ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು ಸರ್ಕಾರದ ಹೆಸರಿಗೆ ಕೆಟ್ಟ ಹೆಸರು ತರಲು ಹುನ್ನಾರ ನಡೆಸುತ್ತಿದ್ದಾರೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು.

ದೇವರ ದಯೆಯಿಂದ ಮಹಾರಾಷ್ಟçದಲ್ಲಿ ಮಳೆಯಾಗಿ ಆಲಮಟ್ಟಿ ಡ್ಯಾಂಗೆ ನೀರು ಬಂದಿದೆ. ಕುಡಿಯಲು, ಜಾನುವಾರುಗಳಿಗೆ,ಸ್ವಲ್ಪ ಬೆಳೆಗಳಿಗೆ ಬಳಸಿಕೊಳ್ಳಲು ಅನುಕೂಲವಾಗಿದೆ.ಆದರೆ ಕೆಲವರು ನೆಪಕ್ಕೋಸ್ಕರ ಆಡಳಿತ ನ್ಯೂನ್ಯತೆ ಎಂದು ಜನರನ್ನು ತಪ್ಪು ದಾರಿಗೆ ಎಳೆಯುವ, ಇರುವ ಶಾಂತಿಯನ್ನು ಕದಡಿಸುವ ರಾಜಕಾರಣ ಮಾಡುತ್ತಿದ್ದು ಇದಕ್ಕೆ ಕಡಿವಾಣ ಹಾಕುವ ಕೆಲಸ ಜನರ ಮೇಲಿದೆ ಎಂದರು.ಎಲ್ಲಿಯವರೆಗೆ ಧರ್ಮದ ಹೆಸರಿನಲ್ಲಿ ಆಚರಣೆಗಳು ನಿಲ್ಲುವುದಿಲ್ಲವೋ ಅಲ್ಲಿಯವರೆಗೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ ಎಂದರು.

ತಹಶೀಲ್ದಾರ್ ಆನಂದ ಕೋಲಾರ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಹಿರಿಯರ ತ್ಯಾಗ ಬಲಿದಾನದಿಂದ ಸ್ವಾತಂತ್ರ್ಯ ದೊರಕಿದೆ.ಅವರ ಸ್ಮರಣೆಯನ್ನು ಮಾಡುವ ದಿನವಾಗಿದೆ.ಭಾರತೀಯ ಪರಂಪರೆ ಸಾಂಸ್ಕೃತಿಕ ಸಿರಿವಂತಿಕೆ ಎಲ್ಲೆಡೆ ಮಾದರಿಯಾಗಿದೆ.ಈ ನೆಲದಲ್ಲಿ ನಾವು ಜನಿಸಿದ್ದಕ್ಕೆ ಸಾರ್ಥಕತೆಯನ್ನು ಕಂಡಿದ್ದೇವೆ.ಸೈನಿಕ ಬಂಧುಗಳ ಸೇವೆ ನೆನವು ನಮ್ಮ ಕರ್ತವ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ತಾಪಂ ಇಓ ಸಂಗನಗೌಡ ಬಿರಾದಾರ, ಗ್ಯಾರಂಟಿ ಸಮೀತಿ ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ, ಪುರಸಭೆ ಮುಖ್ಯಾಧಿಕಾರಿ ಮಲ್ಲಿಕಾರ್ಜುನ ಬಿರಾದಾರ,ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ,ಬ್ಲಾಕ್ ಕಾಂಗ್ರೆಸ್ ಮಾಜಿ ಅದ್ಯಕ್ಷ ಅಬ್ದುಲಗಫೂರ ಮಕಾನದಾರ, ಸಿಪಿಐ ಮೊಹ್ಮದ ಫಸಿವುದ್ದೀನ,ಪಿಎಸೈ ಸಂಜಯ ತಿಪರೆಡ್ಡಿ,ವಾಯ್.ಎಚ್.ವಿಜಯಕರ್, ಪ್ರಭು ಕಡಿ,ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ,ಕರ್ನಾಟಕ ನವ ನಿರ್ಮಾಣ ಸೇನೆ ಅಧ್ಯಕ್ಷ ರಾಜುಗೌಡ ತುಂಬಗಿ, ಗೋಪಿ ಮಡಿವಾಳರ,ಅಧಿಕಾರಿಗಳಾದ ಡಾ.ಸತೀಶ ತಿವಾರಿ,ಬಸಂತಿ ಮಠ,ಎಸ್.ಡಿ.ಭಾವಿಕಟ್ಟಿ, ಎಸ್.ಎಸ್.ಕುಂಬಾರ, ಎಸ್.ಕೆ.ಘಾಟಿ,ಶಿವಲೀಲಾ ಕೊಣ್ಣೂರ, ಶಾಲಿನಿ ,ಎಂ.ಎo.ಬೆಳಗಲ್,ಲಕ್ಷ್ಮಣ ಲಮಾಣಿ,,ಅರೋಗ್ಯ ರಕ್ಷಾ ಸಮೀತಿ ಅಧ್ಯಕ್ಷ ವಿಜಯಕುಮಾರ ಗೂಳಿ ,ಶಿವಾನಂದ ಮೇಟಿ,ಅಯ್ಯಪ್ಪ ರೆಡ್ಡಿ,ಬಿ.ಎಚ್.ಮುದ್ನೂರ,ಅಪರಾಧ ವಿಭಾಗದ ಪಿಎಸೈ ಆರ್.ಎಸ್.ಭಂಗಿ ಇತರರು ಇದ್ದರು. ಟಿ.ಡಿ.ಲಮಾಣಿ ಹಾಗೂ ಜಿ.ಎಚ್.ಚವ್ಹಾಣ ನಿರೂಪಿಸಿದರು.ಪ್ರಭಾರ ಬಿಇಒ ಆರ್.ಬಿ.ಧಮ್ಮೂರಮಠ ಸ್ವಾಗತಿಸಿದರು.ತಾಲ್ಲೂಕು ಆಡಳಿತದಿಂದ ಹಿರಿಯ ಪತ್ರಕರ್ತ ಪರಶುರಾಮ ಕೊಣ್ಣೂರ, ಕರಾಟೆ ಸಾಧಕರಾದ ವಿಕ್ರಾಂತ ಶಾರದಳ್ಳಿ ಹಾಗೂ ಶಕುಂತಲಾ ಶಾರದಳ್ಳಿ ಅವರನ್ನು ಸನ್ಮಾನಿಸಲಾಯಿತು.

ಸಾಂಸ್ಕೃತಿಕ,ಪಥಸoಚಲ ಕಾರ್ಯಕ್ರಮದ ವಿಜೇತರು: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಪಥಸಂಚಲನ ಕಾರ್ಯಕ್ರಮದಲ್ಲಿ ಅಂಜುಮನ್ ಪ್ರೌಢಶಾಲೆ ಪ್ರಥಮ,ವಿಬಿಸಿ ಪ್ರೌಢಶಾಲೆ ದ್ವಿತೀಯ ಹಾಗೂ ಎಂಜಿಎoಕೆ ತೃತೀಯ ಸ್ಥಾನ ಪಡೆದುಕೊಂಡರೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗ್ಯವಂತಿ ಹಿರಿಯ ಪ್ರಾಥಮಿಕ ಶಾಲೆ ಪ್ರಥಮ, ಚಿನ್ಮಯ ಜೆಸಿ ಶಾಲೆ ದ್ವಿತೀಯ ಹಾಗೂ ಆಕ್ಸಫರ್ಡ್ ಪಬ್ಲಿಕ್ ಶಾಲೆ ತೃತೀಯ ಸ್ಥಾನ ಪಡೆದುಕೊಂಡವು.

50 ನಿಮಿಷ ತಡವಾದ ಧ್ವಜಾರೋಹಣ; ತಾಲ್ಲೂಕು ಆಡಳಿತದಿಂದ ಸಾರ್ವಜನಿಕ ಧ್ವಜಾರೋಹಣ ಬೆಳಗ್ಗೆ 9 ಗಂಟೆಗೆ ಎಂದು ಪೂರ್ವಭಾವಿ ಸಭೆಯಲ್ಲಿ ನಿಗದಿ ಮಾಡಿ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಲಾಗಿತ್ತು.ಆದರೆ ತಾಲ್ಲೂಕು ಆಡಳಿತದಿಂದಲೇ ಸಮಯವನ್ನು ಪಾಲಿಸದಿರುವುದು ಕಂಡು ಬಂದಿತು.9.55ಕ್ಕೆ ರಾಷ್ಟçಧ್ವಜಾರೋಹಣವನ್ನು ತಹಶೀಲ್ದಾರ್ ಆನಂದ ಕೋಲಾರ ನೆರವೇರಿಸಿದರು.ಶಾಸಕ ಸಿ.ಎಸ್.ನಾಡಗೌಡರು ಕಾರ್ಯಕ್ರಮದ ಸ್ಥಳಕ್ಕೆ ವಿಳಂಬ ಮಾಡಿದ್ದರಿಂದಲೇ ಧ್ವಜಾರೋಹಣ ನಿಗದಿತ ಸಮಯಕ್ಕೆ ಮಾಡಲಾಗಲಿಲ್ಲ ಎಂದು ಅಧಿಕಾರಿಗಳು ಅಸಹಾಯಕತೆಯನ್ನು ತೋಡಿಕೊಂಡರು.ಸಾoಸ್ಕೃತಿಕ ಕಾರ್ಯಕ್ರಮದಲ್ಲಿ ರಿಮಿಕ್ಸ್ ಹಾಡುಗಳೇ ಹೆಚ್ಚು ಕಂಡು ಬಂದವು.ವಿದ್ಯಾರ್ಥಿಗಳಿಗೆ ಕುಡಿವ ನೀರಿನ ವ್ಯವಸ್ಥೆ ಹೆಚ್ಚಿನ ಪ್ರಮಾಣದಲ್ಲಿ ಮಾಡಿರಲಿಲ್ಲ

Latest News

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ:                            ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ಮುದ್ದೇಬಿಹಾಳ : ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯನ್ನು ಇಳಿಮುಖಗೊಳಿಸುವ ಕಾರ್ಯ ಶಿಕ್ಷಕರು ಮಾಡಬೇಕು.ಸರ್ಕಾರ ಜಾರಿಗೊಳಿಸಿರುವ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ;     ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ; ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಆದಷ್ಟು ಬೇಗ ಸರ್ಕಾರ ಈ ಕುರಿತು ತೀರ್ಮಾನ ಕೈಗೊಂಡು ರೈತರಿಗೆ ಪರಿಹಾರ ನೀಡಬೇಕು. ಇಲ್ಲವಾದರೆ ರೈತರನ್ನು ಪಕ್ಷಾತೀತವಾಗಿ ಒಗ್ಗೂಡಿಸಿ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಎಚ್ಚರಿಸಿದರು. ಮುದ್ದೇಬಿಹಾಳದಲ್ಲಿ ಬರ ಘೋಷಣೆಗೆ ಆಗ್ರಹಿಸಿ ತಹಶೀಲ್ದಾರ್ ಕಚೇರಿ ಮುಂದೆ ಸೋಮವಾರದಿಂದ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದ ಅವರು, ಸರ್ಕಾರಕ್ಕೆ ಮಗ್ಗಲ ಮುಳ್ಳಾಗಿ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳದ ಶ್ರೀ ಸಂಗಮೇಶ್ವರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಸೆ.6ರಂದು ಮದ್ಯಾಹ್ನ 1 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ದಿವ್ಯ ಸಾನಿಧ್ಯವನ್ನು ಲಿಂಗಸೂರು ತಾಲ್ಲೂಕು ಅಂಕಲಿಮಠದ ವೀರಭದ್ರ ಸ್ವಾಮೀಜಿ ವಹಿಸುವರು.ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ನೂತನ ಕಚೇರಿ ಉದ್ಘಾಟಿಸುವರು.ಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ನೂತನ ಗೋಡವನ್ ಹಾಗೂ ವಾಣಿಜ್ಯ ಮಳಿಗೆ ಉದ್ಘಾಟಿಸುವರು.ಸಂಘದ ಅಧ್ಯಕ್ಷ ಮಲ್ಲನಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು.ಸಂಘದ ಉಪಾಧ್ಯಕ್ಷ