Babar Azam: If you get married, go to the farm! Former player's advice to Babar Azam

Babar Azam: ಮದುವೆಯಾದ್ರೆ ಫಾರ್ಮ್​ಗೆ ಬರ್ತಿಯಾ! ಬಾಬರ್ ಆಝಂಗೆ ಮಾಜಿ ಆಟಗಾರನ ಸಲಹೆ

Babar Azam: ಮದುವೆಯಾದ್ರೆ ಫಾರ್ಮ್​ಗೆ ಬರ್ತಿಯಾ! ಬಾಬರ್ ಆಝಂಗೆ ಮಾಜಿ ಆಟಗಾರನ ಸಲಹೆ

ಬೆಂಗಳೂರು: ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ನಿರಸ ಪ್ರದರ್ಶನ ತೋರುತ್ತಿರುವ ಬಾಬರ್ ಆಝಂ (Babar Azam) ವಿರುದ್ಧ ಟೀಕೆಗಳು ಕೇಳಿ ಬರುತ್ತಿದ್ದು, ಈ ಟೀಕೆಗಳ ನಡುವೆ ಎಲ್ಲರ ಗಮನ ಸೆಳೆದಿರುವುದು ಪಾಕಿಸ್ತಾನದ ಮಾಜಿ ಆಟಗಾರ ಬಾಸಿತ್ ಅಲಿ ನೀಡಿರುವ ಸಲಹೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಹೌದು, ಕಳಪೆ ಫಾರ್ಮ್​ನಲ್ಲಿರುವ ಬಾಬರ್ ಮದುವೆಯಾದರೆ ಮತ್ತೆ Babar Azam ಉತ್ತಮ ಫಾರ್ಮ್ ಗೆ ಮರಳಬಹುದು ಎಂದಿದ್ದಾರೆ.

ಬಾಬರ್ ಗೆ ಮದುವೆ ವಯಸ್ಸಾಗಿದ್ದು, ವಿವಾಹವಾಗಲು ಇದು ಸೂಕ್ತ ಸಮಯವಾಗಿದೆ. ಮದುವೆಯಾದರೆ ಎಲ್ಲರೂ ಬದಲಾಗುತ್ತಾರೆ ಎಂಬ ಮಾತಿದೆ. ಹೀಗಾಗಿ, ಕಳಪೆ ಫಾರ್ಮ್ ನಲ್ಲಿರುವ ಬಾಬರ್ ಆಝಂ ಮದುವೆಯಾಗುವುದು ಉತ್ತಮ ಎಂದು ಬಾಸಿತ್ ಅಲಿ ಸಂದರ್ಶನವೊಂದರಲ್ಲಿ ಹೇಳಿಕೆ ನೀಡಿದ್ದಾರೆ.

ಬಾಬರ್ ಆಝಂ ತನ್ನ ಹೆತ್ತವರೊಂದಿಗೆ ಮದುವೆಯ ಕುರಿತು ಮಾತನಾಡಬೇಕು. ವಿವಾಹದ ಬಳಿಕ ನೀವು ವಿಭಿನ್ನ ಬ್ಯಾಟರ್ ಆಗುತ್ತೀರಿ. ವೈಫಲ್ಯಗಳು ಆಟಗಾರನ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಎಂಬುದು ನನಗೆ ತಿಳಿದಿದೆ. ಬಾಬರ್‌ನ ತಂದೆ ತಾಯಿಗೆ ಮದುವೆ ಮಾಡುವಂತೆ ನಾನು ವಿನಂತಿಸುತ್ತೇನೆ ಎಂದು ಬಾಸಿತ್ ಅಲಿ ಇದೇ ವೇಳೆ ತಿಳಿಸಿದ್ದಾರೆ.

ಇದನ್ನೂ ಓದಿ: ಮೂರು ಅಂತಸ್ತಿನ ಕಟ್ಟಡ ಕುಸಿತ: 8 ಮಂದಿ ದುರ್ಮರಣ, 28 ಮಂದಿಗೆ ಗಾಯ..!

ಬಾಬರ್ ಪಾಕಿಸ್ತಾನ್ ಪರ ಟೆಸ್ಟ್‌ನಲ್ಲಿ ಅರ್ಧಶತಕ ಬಾರಿಸಿ ವರ್ಷಗಳೇ ಕಳೆದಿವೆ. 2022 ರಲ್ಲಿ ಕೊನೆಯ ಹಾಫ್ ಸೆಂಚುರಿ ಸಿಡಿಸಿದ್ದ ಬಾಬರ್ ಕಳೆದ 16 ಇನಿಂಗ್ಸ್ ಗಳಲ್ಲಿ ಸತತ ವೈಫಲ್ಯ ಅನುಭವಿಸಿದ್ದಾರೆ. ಅದರಲ್ಲೂ ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ 4 ಇನಿಂಗ್ಸ್ ಗಳಿಂದ ಕಲೆಹಾಕಿದ್ದು ಕೇವಲ 62 ರನ್ ಗಳು ಮಾತ್ರ. ಆದ್ದರಿಂದ 29 ವರ್ಷದ ಬಾಬರ್ ಆಝಂ‌ ಮದುವೆಯಾದರೆ ಉತ್ತಮ ಪಾರ್ಮ್ ಗೆ ಮರಳುಬುದು ಎಂದಿದ್ದಾರೆ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ