ನೂತನ ಪದಾಧಿಕಾರಿಗಳ ಪದಗ್ರಹಣ,ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರ ಸನ್ಮಾನ : ಬಣಜಿಗರು ಗರ್ವ ಇಲ್ಲದ ಗುಣವಂತರು – ಜಗದೀಶ ಶೆಟ್ಟರ

ನೂತನ ಪದಾಧಿಕಾರಿಗಳ ಪದಗ್ರಹಣ,ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರ ಸನ್ಮಾನ : ಬಣಜಿಗರು ಗರ್ವ ಇಲ್ಲದ ಗುಣವಂತರು – ಜಗದೀಶ ಶೆಟ್ಟರ

ಮುದ್ದೇಬಿಹಾಳ : ಬಣಜಿಗ ಸಮಾಜದವರು ನಿಗರ್ವಿಗಳಾಗಿದ್ದು ಎಲ್ಲ ಸಮಾಜದವರೊಂದಿಗೆ ಒಳ್ಳೆಯ ಬಾಂಧವ್ಯ ಇಟ್ಟುಕೊಂಡಿದ್ದಾರೆ.ಅಮೇರಿಕಾದ ಡೆಟ್ರಾಯ್ ನಗರದಲ್ಲೂ ಬಣಜಿಗ ಸಮಾಜದ ಬಾಂಧವರು ಬಸವಾದಿ ಶರಣ ಸಂದೇಶಗಳನ್ನು ಪಸರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ ಹೇಳಿದರು.
ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಭಾನುವಾರ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ,ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರ ಸನ್ಮಾನ ಕಾರ್ಯಕ್ರಮಕ್ಕೆ ಅವರು ಚಾಲನೆ ನೀಡಿ ಮಾತನಾಡಿದರು.

ರಾಜ್ಯ ಸರ್ಕಾರ ಜಾತಿ ಗಣತಿಯ ಹೆಸರಿನಲ್ಲಿ ಸಮಾಜದಲ್ಲಿ ಗೊಂದಲ ಮೂಡಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ.ಕೇವಲ ಶೇ.6ರಷ್ಟು ಮಾತ್ರ ಸಮೀಕ್ಷೆ ಮಾಡಿದೆ.ವಾರದಲ್ಲಿ ಶೇ.100ರಷ್ಟು ತಲುಪುವುದು ಅಸಾಧ್ಯದ ಸಂಗತಿ.ಜಾತಿ ಗಣತಿ ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕಿದೆ.ಆದರೆ ಒಳಪಂಗಡಗಳನ್ನು ಒಡೆಯುವ ಕುತಂತ್ರಕ್ಕೆ ಸರ್ಕಾರ ಮುಂದಾಗಿದೆ ಎಂದು ಟೀಕಿಸಿದರು.

ವೀರಶೈವ ಒಂದು ಕಡೆ ಲಿಂಗಾಯತ ಎಂದು ಒಂದು ಕಡೆ ಹೋದರೆ ಯಾವ ಸೌಲಭ್ಯ ಸಿಗುವುದಿಲ್ಲ.ವೀರಶೈವ ಲಿಂಗಾಯತ ಎರಡೂ ಒಂದೇ ಎಂದು ಹೇಳುತ್ತೇನೆ.ದೇಶದಲ್ಲಿ ಅಧಿಕೃತವಾಗಿ ವೀರಶೈವ ಲಿಂಗಾಯತ ಘೋಷಣೆ ಆಗಬೇಕಾದರೆ ಇನ್ನೂ ಕೆಲಸ ನಡೆಯಬೇಕು.ಧರ್ಮ ಕಾಲಂನಲ್ಲಿ ಹಿಂದು, ಜಾತಿ ಕಾಲಂನಲ್ಲಿ ವೀರಶೈವ ಲಿಂಗಾಯತ, ಉಪಜಾತಿ ಕಾಲಂನಲ್ಲಿ ಬಣಜಿಗ ಎಂದು ಬರೆಯಿಸಿ ಎಂದು ಹೇಳಿದರು.

ಶಾಸಕ ಸಿ.ಎಸ್.ನಾಡಗೌಡ ಮಾತನಾಡಿ, ಬಣಜಿಗ ಸಮಾಜದವರು ದಾನ,ಧರ್ಮ,ದೈವೀಭಕ್ತಿ,ಶಿಕ್ಷಣ ಸಂಸ್ಥೆಗಳನ್ನು ಕಟ್ಟಿದವರು.ಎಲ್ಲರನ್ನೂ ಒಪ್ಪಿಕೊಳ್ಳುವ ಸಮಾಜದವರು.ಯಡಿಯೂರಪ್ಪನವರು ಸಿಎಂ ಇದ್ದಾಗ ಮುದ್ದೇಬಿಹಾಳಕ್ಕೆ ಕುಡಿವ ನೀರಿನ ಯೋಜನೆಗೆ 9.50 ಕೋಟಿ ರೂ.ಪರಿಸ್ಕೃತ ಪ್ರಸ್ತಾವನೆಗೆ ಅನುಮೋದನೆ ಕೊಟ್ಟಿದ್ದರು.ಜಗದೀಶ ಶೆಟ್ಟರ ಅವರು ಸಿಎಂ ಇದ್ದ ಅವಧಿಯಲ್ಲಿ ಮುದ್ದೇಬಿಹಾಳ ತಾಲ್ಲೂಕಿನ ನೀರಾವರಿ ಯೋಜನೆಗಳಿಗೆ ಹಣ ಕೊಟ್ಟಿದ್ದಾರೆ ಎಂದರು.

ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಮಾತನಾಡಿ, ಹಿಂದೂಗಳನ್ನು ವಿಘಟಿಸುವ ಕೆಲಸವನ್ನು ನಮ್ಮವರೇ ಕೆಲವರು ಮಾಡುತ್ತಿದ್ದಾರೆ.ವೀರಶೈವ ಲಿಂಗಾಯತ ಎಂದು ಬರೆಯಿಸಿದರೆ ರಾಜ್ಯದ 162 ಕ್ಷೇತ್ರಗಳಲ್ಲಿ ಬಹುಮತ ಪಡೆದುಕೊಳ್ಳುವ ಸಾಮರ್ಥ್ಯ ಇದೆ.ಆದರೆ ನಮ್ಮವರೇ ಅದಕ್ಕೆ ಅಡ್ಡಗಾಲು ಹಾಕುತ್ತಿದ್ದಾರೆ. ಜಗದೀಶ ಶೆಟ್ಟರ ಸಿಎಂ ಇದ್ದ ಅವಧಿಯಲ್ಲಿ ಉತ್ತರ ಕರ್ನಾಟಕ ಭಾಗದ ನೀರಾವರಿ ಯೋಜನೆಗಳಿಗೆ 17230 ಕೋಟಿ ರೂ.ಟೆಂಡರ್ ಕರೆದಿದ್ದರು.ಮುದ್ದೇಬಿಹಾಳ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಚಿಮ್ಮಲಗಿ, ಮುಳವಾಡ ಏತ ನೀರಾವರಿ ಯೋಜನೆಗಳಿಗೆ 800 ಕೋಟಿ ರೂ.ನೀಡಿ ಕೆಲಸ ಮಾಡಿಸಿದ್ದಾರೆ.ಅದರ ಫಲವಾಗಿ ರೈತರ ಜಮೀನುಗಳಿಗೆ ನೀರು ಹರಿದಿದೆ ಎಂದರು.

ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಸಮಾಜದವರ ಸ್ವಾಭಿಮಾನಕ್ಕೆ ಧಕ್ಕೆ ತಂದವರು ಯಾರೇ ಇದ್ದರೂ ಅವರನ್ನು ಖಂಡಿಸುತ್ತೇನೆ.ಸಮಾಜದಲ್ಲಿ ಉಳ್ಳವರು ಬಡವರಿಗೆ ನೆರವಾಗುವ ಕಾರ್ಯ ಮಾಡಿ ಎಂದರು.ದಿವ್ಯ ಸಾನಿಧ್ಯ ವಹಿಸಿದ್ದ ಹೊಸಮಠದ ಅಮರೇಶ್ವರ ದೇವರು, ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಬಣಜಿಗ ಸಮಾಜದ ತಾಲ್ಲೂಕು ಘಟಕದ ನೂತನ ಅಧ್ಯಕ್ಷ ಅಶೋಕ ಚಟ್ಟೇರ,ಶಿಕ್ಷಕ ರುದ್ರೇಶ ಕಿತ್ತೂರ, ಮಾಜಿ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ ಮಾತನಾಡಿದರು.¸

ಸಾಹಿತಿ ಅಶೋಕ ಹಂಚಲಿ ಉಪನ್ಯಾಸ ನೀಡಿದರು.ಸಮಾಜದ ಗೌರವಾಧ್ಯಕ್ಷ ಎಂ.ಎಸ್.ನಾವದಗಿ, ಪ್ರಧಾನ ಕಾರ್ಯದರ್ಶಿ ರಾಜು ಬಳ್ಳೊಳ್ಳಿ, ಮುಖಂಡರಾದ ಎಂ.ಬಿ.ನಾವದಗಿ,ಬಿ.ಸಿ.ಮೋಟಗಿ,ಸoಗಮೇಶ ನಾವದಗಿ, ಯುವ ಘಟಕದ ಅಧ್ಯಕ್ಷ ಶಂಕರ ಕಡಿ, ಉಪಾಧ್ಯಕ್ಷ ಶಿವು ದಡ್ಡಿ, ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ನಾಗಠಾಣ ಇದ್ದರು.ಆನಂದ ಕಂಠಿ,ಬಿ.ವಿ .ಕೋರಿ,ಸರೋಜಾ ಕೋರಿ ಕಾರ್ಯಕ್ರಮ ನಿರ್ವಹಿಸಿದರು.ಮುದ್ದೇಬಿಹಾಳ,ತಾಳಿಕೋಟಿ,ನಾಲತವಾಡ ಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಬಾಂಧವರು ಕಾರ್ಯಕ್ರಮಕ್ಕೆ ಆಗಮಿಸಿದ್ದರು.ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ,ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.ನಿವೃತ್ತ ನೌಕರರನ್ನು ಸನ್ಮಾನಿಸಲಾಯಿತು.ವಕೀಲ ಶಿವು ದಡ್ಡಿ ಪ್ರತಿಭಾವಂತ ವಿದ್ಯಾರ್ಥಿನಿ ವಾಣಿಶ್ರೀ ಹಳ್ಳದಗೆ ಐದು ಸಾವಿರ ರೂ.ಆರ್ಥಿಕ ನೆರವು ಒದಗಿಸಿದರು.

Latest News

​🌅 ಶುಭೋದಯದ ಪದ್ಯ

​🌅 ಶುಭೋದಯದ ಪದ್ಯ

​ಹೊಸ ಆಸೆಯ ಹೊತ್ತು ಸೂರ್ಯ ಮೂಡಿದ,ಹೊಸ ಕನಸಿನ ಬುತ್ತಿ ಹಕ್ಕಿ ಹಾಡಿದ.ಮಬ್ಬು ಮರೆತು, ಬೆಳಕು

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ಒಂದು ದೊಡ್ಡ ನಗರದ ಹೊರವಲಯದಲ್ಲಿ ಒಬ್ಬ ಅನುಭವಿ ಕುಂಬಾರ ವಾಸಿಸುತ್ತಿದ್ದನು. ಆತನ ಹೆಸರು ರಾಘವ.

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ವ್ಯಾಪ್ತಿಯಲ್ಲಿ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ ಆರಂಭಿಸಲು ಪ್ರಸ್ತಾವನೆ ಕಳಿಸಲಾಗಿದೆ

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ತಾಲ್ಲೂಕಿನ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾಗಿ ಅಯ್ಯಪ್ಪಗೌಡ ರೆಡ್ಡಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅವರನ್ನು ಗುತ್ತಿಗೆದಾರರ ಸಂಘದ ತಾಲ್ಲೂಕು ಅಧ್ಯಕ್ಷ ಸುರೇಶಗೌಡ ಪಾಟೀಲ ಇಂಗಳಗೇರಿ, ಯುವ ಕಾಂಗ್ರೆಸ್ ಅಧ್ಯಕ್ಷ ಸಚಿನಗೌಡ ಪಾಟೀಲ, ಗುತ್ತಿಗೆದಾರ ಶ್ರೀಕಾಂತಗೌಡ ಪಾಟೀಲ, ಮುಖಂಡ ರುದ್ರಗೌಡ ಅಂಗಡಗೇರಿ ಸನ್ಮಾನಿಸಿದರು. ಅಯ್ಯಪ್ಪಗೌಡ ರೆಡ್ಡಿ ಅವರು ಈ ಮುಂಚೆ ಶಿರಸಿ ಸಿದ್ದಾಪುರ,ಮುದ್ದೇಬಿಹಾಳ,ಆಲಮಟ್ಟಿ,ತಾಳಿಕೋಟಿ ಭಾಗದಲ್ಲಿ ವಿವಿಧ ಇಲಾಖೆಗಳಲ್ಲಿ ಸಹಾಯಕ ಅಭಿಯಂತರರಾಗಿ ಸೇವೆ ಸಲ್ಲಿಸಿದ್ದು ಅವರಿಗೆ ಸರ್ಕಾರ ಈ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ;                                 ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ; ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ಮುದ್ದೇಬಿಹಾಳ : ಕಾನಿಪ ಸಂಘದ ತಾಲ್ಲೂಕು ಘಟಕದ 2025-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗೆ ಬುಧವಾರ ಚುನಾವಣೆ ನಡೆಸಲಾಗಿದ್ದು ವಡವಡಗಿ-ಬನ್ನೆಟ್ಟಿ ಪೆನಲ್ ಮಧ್ಯೆ ಏರ್ಪಟ್ಟ ಸ್ಪರ್ಧೆಯಲ್ಲಿ ವಡವಡಗಿ ಪೆನಲ್ ಪದಾಧಿಕಾರಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಡಿ.ಬಿ.ವಡವಡಗಿ ಹಾಗೂ ಮಕ್ಬೂಲ್ ಬನ್ನೆಟ್ಟಿ ನಾಮಪತ್ರ ಸಲ್ಲಿಸಿದ್ದು ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಅವರು 19 ಮತ ಪಡೆದು ಆಯ್ಕೆಯಾಗಿ ಪ್ರತಿಸ್ಪರ್ಧಿ ಮಕ್ಬುಲ್ ಬನ್ನೆಟ್ಟಿ ಅವರನ್ನು 10 ಮತಗಳ ಅಂತರದಿoದ ಪರಾಭವಗೊಳಿಸಿದರು. ಉಪಾಧ್ಯಕ್ಷ