ವಿಜಯಪುರ : ದೇವರ ಹಿಪ್ಪರಗಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಮಲ್ಲಿಕಾರ್ಜುನ್ ಲಕ್ಷ್ಮೀಶ್ ಅವರು 2025-26 ನೇ ಸಾಲಿನ ವಿಜಯಪುರ ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರ ಸಂಘದ ಕ್ರೀಡಾಕೂಟದ ಬ್ಯಾಂಡ್ಮಿಟನ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸಂಘದ ಜಿಲ್ಲಾಧ್ಯಕ್ಷ ಸುರೇಶ ಶೇಡಶ್ಯಾಳ, ಅರವಿಂದ ಹೂಗಾರ,ಎಸ್.ಜಿ.ಲೊಟಗೇರಿ, ಡಾ.ಎನ್.ಬಿ.ಹೊಸಮನಿ, ಡಾ.ಶರಣಗೌಡ ಪಾಟೀಲ, ಡಾ.ಎಚ್.ಎಂ.ನಾಟೀಕರ್, ರವಿ ಕಟ್ಟೀಮನಿ , ರೇವಣಸಿದ್ದಪ್ಪ ಅಮ್ಮಣ್ಣಿ ಮತ್ತು ಮತ್ತು ಕಾಲೇಜಿನ ಪ್ರಾಚಾರ್ಯರು, ಬೋಧಕ ಹಾಗೂ ಬೋಧಕೇತರ ,ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.



