ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ ಸಮಾಜದ ಬಾಂಧವರನ್ನು ಸೇರಿಕೊಂಡು ಅದ್ದೂರಿಯಾಗಿ ಆಚರಣೆ ಮಾಡಲು ನಿರ್ಧರಿಸಲಾಗಿದೆ.

ಪಟ್ಟಣದ ಖಾಸ್ಗತೇಶ್ವರ ಮಠದಲ್ಲಿ ಶುಕ್ರವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.ಬಸವ ಜಯಂತಿಯ ದಿನದಂದು ಕಿಲ್ಲಾದಲ್ಲಿರುವ ಹೊಸಮಠದಲ್ಲಿ ಸಂಜೆ 4ಕ್ಕೆ ಧರ್ಮಸಭೆ ನಡೆಸಿ ಅಲ್ಲಿ ಬಸವಣ್ಣನವರ ಕುರಿತು ಉಪನ್ಯಾಸವನ್ನು ನುರಿತ ಅನುಭಾವಿಗಳಿಂದ ನಡೆಸಲಾಗುವುದು.ಧರ್ಮಸಭೆಗೆ ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮ ನಡೆಸಲು ತೀರ್ಮಾನ ಕೈಗೊಳ್ಳಲಾಯಿತು.

ಸಂಜೆ 5ಕ್ಕೆ ಕಿಲ್ಲಾದ ಹೊಸಮಠದಿಂದ ಸರಾಫ ಬಜಾರ್ ಮೂಲಕ ಎಲ್ಲ ಅಂಗಡಿಕಾರರು ಸ್ವಯಂಪ್ರೇರಿತರಾಗಿ ತಮ್ಮ ಅಂಗಡಿಗಳನ್ನು ಬಂದ್ ಮಾಡಿಕೊಂಡು ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ತಿಳಿಸಲಾಯಿತು.

ಕಾರ್ಗಿಲ್ ಸ್ಮಾರಕ ಸಮೀತಿಯ ಮುಖಂಡ ಶ್ರೀಕಾಂತ ಹಿರೇಮಠ ಅವರಿಗೆ ಬಸವಣ್ಣನವರ ವೇಷಧಾರಿಯಾಗಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ತಿಳಿಸಲಾಯಿತು.ಬಸವಣ್ಣನವರ ಭಾವಚಿತ್ರದೊಂದಿಗೆ ಬಸವಣ್ಣನವರ ಸಮಕಾಲೀನ ಶರಣರ ವೇಷಧಾರಿಗಳಾಗಿ ಬರುವವರಿಗೆ ಟ್ರಾö್ಯಕ್ಟರ್‌ನಲ್ಲಿ ಕರೆದುಕೊಂಡು ತೆರಳಲಾಗುತ್ತದೆ.ಆಯಾ ಸಮಾಜದವರು ತಮ್ಮ ಶರಣರ ವೇಷಧಾರಿಗಳಾಗಿ ಪಾಲ್ಗೊಳ್ಳುವಂತೆ ತಿಳಿಸಲಾಯಿತು.

ಸಭೆಯಲ್ಲಿ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಬಸವರಾಜ ನಾಲತವಾಡ, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಬಣಜಿಗ ಸಮಾಜದ ಮುಖಂಡ ಸುಧೀರ ನಾವದಗಿ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ,ಭೋವಿ ಸಮಾಜದ ಮುಖಂಡ ಪರಶುರಾಮ ನಾಲತವಾಡ, ಪತ್ರಕರ್ತ ಶಂಕರ ಹೆಬ್ಬಾಳ,ದಲಿತ ಸಮಾಜದ ಮುಖಂಡ ವಾಯ್.ಎಚ್.ವಿಜಯಕರ್,ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಶೋಕ ಮಣಿ, ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಮಹಾoತೇಶ ಬೂದಿಹಾಳಮಠ,ಕರ್ನಾಟಕ ಅರ್ಬನ್ ಬ್ಯಾಂಕ್ ನಿರ್ದೇಶಕ ರಾಜಶೇಖರ ಕರಡ್ಡಿ ಮತ್ತಿತರರು ಮಾತನಾಡಿ ಸಲಹೆ ಸೂಚನೆ ನೀಡಿದರು.

ದಾನಿಗಳ ನೆರವಿನೊಂದಿಗೆ ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಲು ಸಭೆ ಒಕ್ಕೂರಲಿನ ನಿರ್ಧಾರ ಕೈಗೊಂಡಿತು.ಕೆಲವು ದಾನಿಗಳು ಸಭೆಯಲ್ಲಿ ದೇಣಿಗೆ ನೀಡಿದರಲ್ಲದೇ ಇನ್ನೂ ಕೆಲವರು ವಾಗ್ದಾನ ಮಾಡಿದರು.ಸಭೆಯಲ್ಲಿ ವೀರಶೈವ ಲಿಂಗಾಯತ ಸಮಾಜದ ಹಾಗೂ ಇತರೆ ಸಮಾಜದ ಬಾಂಧವರು ಪಾಲ್ಗೊಂಡಿದ್ದರು.


ಬಸವಣ್ಣನವರ ಪುತ್ಥಳಿಗೆ ಮಾಲಾರ್ಪಣೆಗೆ ಜಾಕ್ ಅಳವಡಿಕೆಗೆ ಚಿಂತನೆ:
ಸಭೆಯಲ್ಲಿ ಮಾತನಾಡಿದ ಪತ್ರಕರ್ತ ಶಂಕರ ಹೆಬ್ಬಾಳ, ಬಸವೇಶ್ವರ ವೃತ್ತದಲ್ಲಿರುವ ಬಸವಣ್ಣನವರ ಮೂರ್ತಿಗೆ ಮಾಲಾರ್ಪಣೆ ಮಾಡಲು ಪ್ರತಿ ವರ್ಷ ಜೆಸಿಬಿ,ಹಿಟಾಚಿ ಯಂತ್ರ ಬಳಸಲಾಗುತ್ತಿದೆ.ಇದಕ್ಕಿಂತ ಪರ್ಯಾಯ ವ್ಯವಸ್ಥೆ ಮಾಡಿ ಸಾರ್ವತ್ರಿಕವಾಗಿ ಎಲ್ಲರೂ ಬಸವಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಮಾಡುವಂತೆ ವ್ಯವಸ್ಥೆ ಕಲ್ಪಿಸಲು ಸಮಾಜದವರು ಮುಂದಾಗಬೇಕಿದೆ ಎಂದು ಹೇಳಿದಾಗ ಪ್ರತಿಕ್ರಿಯಿಸಿದ ಮುಖಂಡರಾದ ಪ್ರಭುರಾಜ ಕಲ್ಬುರ್ಗಿ,ಸುಧೀರ ನಾವದಗಿ, ಪುತ್ಥಳಿಗೆ ಮಾಲಾರ್ಪಣೆ ಮಾಡಲು ಪರ್ಯಾಯ ಮೆಟ್ಟಿಲು ಮಾಡಲು ಮುಂದಾದರೆ ಮೂರ್ತಿಯ ಸೌಂದರ್ಯ ಮರೆಯಾಗುತ್ತದೆ.ಅದಕ್ಕಾಗಿ ಕಾರ್ಯಯೋಜನೆಯನ್ನು ಕೈ ಬಿಡಲಾಗಿದೆ.ಯಾರಾದರೂ ನುರಿತ ತಜ್ಞರು ಇದ್ದಲ್ಲಿ ಮೂರ್ತಿಯ ಸೌಂದರ್ಯಕ್ಕೆ ಧಕ್ಕೆ ಬಾರದಂತೆ ಜಾಕ್ ಸಿಸ್ಟಮ್ ಮಾಡಿ ಹಾರ,ಪೂಜೆ ಸಲ್ಲಿಸಲು ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲು ಚಿಂತನೆ ನಡೆದಿದೆ.ಅಂತವರು ಯಾರಾದರೂ ಇದ್ದಲ್ಲಿ ತಮ್ಮನ್ನು ಸಂಪರ್ಕಿಸುವoತೆ ತಿಳಿಸಿದರು.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ