ.. ದಿನ ಭವಿಷ್ಯ: ಮಂಗಳವಾರ, ಆಗಸ್ಟ್ 20, 2024, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಹೆಚ್ಚು ಪ್ರಭಾವಿ ವ್ಯಕ್ತಿಗಳ ಬೆಂಬಲವು ನಿಮ್ಮ ನೈತಿಕತೆಗೆ ದೊಡ್ಡ ಉತ್ತೇಜನವನ್ನು ನೀಡುತ್ತದೆ. ಅನುಭವಿಯೊಂದಿಗೆ ಚರ್ಚಿಸುವ ಮೂಲಕ ಹೂಡಿಕೆ ಮಾಡಿದರೆ ನೀವು ಉತ್ತಮ ಹಣವನ್ನುಗಳಿಸುವಿರಿ. (Astriology) ಸ್ವಂತ ಕೆಲಸವನ್ನು ಆರಂಭಿಸಲು ಚಿಂತಿಸಿ.ಇದು ನಿಮಗೆ ಉತ್ತಮ ಲಾಭವನ್ನು ತಂದುಕೊಡುತ್ತದೆ.ಆದರೆ ಇದರಲ್ಲಿ ನಿಮ್ಮ ಶ್ರಮ ಮತ್ತು ಶ್ರದ್ಧೆ ಮುಖ್ಯವಾಗಿರುತ್ತದೆ.(ಭಕ್ತಿಯಿಂದ ಶ್ರೀ ಉಮಾಮಹೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ:ಯಾವುದಾದರು ಕ್ರೀಡೆ ಯಲ್ಲಿ ನಿಮ್ಮನ್ನು ತೊಡಗಿಸಿ ಕೊಳ್ಳಿ. ಶ್ರಮ ವಹಿಸಿ ಕೆಲಸ ಮಾಡುವುದರಿಂದ ಘನತೆ ಗೌರವ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ. ಹಣ ಮತ್ತು ಸಂಪತ್ತು ಸಂಬಂಧಗಳಷ್ಟು ದೊಡ್ಡದಲ್ಲ ಎಂದು ಅರ್ಥಮಾಡಿ ಕೊಳ್ಳಿ.(ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ:ನಿಮ್ಮ ನಿಜವಾದ ಸಾಮಾರ್ಥ್ಯಗಳನ್ನು ಅರಿತುಕೊಳ್ಳಿ. ಏಕೆಂದರೆ ನಿಮಗೆ ಶಕ್ತಿಯ ಕೊರತೆಯಿಲ್ಲ. ಆದರೆ ನಿಮ್ಮ ಶಕ್ತಿಯನ್ನು ನಿಮ್ಮ ಸುತ್ತಲು ಜನ ಅನುಮಾನಿಸುತ್ತಾರೆ.ನಿಮ್ಮ ಶಕ್ತಿ ಸಾಮರ್ಥ್ಯವನ್ನು ಅರ್ಥ ಮಾಡಿಸುವುದು ಉತ್ತಮ.(ಭಕ್ತಿಯಿಂದ ಶ್ರೀ ಮೃತ್ಯುಂಜಯ ರುದ್ರ ದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ:ವಿವಿಧ ಮೂಲಗಳಿಂದ ಲಾಭದಾಯಕ ಯೋಗವಿದೆ. ಕೆಲಸದಲ್ಲಿ ಶತ್ರುಗಳು ಹೆಚ್ಚಾಗಬಹುದು.
ಇತರರಿಗೆ ಮನವರಿಕೆ ಮಾಡುವ
ನಿಮ್ಮ ಕೌಶಲ್ಯ ಗುಣ ಉತ್ತಮ ಲಾಭಾಂಶವನ್ನು ನೀಡುತ್ತದೆ.
(ಭಕ್ತಿಯಿಂದ ಶ್ರೀ ಅರ್ಧನಾರೀಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ:ಹಣ ಹೂಡಿಕೆ ಮತ್ತು ಉಳಿತಾಯದ ಬಗ್ಗೆ ಇಂದು ನಿಮ್ಮ ಕುಟುಂಬದ ಸದಸ್ಯರ ಸಲಹೆ ಪಡೆಯುವುದು ಉತ್ತಮ. ಅವರ ಸಲಹೆಯು ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಕೆಲವು ಜನರು ತಮ್ಮ ಸಾಮರ್ಥ್ಯಕ್ಕಿಂತ ಹೆಚ್ಚಿನ ಆಸೆಯನ್ನು ಹೊಂದಿರುತ್ತಾರೆ.(ಭಕ್ತಿಯಿಂದ ಶ್ರೀ ಮಂಜುನಾಥ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ:ನಿಮ್ಮ ಆತ್ಮವಿಶ್ವಾಸದಿಂದ ಸುತ್ತಮುತ್ತಲಿನ ಜನರನ್ನು ಮೆಚ್ಚಿಸುವ ಸಾಧ್ಯತೆಯಿದೆ. ವ್ಯಾಪಾರ ಸಾಲಕ್ಕಾಗಿ ನಿಮ್ಮನ್ನು ಸಂಪರ್ಕಿಸುವವರನ್ನು ನಿರ್ಲಕ್ಷಿಸಿ. ಪೋಷಕರ ಮುಂದೆ ಗುಪ್ತವಿಚಾರಗಳನ್ನು ಬಹಿರಂಗಪಡಿಸಲು ಇದು ಸರಿಯಾದ ಸಮಯ.ಯಾವುದೇ ಕೆಲಸ ಕೈಗೊಂಡರೂ ಅದನ್ನು ಸಾಧಿಸಲು ಶ್ರಮಿಸುವಿರಿ.(ಭಕ್ತಿಯಿಂದ ಶ್ರೀ ಸೋಮೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.) (Astrology)

ತುಲಾ ರಾಶಿ: ನಿಮಗೆ ಹಣದ ಅವಶ್ಯಕತೆ ಇರುವಾಗ ಹಣದ ಬೆಲೆ ನಿಮಗೆ ತಿಳಿಯಲಿದೆ. ಇದರಿಂದ ಯಾವುದೇ ಪ್ರಯೋಜನ ವಾಗುವುದಿಲ್ಲ. ಹಣ ಖರ್ಚು ಮಾಡುವ ಮುನ್ನ ಯೋಚಿಸಿ. ನಿಮ್ಮ ಕುಟುಂಬದ ಸದಸ್ಯರು ನೀಡುವ ಸಲಹೆಯನ್ನು ಅನುಸರಿಸಿ.(ಭಕ್ತಿಯಿಂದ ಶ್ರೀ ಕಾಲಭೈರವೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ನಿಮ್ಮ ಆಕರ್ಷಕ ನಡವಳಿಕೆಯು ಇಂದು ಎಲ್ಲರ ಗಮನ ಸೆಳೆಯುತ್ತದೆ. ಇಲ್ಲಿಯವರೆಗೆ ಹೆಚ್ಚು ಯೋಚಿಸದೆ ಹಣವನ್ನು ಖರ್ಚು ಮಾಡುತ್ತಿದ್ದರೆ ಅದನ್ನು ತಪ್ಪಿಸಿ. ಜೀವನದಲ್ಲಿ ಅದರ ಮಹತ್ವವನ್ನು ಅರ್ಥಮಾಡಿ ಕೊಳ್ಳಿ. ಏಕೆಂದರೆ ತುರ್ತು ಅಗತ್ಯವಿದ್ದಾಗ ನಿಮಗೆ ಹಣದ ಮಹತ್ವ ಅರ್ಥ ವಾಗುತ್ತದೆ.(ಭಕ್ತಿಯಿಂದ ಶ್ರೀ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ:ಸಾಮಾನ್ಯ ಜ್ಞಾನ ಮತ್ತು ತಿಳುವಳಿಕೆಯೊಂದಿಗೆ ನಿಮ್ಮ ನಿರಂತರ ಪ್ರಯತ್ನವು ನಿಮ್ಮ ಯಶಸ್ಸನ್ನು ಅಭಿವೃದ್ಧಿ ಪಡಿಸುತ್ತದೆ. ಇದಕ್ಕಾಗಿ ನಿಮ್ಮ ತಾಳ್ಮೆ ಮುಖ್ಯ ವಾಗುತ್ತದೆ.ಊಹಾಪೋಹ ಅಥವಾ ಅನಿರೀಕ್ಷಿತ ಲಾಭಗಳ ಮೂಲಕ ಹಣಕಾಸಿನ ಸ್ಥಿತಿ ಸುಧಾರಿಸುತ್ತದೆ. (ಭಕ್ತಿಯಿಂದ ಶ್ರೀ ಸೋಮೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಕೆಲಸದಲ್ಲಿ ಶ್ರಮವಹಿಸಿ ಕೆಲಸ ಮಾಡುವುದು ನಿಮ್ಮನ್ನು ಕೊನೆವರೆಗೂ ಕೈ ಹಿಡಿಯುತ್ತದೆ. ನೀವು ಹಣಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಭಾಗಿಯಾಗಿದ್ದರೆ ನ್ಯಾಯಾಲಯವು ಇಂದು ನಿಮ್ಮ ಪರವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ.ಇದು ನಿಮಗೆ ಆರ್ಥಿಕವಾಗಿ ಪ್ರಯೋಜನವನ್ನು ನೀಡುತ್ತದೆ.(ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಕುಂಭ ರಾಶಿ:ಕೆಲಸದ ಕ್ಷೇತ್ರದಲ್ಲಿ ನೀವು ಉತ್ತಮ ಲಾಭವನ್ನು ಪಡೆಯಬಹುದು. ನೀವು ಮಾಡುವ ಯಾವುದೇ ಕೆಲಸವು ತಕ್ಷಣವೇ ಫಲಿತಾಂಶವನ್ನು ನೀಡುತ್ತದೆ. ನೀವು ಮಕ್ಕಳಿಗಾಗಿ ಯಾವುದೇ ಹೂಡಿಕೆ ಅಥವಾ ಆಸ್ತಿಯನ್ನು ತೆಗೆದುಕೊಳ್ಳ ಬಹುದು.(ಭಕ್ತಿಯಿಂದ ಮನೋ ನಿಯಾಮಿಕ ಶ್ರೀರುದ್ರ ದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ:ನೀವು ಅದೃಷ್ಟದ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಹೊಸ ಗುರಿಗಳನ್ನು ಹೊಂದಲು ಈ ದಿನವು ಮಂಗಳ ಕರವಾಗಿದೆ. ಈಗ ಆದಾಯ ಹೆಚ್ಚಿಸುವ ಪ್ರಯತ್ನಗಳು ಸಫಲ ವಾದಂತೆ ಕಾಣುತ್ತಿದೆ.ನೀವು ಹಳೆಯ
ಸಾಲಗಳಿಂದ ಮುಕ್ತರಾಗುತ್ತೀರಿ.(ಭಕ್ತಿಯಿಂದ ಶ್ರೀ ಚಂದ್ರಮೌಳೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ : ಪಾಡ್ಯಮಿ
ನಕ್ಷತ್ರ : ಶತಭಿಷ ನಕ್ಷತ್ರ.

ರಾಹುಕಾಲ:03:00PM ರಿಂದ 04:30PM
ಗುಳಿಕಕಾಲ:12:00PM ರಿಂದ 01:30PM
ಯಮಗಂಡಕಾಲ:09:00AM ರಿಂದ 10:30AM

Latest News

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಇಳಕಲ್ಲ: ತಾಲೂಕಿನ ಗಡಿಸುಂಕಾಪುರ ಗ್ರಾಮದ ಹತ್ತಿರ ಇಳಕಲ್ ದತ್ತ ಬರುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಮುದ್ದೇಬಿಹಾಳ : ಪಟ್ಟಣದ ಏಪಿಎಂಸಿಯ ಜಾಗೆಯ ಕುರಿತು ಕಲಬುರ್ಗಿ ಉಚ್ಛ ನ್ಯಾಯಾಲಯ ಸರ್ವೆ ನಂ.98ಕ್ಕೆ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ,

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ ಪಟ್ಟಣದ ಶ್ರೀ ಅಭಿನವ ತಿರುಪತಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ 11 ನೇ ರಾಜ್ಯ ಪೆಂಕಾಕ್ ಸಿಲಾಸ್ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳಾದ ಶಕುಂತಲಾ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ )25 ರಿಂದ 30 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ವಿಕ್ರಾಂತ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ ) 20 ರಿಂದ 25 ಕೆಜಿ ವಿಭಾಗದಲ್ಲಿ ಕಂಚಿನ ಪದಕ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ ಬೇಕು. ಪ್ರತಿಯೊಬ್ಬ ನಾಗರಿಕರಲ್ಲಿಯೂ ಇದು ನಮ್ಮ ನಗರ, ನಮ್ಮ ಓಣಿ, ನನ್ನ ಮನೆ ಎಂಬ ಹೆಮ್ಮೆ ಮೂಡಿದಾಗ ಮಾತ್ರ ಸ್ವಚ್ಛ ನಗರ ಹೊಂದಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಹೆಮ್ಮ ಮೂಡುವಂತೆ ನಾವು ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡ ಜಿಲ್ಲಾಡಳಿತ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ