ಒಳಮೀಸಲಾತಿ ಜಾರಿಗೆ ಜಾಗೃತಿ ರ‍್ಯಾಲಿ ; ಹೋರಾಟಗಾರ ಅಸ್ವಸ್ಥ-ಆಸ್ಪತ್ರೆಗೆ ದಾಖಲು

ಒಳಮೀಸಲಾತಿ ಜಾರಿಗೆ ಜಾಗೃತಿ ರ‍್ಯಾಲಿ ; ಹೋರಾಟಗಾರ ಅಸ್ವಸ್ಥ-ಆಸ್ಪತ್ರೆಗೆ ದಾಖಲು



ಮುದ್ದೇಬಿಹಾಳ : ತಾಲ್ಲೂಕಿನಲ್ಲಿ ಒಳಮೀಸಲಾತಿ ಹೋರಾಟ ಐಕ್ಯತೆ ಸಮಿತಿ ನೇತೃತ್ವದಲ್ಲಿ ನಡೆದಿರುವ ಜಾಗೃತಿ ರ‍್ಯಾಲಿಯಲ್ಲಿ ಪಾಲ್ಗೊಂಡಿರುವ ಹೋರಾಟಗಾರರಲ್ಲಿ ಇಬ್ಬರು ಹೋರಾಟಗಾರರು ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡ ಘಟನೆ ಬುಧವಾರ ನಡೆದಿದೆ.

ತಾಲ್ಲೂಕಿನ ನಾಲತವಾಡ ಪಟ್ಟಣದಿಂದ ಅಡವಿ ಸೋಮನಾಳ ಗ್ರಾಮ ಪಂಚಾಯಿತಿಯಲ್ಲಿ ಬೈಕ್ ರ‍್ಯಾಲಿ ತೆರಳಿದ್ದ ವೇಳೆ ಹೋರಾಟಗಾರ ಮಾರುತಿ ಸಿದ್ದಾಪೂರ ಅವರಿಗೆ ರಕ್ತದೊತ್ತಡದ ಸಮಸ್ಯೆಯಿಂದ ಬಳಲಿ ಅಸ್ವಸ್ಥಗೊಂಡರು.ಅವರನ್ನು ಕೂಡಲೇ ಮುಖಂಡ ಬಸವರಾಜ ಸಿದ್ದಾಪೂರ, ಆನಂದ ದೇವೂರ ಮೊದಲಾದವರು ಅಡವಿ ಸೋಮನಾಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಿAದ ಮುದ್ದೇಬಿಹಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು.ಸದ್ಯಕ್ಕೆ ಮಾರುತಿ ಸಿದ್ದಾಪೂರ ಚೇತರಿಸಿಕೊಂಡಿದ್ದಾರೆ.

ಸಮೀತಿಯ ಸಂಚಾಲಕ ತಿಪ್ಪಣ್ಣ ದೊಡಮನಿ(ಗೋನಾಳ) ಅವರಿಗೂ ಬಿಪಿ ಏರುಪೇರು ಆಗಿದ್ದು ವೈದ್ಯರಿಂದ ತಪಾಸಣೆಗೆ ಒಳಗಾಗಿದ್ದಾರೆ.ಸುದ್ದಿಗಾರರೊಂದಿಗೆ ಅಡವಿ ಸೋಮನಾಳ ಸರ್ಕಾರಿ ಆಸ್ಪತ್ರೆಯಲ್ಲಿ ಮಾತನಾಡಿದ ಹೋರಾಟಗಾರ ಬಸವರಾಜ ಸಿದ್ದಾಪೂರ, ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಕಳೆದ ಮೂವ್ವತ್ತು ವರ್ಷಗಳಿಂದ ಹೋರಾಟ ಮಾಡುತ್ತಿದ್ದರೂ ಈವರೆಗೂ ಸ್ಪಂದನೆ ಸಿಕ್ಕಿಲ್ಲ. ಸಿಎಂ ಸಿದ್ಧರಾಮಯ್ಯನವರು ಒಳಮೀಸಲಾತಿ ಜಾರಿಗೊಳಿಸಬೇಕು. ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ನಡೆಯುವ ಹೋರಾಟಗಳಲ್ಲಿ ಪ್ರಾಣಹಾನಿ ಆದಲ್ಲಿ ಅದಕ್ಕೆ ರಾಜ್ಯ ಸರ್ಕಾರ, ಸಿಎಂ ಸಿದ್ಧರಾಮಯ್ಯನವರೇ ಹೊಣೆಗಾರರಾಗಬೇಕಾಗುತ್ತದೆ ಎಂದು ತಿಳಿಸಿದರು.

ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮುದ್ದೇಬಿಹಾಳ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಯಲ್ಲಿ ಸಂಚರಿಸುತ್ತಿರುವ ಬೈಕ್ ರ‍್ಯಾಲಿಯು ವಿವಿಧ ಗ್ರಾಮಗಳಲ್ಲಿ ತಮ್ಮ ಜನಾಂಗದವರಿಗೆ ಒಳಮೀಸಲಾತಿ ಸೌಲಭ್ಯ ದೊರೆತರೆ ಅದರಿಂದ ಆಗುವ ಪ್ರಯೋಜನಗಳ ಅರಿವು ಮೂಡಿಸುವ ಹಾಗೂ ಹೋರಾಟ ತೀವ್ರಗೊಳಿಸಲು ಮುಖಂಡರು ಒಳಮೀಸಲಾತಿ ಹೋರಾಟ ಐಕ್ಯತೆ ಸಮಿತಿ ನೇತೃತ್ವದಲ್ಲಿ ಸಂಚರಿಸುತ್ತಿದ್ದಾರೆ.

.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ