ಡಿಕೆ ಶಿವಕುಮಾರ್ ಏಜೆಂಟ್ ವಿಜಯೇಂದ್ರ; ಇದು ಪಕ್ಷ ದ್ರೋಹ ಹೈಕಮಾಂಡ್‌ಗೆ ದೂರು ನೀಡ್ತೀವಿ – ಯತ್ನಾಳ್ ಆರ್ಭಟ

ಡಿಕೆ ಶಿವಕುಮಾರ್ ಏಜೆಂಟ್ ವಿಜಯೇಂದ್ರ; ಇದು ಪಕ್ಷ ದ್ರೋಹ ಹೈಕಮಾಂಡ್‌ಗೆ ದೂರು ನೀಡ್ತೀವಿ – ಯತ್ನಾಳ್ ಆರ್ಭಟ

ಬೆಂಗಳೂರು: ಪ್ರತಾಪ್ ಸಿಂಹ ಮತ್ತು ನಾನು ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸರಿ ಹೋಗ್ತಾ ಇಲ್ಲ, ಅಪ್ಪ, ಮಕ್ಕಳ ಪಕ್ಷವಾಗಿ ಪರಿವರ್ತನೆಯಾಗಿದೆ ಎಂದು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಮಾಜಿ ಸಚಿವ ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಸಭೆ ಬಳಿಕ ಖಾಸಗಿ ಸುದ್ದಿವಾಹಿನಿ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ಲೋಕಸಭೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿರುವ ರಾಜ್ಯಾಧ್ಯಕ್ಷ (ವಿಜಯೇಂದ್ರ) ಮತ್ತು ಯಡಿಯೂರಪ್ಪ ಕುರಿತು ಹೈಕಮಾಂಡ್ ಗಮನಕ್ಕೆ ತರಬೇಕಿದೆ.

ಸಮಾನ ಮನಸ್ಕರು, ಸೋತ ಅಭ್ಯರ್ಥಿಗಳು, ಗೆದ್ದವರು ಎಲ್ಲರೂ ಕೂಡ ಹೈಕಮಾಂಡ್​ಗೆ ವಿಜಯೇಂದ್ರ ಮತ್ತು ಯಡಿಯೂರಪ್ಪ ಮಾಡಿರುವ ಪಕ್ಷ ವಿರೋಧಿ ಕೆಲಸವನ್ನು ತಿಳಿಸಲು ನಿರ್ಧಾರ ಮಾಡಿದ್ದೇವೆ.

ಮೊದಲು ನಾವೆಲ್ಲರೂ ದೊಡ್ಡ ಸಭೆ ಮಾಡಲು ತೀರ್ಮಾನ ಮಾಡಿದ್ದೇವೆ. ಒಂದು ವಾರದೊಳಗೆ ಸೇರಿ, ಸಭೆ ನಡೆಸಿ ಸಭೆಯಲ್ಲಿ ಬರುವ ತೀರ್ಮಾನದಂತೆ ಹೈಕಮಾಂಡ್​ಗೆ ದೂರು ಕೊಡಲು ತೀರ್ಮಾನ ಮಾಡಿದ್ದೇವೆ.

ನಮ್ಮ ಜೊತೆ ಸೇರುವವರು ಬಹಳ ದೊಡ್ಡ ಸಂಖ್ಯೆಯಲ್ಲಿ ಇದ್ದಾರೆ. ಬಿಜೆಪಿಯಲ್ಲಿ ಇಷ್ಟು ಅಸಮಾಧಾನ ಇದೆ ಅಂತಾ ನನಗೆ ಅನ್ನಿಸಿರಲಿಲ್ಲ. ಮೊನ್ನೆ ವಿಧಾನಸಭೆಯಲ್ಲಿ ಡಿಕೆ ಶಿವಕುಮಾರ್ ಏಜೆಂಟ್ ರೀತಿ ವಿಜಯೇಂದ್ರ ಕೆಲಸ ಮಾಡುದ್ರಲ್ವಾ, ಅವರ ಮುಂದೆ ಫೈಲ್ ತಗೊಂಡ್ ಹೋಗಿ ದಯನೀಯವಾಗಿ ಒಬ್ಬ ರಾಜ್ಯಾಧ್ಯಕ್ಷರು ಪಕ್ಷಕ್ಕೆ ಶೋಭೆಯಲ್ಲ ಎಂದು ನಾ ಮಾತನಾಡಿದ ನಂತರ ಅನೇಕರು ಬಹಳ ಸತ್ಯ ಮಾತನಾಡಿದ್ದೀರಿ. ಈ ರೀತಿಯಾಗಿ ಮಾತನಾಡದೆ ಹೋದರೆ ಪಕ್ಷವೇ ಉಳಿಯುವುದಿಲ್ಲ, ಅನವಶ್ಯಕ ಪಕ್ಷ ಆಗುತ್ತೆ ಅನ್ನೋದು ಎಲ್ಲರ ಮನಸ್ಸಲ್ಲಿ ಇದೆ.

ಈ ಕುರಿತು ಚಾಮರಾಜನಗರದಿಂದ ಬೀದರ್ ವರೆಗೆ ಎಲ್ಲೆಡೆಯಿಂದ ಪೋನ್ ಬರ್ತಾ ಇದೆ. ಇದರದೇ ಸಭೆಯನ್ನ ಕೆಲವೇ ದಿನಗಳಲ್ಲಿ ಮಾಡ್ತೇವೆ ಎಂದು ಯತ್ನಾಳ್ ಹೇಳಿದ್ದಾರೆ.

Latest News

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀಟ್

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕು ಬಣಜಿಗ ಸಮಾಜದ ನೂತನ ಕಾರ್ಯಕಾರಿಣಿ ಮಂಡಳಿಯನ್ನು ಸರ್ವಾನುಮತದಿಂದ ಭಾನುವಾರ ಆಯ್ಕೆ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ರಾಯಚೂರು,ಜೂ 15- ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಡೆದಿರುವ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ನಾರಾಯಣಪುರ: ಕೊಡೇಕಲ್ ಪಟ್ಟಣದ ಸರರ್ಕಾರಿ ಪ್ರೌಢಶಾಲೆಯಲ್ಲಿ ವಲಯ ವ್ಯಾಪ್ತಿಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಹಿರಿಯ, ಕಿರಿಯ ಪ್ರಾಥಮಿಕ ಶಾಲೆಗಳ ಮುಖ್ಯಶಿಕ್ಷಕರ ಸಭೆ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸುರುಪುರ ಬಿಇಒ ಯಲ್ಲಪ್ಪ ಕಾಡ್ಲೂರ ಮಾತನಾಡಿ ಮಕ್ಕಳಿಗೆ ಕಲಿಕೆಗೆ ಪೂರಕವಾದ ವಾತವರಣ ನಿರ್ಮಾಣದ ಜೊತೆಗೆ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸುವದು ಹಾಗೂ ಕ್ಲಸ್ಟರ್ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಸೇರಿ ಅನುದಾನಿತ ಶಾಲೆಗಳಲ್ಲಿ ಸಿಗುವ ಬಿಸಿಯೂಟ, ಸಮವಸ್ತ್ರ ಪಠ್ಯಪುಸ್ತಕಗಳ ವಿತರಣೆ ಸೇರಿ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಮುದ್ದೇಬಿಹಾಳ : ಜನೌಷಧಿ ಕೇಂದ್ರಗಳು, ಉಚಿತ ಅಕ್ಕಿ ಕೊಡುವ ಯೋಜನೆ, ಆಯುಷ್ಮಾನ್ ಆರೋಗ್ಯ ಕಾರ್ಡ ಇಂತಹ ನೂರಾರು ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಮಾಡಲಾಗಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಬಿಜೆಪಿ ಸರ್ಕಾರ ಕೇಂದ್ರದಲ್ಲಿ 11 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಐದು ಲಕ್ಷ ರೂ.ಗಳವರೆಗೆ ಆರೋಗ್ಯ ವಿಮೆ ಕಲ್ಪಿಸುವ ಯೋಜನೆಯನ್ನು ಮೋದಿ