ಅವೈಜ್ಞಾನಿಕ ಆದೇಶಕ್ಕೆ ಬಂಗ್ಲೆ ಮಲ್ಲಿಕಾರ್ಜುನ ಖಂಡನೆ : ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಆದೇಶ-ನಾಯಿ…. ಜೇನು ಇಟ್ಟಂತೆ..! (ವಿಡಿಯೋ ನೋಡಿ)

ಅವೈಜ್ಞಾನಿಕ ಆದೇಶಕ್ಕೆ ಬಂಗ್ಲೆ ಮಲ್ಲಿಕಾರ್ಜುನ ಖಂಡನೆ : ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಆದೇಶ-ನಾಯಿ…. ಜೇನು ಇಟ್ಟಂತೆ..! (ವಿಡಿಯೋ ನೋಡಿ)

Ad
Ad

ಬೆಂಗಳೂರು : ರಾಜ್ಯದ 200 ತಾಲ್ಲೂಕುಗಳಲ್ಲಿ ಕೆಲಸ ಮಾಡುವ ತಾಲ್ಲೂಕು ಮಟ್ಟದ ಪತ್ರಕರ್ತರಿಗೆ ಆಯಾ ಪತ್ರಿಕಾ ಸಂಸ್ಥೆಗಳು ಕಾಯಂ ನೇಮಕಾತಿ ಆದೇಶ ಪತ್ರ ಕೊಟ್ಟಿರುವುದಿಲ್ಲ. ಹೀಗಿರುವಾವ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕೊಡುವ ವಿಷಯಕ್ಕೆ ಸಂಬಂಧಿಸಿದಂತೆ ಗುರುವಾರ ಸರ್ಕಾರದಿಂದ ಹೊರಡಿಸಿರುವ ಆದೇಶ ಅವೈಜ್ಞಾನಿಕವಾಗಿದ್ದು ರಾಜ್ಯದ ಪತ್ರಕರ್ತರಿಗೆ ಅಪಮಾನಿಸಿದಂತಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Ad
Ad

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳಲ್ಲಿ ಕಾಯಂ ಪತ್ರಕರ್ತರೆಂದು ನೇಮಕಾತಿ ಆದೇಶ ಕೊಟ್ಟಿಲ್ಲ. ಆದರೆ ಸರ್ಕಾರ ಈ ಆದೇಶ ಪ್ರತಿ ಕೇಳಿರುವುದು ಹಾಸ್ಯಾಸ್ಪದ ಸಂಗತಿಯಾಗಿದ್ದು ಈ ಬಗ್ಗೆ ಆದೇಶ ಮರುಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ.

ರಾಜ್ಯದ ಮಹಿಳೆಯರಿಗೆ ಬಸ್‌ಗಳಲ್ಲಿ ಸಂಚರಿಸಲು 1800 ಕೋಟಿ ರೂ.ವೆಚ್ಚವನ್ನು ನೀಡಿರುವ ಸರ್ಕಾರ ಯಾವುದೇ ಮಾನದಂಡಗಳನ್ನು ಕೇಳಿಲ್ಲ. ಆದರೆ ಪ್ರಜಾಪ್ರಭುತ್ವದ ನಾಲ್ಕನೇ ಅಂಗ, ಸರ್ಕಾರದ ಯೋಜನೆಗಳ ಬಗ್ಗೆ ಸಮಾಜದಲ್ಲಿ ಜನರ ಕೊಂಡಿಯಾಗಿ ಕೆಲಸ ಮಾಡುತ್ತಿರುವ ಪತ್ರಕರ್ತರ ವಿಷಯದಲ್ಲಿ ಮಾತ್ರ ಇಂತಹ ಧೋರಣೆ ತಳೆದಿರುವುದು ಸರಿಯಾದ ಕ್ರಮವಲ್ಲ ಎಂದು ಹರಿಹಾಯ್ದಿದ್ದಾರೆ.

ಸರ್ಕಾರ ಹೊರಡಿಸಿರುವ ಆದೇಶದಂತೆ ರಾಜ್ಯಾದ್ಯಂತ 100 ಅರ್ಜಿ ಸಲ್ಲಿಕೆ ಆದರೆ ಹೆಚ್ಚು ಎಂದಿರುವ ಬಂಗ್ಲೆ ಮಲ್ಲಿಕಾರ್ಜುನ, 5222 ಪತ್ರಕರ್ತರಲ್ಲಿ ಕಾಯಂ ನೇಮಕಾತಿ ಪತ್ರ ಎಷ್ಟು ಜನರ ಬಳಿ ಇದೆ ಎಂಬುದೇ ಯಕ್ಷಪ್ರಶ್ನೆಯಾಗಿದೆ. ಕೂಡಲೇ ಈ ಆದೇಶವನ್ನು ಮಾರ್ಪಡಿಸಿ ಗ್ರಾಮೀಣ ಪತ್ರಕರ್ತರಿಗೆ ಬಸ್‌ಗಳಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ಕಲ್ಪಿಸುವ ಕಾರ್ಯ ಮಾಡಬೇಕು. ಇಲ್ಲದಿದ್ದಲ್ಲಿ ಈ ಆದೇಶದ ವಿರುದ್ಧ ನ್ಯಾಯಾಲಯದ ಮೊರೆ ಹೋಗಲಾಗುವುದು ಹಾಗೆಯೇ ಇದರ ವಿರುದ್ಧ ಹೋರಾಟವನ್ನು ಸಂಘಟಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಈ ಆದೇಶ ನಾಯಿ.. ಜೇನು ಇದ್ದಂತೆ ಅದು ಪೂಜೆಗೂ ಬರುವುದಿಲ್ಲ. ತಿನ್ನುವುದಕ್ಕೆ ಬರುವುದಿಲ್ಲ. ಆದರೆ ಸರ್ಕಾರ ಪತ್ರಕರ್ತರಿಗೆ ಬಸ್ ಪಾಸ್ ಕೊಟ್ಟಿರುವುದಾಗಿ ಬಡಾಯಿ ಕೊಚ್ಚಿಕೊಳ್ಳಲಿದೆ. ಪತ್ರಕರ್ತ ಕಿವಿ ಮೇಲೆ ಹೂ ಇಟ್ಟಂತಾಗಿದೆ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ಲಾರಿ – ಕಾರು ಮುಖಾಮುಖಿ ಡಿಕ್ಕಿ, ನಾಲ್ವರು ಸ್ಥಳದಲ್ಲೇ ದುರ್ಮರಣ

Latest News

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಮುದ್ದೇಬಿಹಾಳ : ಬಸನಗೌಡ ಪಾಟೀಲ ಯತ್ನಾಳರು ಯಾವ ಪಕ್ಷದಲ್ಲಿರುತ್ತಾರೆಯೋ ಸಾಯುವವರಿಗೂ ಅವರ ಜೊತೆಗೆ ಇದ್ದು

ಭಾವಚಿತ್ರಗಳಿಗೆ ಅಪಮಾನ ತಡೆಗಟ್ಟಲು ಪೊಲೀಸರಿಗೆ ಬಿಜೆಪಿ ಪತ್ರ

ಭಾವಚಿತ್ರಗಳಿಗೆ ಅಪಮಾನ ತಡೆಗಟ್ಟಲು ಪೊಲೀಸರಿಗೆ ಬಿಜೆಪಿ ಪತ್ರ

ಯತ್ನಾಳ ಆಪ್ತ, ಜಿಪಂ ಮಾಜಿ ಉಪಾಧ್ಯಕ್ಷ ದೇಸಾಯಿ ವಿರುದ್ಧ ಕ್ರಮಕ್ಕೆ ಆಗ್ರಹ ಮುದ್ದೇಬಿಹಾಳ :

ರೇವಣಸಿದ್ದಪ್ಪಗೆ ಟ್ಯಾಲೆಂಟ್ ಅವಾರ್ಡ್ ಪ್ರಶಸ್ತಿಶಿಕ್ಷಣದೊಂದಿಗೆ ಸಂಸ್ಕಾರವೂ ಹೆಚ್ಚಲಿ- ಅಮರೇಶ್ವರ ಸ್ವಾಮೀಜಿ

ರೇವಣಸಿದ್ದಪ್ಪಗೆ ಟ್ಯಾಲೆಂಟ್ ಅವಾರ್ಡ್ ಪ್ರಶಸ್ತಿಶಿಕ್ಷಣದೊಂದಿಗೆ ಸಂಸ್ಕಾರವೂ ಹೆಚ್ಚಲಿ- ಅಮರೇಶ್ವರ ಸ್ವಾಮೀಜಿ

ಮುದ್ದೇಬಿಹಾಳ : ಮೊದಲು ಸಂಸ್ಕಾರ ಹೆಚ್ಚಾಗಿತ್ತು,ಶಿಕ್ಷಣ ಕಡಿಮೆ ಇತ್ತು. ಆದರೆ ಇಂದು ಶಿಕ್ಷಣ ಹೆಚ್ಚಿದಂತೆ

ಯತ್ನಾಳ ಉಚ್ಚಾಟನೆ ವಾಪಸಾತಿಗೆ ಪಂಚಮಸಾಲಿಗರ ಆಗ್ರಹ

ಯತ್ನಾಳ ಉಚ್ಚಾಟನೆ ವಾಪಸಾತಿಗೆ ಪಂಚಮಸಾಲಿಗರ ಆಗ್ರಹ

ಮುದ್ದೇಬಿಹಾಳ : ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟನೆಗೊಳಗಾಗಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಗೌರವಯುತವಾಗಿ ಮರಳಿ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಪಂಚಮಸಾಲಿ ಸಮಾಜದ ಮುಖಂಡರು ಇಂದಿಲ್ಲಿ ಆಗ್ರಹಿಸಿದರು. ಪಟ್ಟಣದ ಏಪಿಎಂಸಿಯಲ್ಲಿರುವ ಬಸಲಿಂಗಪ್ಪ ರಕ್ಕಸಗಿ ಅವರ ಅಡತಿ ಅಂಗಡಿಯಲ್ಲಿ ಗುರುವಾರ ಪಂಚಮಸಾಲಿ ಸಮಾಜದ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಮುಖಂಡರಾದ ಶಿವಶಂಕರಗೌಡ ಹಿರೇಗೌಡರ, ಸಮಾಜದ ತಾಲ್ಲೂಕು ಅಧ್ಯಕ್ಷ ಅಮರೇಶ ಗೂಳಿ, ಕಾಮರಾಜ ಬಿರಾದಾರ ಮೊದಲಾದವರು,

ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಸ್ಪರ್ಧೆ:ಏ.5 ರಂದು 172 ಮೆಡಿಕಲ್ ವಿದ್ಯಾರ್ಥಿಗಳ ಸನ್ಮಾನ

ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಸ್ಪರ್ಧೆ:ಏ.5 ರಂದು 172 ಮೆಡಿಕಲ್ ವಿದ್ಯಾರ್ಥಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನಲ್ಲಿ ಏ.5 ರಂದು ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಪರೀಕ್ಷೆ-2025 ನ್ನು ಹಮ್ಮಿಕೊಳ್ಳಲಾಗಿದ್ದು ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಗುತ್ತದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ ಹೇಳಿದರು. ಪಟ್ಟಣದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ ಗುರುವಾರ ಸುದ್ದಿಗೋಷ್ಠಿಯಲ್ಲಿ ಪರೀಕ್ಷೆಯ ವಿವರಗಳನ್ನು ಅವರು ನೀಡಿದರು. ಸಂಸ್ಥೆಯ ಚೇರಮನ್ ಎಂ. ಎಸ್. ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಈ