ಮುದ್ದೇಬಿಹಾಳ : ಪಟ್ಟಣದ ಲಾಡ್ಜ್ವೊಂದರ ಮೇಲೆ ದಾಳಿ ನಡೆಸಿರುವ ಪೊಲೀಸರು ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಐವರು ಆರೋಪಿಗಳನ್ನು ಬಂಧಿಸಿದ್ದು ಇಬ್ಬರು ಮಹಿಳೆಯರನ್ನು ರಕ್ಷಿಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಸಂಘವಿ ಲಾಡ್ಜ್ನಲ್ಲಿ ಈ ಘಟನೆ ನಡೆದಿದೆ.ಸಿಪಿಐ ಮೊಹ್ಮದ ಫಸಿವುದ್ದೀನ್, ಪಿಎಸ್‌ಐ ಸಂಜಯ ತಿಪರೆಡ್ಡಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಚಿಕ್ಕಮಗಳೂರು ಹಾಗೂ ಬಾಗಲಕೋಟೆ ಮೂಲದ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ.
ಬಂಧಿತ ಆರೋಪಿಗಳನ್ನು ಕೋಳೂರು ತಾಂಡಾದ ಅನಿಲ್ ಜಾಧವ, ಲಾಡ್ಜ್ ಮ್ಯಾನೇಜರ ಉಡುಪಿ ಜಿಲ್ಲೆ ಕಾರ್ಕಳದ ರಘುನಾಥ ಶೆಟ್ಟಿ, ಕಾಪು ತಾಲ್ಲೂಕಿನ ದಿನೇಶ ಶೆಟ್ಟಿ,ಚಿಕ್ಕಮಗಳೂರಿನ ಗೌತಮ, ಯಾದಗಿರಿ ಜಿಲ್ಲೆ ಹುಣಸಗಿಯ ಭೀಮರಾಯ ಬೂದಿಹಾಳ ಅವರನ್ನು ಬಂಧಿಸಿದ್ದು ಲಾಡ್ಜ್ ಮಾಲೀಕ ಅಜಯಕುಮಾರ ಶೆಟ್ಟಿ ಮೇಲೂ ಪ್ರಕರಣ ದಾಖಲಾಗಿದೆ. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.