Be aware when responding to fake news: AS Patil Nadahalli

ಸುಳ್ಳು ಸುದ್ದಿ ಪ್ರತಿಕ್ರಿಯೆ ನೀಡುವಾಗ ಜಾಗೃತವಾಗಿರಿ: ಎ ಎಸ್ ಪಾಟೀಲ್ ನಡಹಳ್ಳಿ

ಸುಳ್ಳು ಸುದ್ದಿ ಪ್ರತಿಕ್ರಿಯೆ ನೀಡುವಾಗ ಜಾಗೃತವಾಗಿರಿ: ಎ ಎಸ್ ಪಾಟೀಲ್ ನಡಹಳ್ಳಿ

ಮುದ್ದೇಬಿಹಾಳ: ಸುದ್ದಿ ಮಾಧ್ಯಮ, ಸಂವಹನ ಯುಗದಲ್ಲಿ ಪ್ರತಿಯೊಬ್ಬರು ಸುದ್ದಿ ಹಂಚಿಕೊಳ್ಳುತ್ತಿದ್ದಾರೆ. ತಮ್ಮತನವನ್ನು ತೋರಲು ಬಯಸುತ್ತಾರೆ. ಕ್ಷಣಾರ್ಧದಲ್ಲಿ ಜಗತ್ತಿಗೆ ಪರಿಚಯವಾಗಿ ಹಣ, ಕೀರ್ತಿ ಹಾಗೂ ಜನಪ್ರಿಯತೆಯನ್ನು ಗಳಿಸುತ್ತಾರೆ ಇದಕ್ಕೆ ಮುಖ್ಯ ಕಾರಣ ಅಭಿವ್ಯಕ್ತಿ ಸಾಮರ್ಥ್ಯ ಎಂದು ಮಾಜಿ ಶಾಸಕ ಎ ಎಸ್ ಪಾಟೀಲ್ (ನಡಹಳ್ಳಿ) ಹೇಳಿದರು.

ಆಲಮಟ್ಟಿ ರಸ್ತೆ ಪಕ್ಕದ ಅರಿಹಂತ ಗಿರಿಯಲ್ಲಿರುವ ಅರಿಹಂತ ಸಮೂಹ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ಉದ್ಘಾಟಕರಾಗಿ ಮಾತನಾಡಿದ ಅವರು, ಆಧುನಿಕ ಜಗತ್ತು ಮೊಬೈಲ್ ಬಳಕೆಯಿಂದ ಡಿಜಿಟಲ್ ಗ್ರಂಥಾಲಯವಾಗಿ ಪರಿವರ್ತನೆ ಆಗಿದೆ.

ವಿಜ್ಞಾನ, ತಂತ್ರಜ್ಞಾನ ಜೊತೆಗೆ ಮಾಹಿತಿ ಜ್ಞಾನ ಇಲ್ಲದಿದ್ದರೆ ಪೂರ್ಣವಾಗುವುದಿಲ್ಲ. ಹಾಗೆಯೇ ಸುಳ್ಳು ಮಾಹಿತಿ ಹಬ್ಬಿಸುವುದರಿಂದ ಒಂದು ದೇಶ, ಒಬ್ಬ ವ್ಯಕ್ತಿಯನ್ನು ಹಾಳು ಮಾಡಬಹುದು. ಹಾಗಾಗಿ ಸುಳ್ಳು ಸುದ್ದಿಗಳನ್ನು ಹರಡಬಾರದು ಮತ್ತು ನಂಬಬಾರದು ಎಂದು ಮಾತನಾಡಿದರು.

ಪತ್ರಿಕೋದ್ಯಮ ಮತ್ತು ಪತ್ರಕರ್ತರ ಕಾರ್ಯಶೈಲಿ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಪ್ರೊ. ರಾಜನಾರಾಯಣ ನಲವಡೆ ಅವರು, ಪತ್ರಿಕೋದ್ಯಮ ಸದಾ ಕಾಲ ಸಮಾಜಮುಖಿ ಕಾರ್ಯ ನಿರ್ವಹಿಸಿದೆ. ಸ್ವತಂತ್ರ ಹೋರಾಟಗಾರರು, ಸಾಹಿತಿಗಳು ಕರಪತ್ರ ರೂಪದಲ್ಲಿ ಪ್ರಕಟಣೆ ಮಾಡಿದ ಸಾಹಿತ್ಯ ಇಂದು ಸಮೂಹ ಮಾಧ್ಯಮ, ತಂತ್ರಜ್ಞಾನ ಬಳಕೆಯಿಂದ ಸಮಾಜವನ್ನು ಬದಲಿಸಿದೆ. ಪತ್ರಕರ್ತರಾದವರು ಸದಾ ಸಮಾಜದ ಓರೆಕೋರೆಗಳನ್ನು ತಿದ್ದುತ್ತಾ, ಸತ್ಯದ ಪರವಾಗಿ ಬರೆಯಬೇಕು ಎಂದು ಮಾತನಾಡಿದರು.

ಅರಿಹಂತ ಸಂಸ್ಥೆಯ ಅಧ್ಯಕ್ಷರಾದ ಮಹಾವೀರ ಸಗರಿ. ರಾಜ್ಯ ಕಾರ್ಯಕಾರಿಣಿ ಸದಸ್ಯ ಡಿ. ಬಿ. ವಡವಡಗಿ. ಪ್ರಧಾನ ಕಾರ್ಯದರ್ಶಿ ರವೀಂದ್ರ ನಂದೆಪ್ಪನರ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭ ವಿದ್ಯಾರ್ಥಿನಿ ಭಾಗ್ಯಶ್ರೀ ಬಸವರಾಜ್ ಕುಂಬಾರ ವಿದ್ಯಾರ್ಥಿನಿಗೆ ಪ್ರತಿಭಾ ಪುರಸ್ಕಾರ. ತಾಲೂಕು ಮಟ್ಟದ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿರುವ ಪತ್ರಕರ್ತರಾದ ರಿಯಾಜ್‌ಅಹ್ಮದ್ ಮುಲ್ಲಾ, ಹಣಮಂತ ಬೀರಗೊಂಡ, ಈಶ್ವರ ಈಳಗೇರ, ಹಣಮಂತ ಟಕ್ಕಳಕಿ(ಮುತ್ತು), ಕೃಷ್ಣಾ ಕುಂಬಾರ ಅವರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಸಂಘದ ಜಿಲ್ಲಾಧ್ಯಕ್ಷ ಪ್ರಕಾಶ್ ಬೆಣ್ಣೂರು. ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಪುಲ್ ಸಗರಿ ವೇದಿಕೆ ಮೇಲೆ ಇದ್ದರು. ಸಂಘದ ತಾಲೂಕು ಅಧ್ಯಕ್ಷ ಆರ್. ಬಿ. ವಡವಡಗಿ(ಮುತ್ತು) ಅಧ್ಯಕ್ಷತೆ ವಹಿಸಿದ್ದರು. ಸಂಘದ ಉಪಾಧ್ಯಕ್ಷ ಸಿದ್ದು ಚಲವಾದಿ, ಖಜಾಂಚಿ ಲಾಡ್ಲೇಮಶ್ಯಾಕ ನದಾಫ, ಅಮೀನ ಸಾಬ್ ಮುಲ್ಲಾ. ಪುಂಡಲಿಕ ಮುರಾಳ. ಬಸವರಾಜ ಹುಲಗಣ್ಣಿ. ಮಹಿಬೂಬ ಹಳ್ಳೂರು ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Latest News

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

BREAKING : ಕ್ರಿಸ್ ಮಸ್ ದಿನವೇ ರಾಜ್ಯದಲ್ಲಿ ಘೋರ ದುರಂತ : ಭೀಕರ ಅಪಘಾತದಲ್ಲಿ 17 ಕ್ಕೂ ಹೆಚ್ಚು ಮಂದಿ ದುರ್ಮರಣ

ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ:                  ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ: ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ತಾಳಿಕೋಟೆ : ಮಕ್ಕಳಲ್ಲಿ ಶಿಕ್ಷಣದೊಂದಿಗೆ ನಮ್ಮ ಸಂಸ್ಕೃತಿ ಸಂಸ್ಕಾರದ ಅರಿವು ಮೂಡಿಸುವ ಕಾರ್ಯ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು. ತಾಲ್ಲೂಕಿನ ಮೈಲೇಶ್ವರದ ಮಾರುತಿ ಶಿಕ್ಷಣ ಸಂಸ್ಥೆಯ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಆರಂಭಗೊAಡ ಎರಡು ದಿನಗಳ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಬ್ರಿಲಿಯಂಟ್ ಶಾಲೆ ನಮ್ಮ ಶೈಕ್ಷಣಿಕ ವಲಯದಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಅತ್ಯುತ್ತಮ ಸಾಧನೆ ತೋರುತ್ತಿದೆ.