Astrology: ನೀವೂ ಅನ್ಯಾಯದ ವಿರುದ್ಧ ಧ್ವನಿ ಎತ್ತಿ.. ದಿನ ಭವಿಷ್ಯ; ಗುರುವಾರ, ಆಗಸ್ಟ್ 22, 2024, ದೈನಂದಿನ ರಾಶಿ ಭವಿಷ್ಯ

Astrology: ನೀವೂ ಅನ್ಯಾಯದ ವಿರುದ್ಧ ಧ್ವನಿ ಎತ್ತಿ.. ದಿನ ಭವಿಷ್ಯ; ಗುರುವಾರ, ಆಗಸ್ಟ್ 22, 2024, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಆರ್ಥಿಕ ರಂಗದವರಿಗೆ ಇಂದು ಮಿಶ್ರ ದಿನವಾಗಿರುತ್ತದೆ. ಕುಟುಂಬದ ಸದಸ್ಯರಿಗಾಗಿ ನಿಮ್ಮ ಬಿಡುವಿಲ್ಲದ ದಿನಚರಿಯಿಂದ ಸ್ವಲ್ಪ ಸಮಯವನ್ನು ತೆಗೆದುಕೊಳ್ಳಿ.(ಭಕ್ತಿಯಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು. Astrology)

ವೃಷಭ ರಾಶಿ: ಸಾಮರಸ್ಯವನ್ನು ಕಾಪಾಡಿಕೊಳ್ಳುವುದು ಉತ್ತಮ ವಾಗಿರುತ್ತದೆ.ನಿಮ್ಮ ಆರ್ಥಿಕ ಸ್ಥಿತಿಯು ಮತ್ತಷ್ಟು ಅಭಿವೃದ್ಧಿ ಪಡೆಯುತ್ತದೆ.(ಭಕ್ತಿಯಿಂದ ಶ್ರೀ ಉಮಾ ಮಹೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ವೃತ್ತಿ ಕ್ಷೇತ್ರಕ್ಕನುಗುಣ ವಾಗಿ ಕೆಲಸದಲ್ಲಿ ಪ್ರಗತಿಯನ್ನು ಸಾದಿಸುವರು.ನಿಮ್ಮ ಬೆಲೆಬಾಳುವ ವಸ್ತುಗಳ ಬಗ್ಗೆ ಹೆಚ್ಚು ಜಾಗರೂಕರಾಗಿರಿ.(ಭಕ್ತಿಯಿಂದ ಶ್ರೀ ಮೃತ್ಯುಂಜಯ ರುದ್ರ ದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಎಲ್ಲಾ ವಿಚಾರದಲ್ಲಿ ಮೌನ ಒಳ್ಳೆಯದಲ್ಲ. ಅನ್ಯಾಯದ ವಿರುದ್ಧ ಧ್ವನಿ ಎತ್ತಿ. ಇಂದು ಆಕಸ್ಮಿಕ ಪ್ರಯಾಣದ ಸಾಧ್ಯತೆಗಳಿವೆ.(ಭಕ್ತಿಯಿಂದ ಶ್ರೀ ಮಂಜುನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ವೃತ್ತಿ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯುವ ಯೋಗವಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ವಿಯಾಗು ವಿರಿ.(ಭಕ್ತಿಯಿಂದ ಶ್ರೀ ಕಾಲ ಭೈರವೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು. Astrology)

ಕನ್ಯಾ ರಾಶಿ: ಇಂದು ವ್ಯಾಪಾರಸ್ಥರು ಮೋಸ ಹೋಗುವ ದಿನ. ಆರ್ಥಿಕ ರಂಗದಲ್ಲಿ ಎಚ್ಚರಿಕೆಯಿಂದ ವ್ಯವಹಾರಗಳನ್ನು ಮಾಡಿ. (ಭಕ್ತಿಯಿಂದ ಶ್ರೀ ಕೇದಾರನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ವ್ಯಾಪಾರಿಗಳು ಇಂದು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು.ನಿಮ್ಮ ಕಠಿಣ ಪರಿಶ್ರಮ ಯಶಸ್ವಿಯಾಗುತ್ತದೆ ಮತ್ತು ನಿಮ್ಮ ವ್ಯಾಪಾರವು ಬೆಳೆಯುತ್ತದೆ.(ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಹಣಕ್ಕೆ ಸಂಬಂಧಿಸಿದ ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳಲು ಈ ಸಮಯವು ಅನುಕೂಲಕರವಾಗಿದೆ.ಈ ವಿಷಯದ ಬಗ್ಗೆ ಆಪ್ತ ಸ್ನೇಹಿತ ಅಥವಾ ಕುಟುಂಬದ ಸದಸ್ಯರ ಸಲಹೆ ಪಡೆಯಿರಿ.(ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಧನಸ್ಸು ರಾಶಿ: ವ್ಯಾಪಾರಸ್ಥರ ಪ್ರಯತ್ನ ಗಳು ಯಶಸ್ವಿಯಾಗಬಹುದು. ಮುಂಬರುವ ಸಮಯದಲ್ಲಿ ಅದರಿಂದ ದೊಡ್ಡ ಲಾಭ ಪಡೆಯ ಬಹುದು.(ಭಕ್ತಿಯಿಂದ ಶ್ರೀ ಅರ್ಧನಾರೀಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಆರ್ಥಿಕ ವಿಷಯದಲ್ಲಿ ಇಂದು ನಿಮಗೆ ಅದೃಷ್ಟ ವಿರುತ್ತದೆ. ಕೆಲಸದಲ್ಲಿ ಯಾವುದೇ ಸಮಸ್ಯೆ ಇದ್ದರೆ, ಬುದ್ಧಿವಂತಿಕೆ ಯಿಂದ ವರ್ತಿಸಬೇಕು.(ಭಕ್ತಿಯಿಂದ ಕುಲ ದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ನಿಮ್ಮ ವೃತ್ತಿ ಕ್ಷೇತ್ರದಲ್ಲಿ ತಿಳುವಳಿಕೆ ಮತ್ತು ಬುದ್ಧಿವಂತಿಕೆ ಯಿಂದ ಯಾವುದೇ ಕಷ್ಟಕರವಾದ ಕೆಲಸವನ್ನು ಪೂರ್ಣಗೊಳಿಸಲು ಸಾಧ್ಯವಾಗು ವಂತೆ ನೋಡಿಕೊಳ್ಳಿ.(ಭಕ್ತಿಯಿಂದ ಶ್ರೀ ಚಂದ್ರಮೌಳೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಇತರರ ವ್ಯವಹಾರ ಗಳಲ್ಲಿ ಹಸ್ತಕ್ಷೇಪ ಮಾಡದಿರುವುದು ಉತ್ತಮ,ಇಲ್ಲದಿದ್ದರೆ ನಿಮ್ಮ ಮಾತುಗಳು ನಿಮ್ಮ ವಿರುದ್ಧವಾಗಿ ಹೋಗಬಹುದು. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು. Astrology)

ತಿಥಿ : ತೃತೀಯಾ
ನಕ್ಷತ್ರ : ಉತ್ತರಾಭಾದ್ರ ನಕ್ಷತ್ರ.

ರಾಹುಕಾಲ: 01:30PM ರಿಂದ 3:00PM
ಗುಳಿಕಕಾಲ: 09:00AM ರಿಂದ 10:30AM
ಯಮಗಂಡಕಾಲ: 06:00AM ರಿಂದ 07:30AM

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ