33.57 ಲಕ್ಷ ವೆಚ್ಚದ ಕಾಲುವೆ ಬಾಕಿ ಕಾಮಗಾರಿಗೆ ಭೂಮಿ ಪೂಜೆ: ಬೂದಿಹಾಳ-ಪೀರಾಪೂರ,ನಾಗರಬೆಟ್ಟ ಏತನೀರಾವರಿ ಯೋಜನೆ ಶೀಘ್ರ ಲೋಕಾರ್ಪಣೆ

33.57 ಲಕ್ಷ ವೆಚ್ಚದ ಕಾಲುವೆ ಬಾಕಿ ಕಾಮಗಾರಿಗೆ ಭೂಮಿ ಪೂಜೆ: ಬೂದಿಹಾಳ-ಪೀರಾಪೂರ,ನಾಗರಬೆಟ್ಟ ಏತನೀರಾವರಿ ಯೋಜನೆ ಶೀಘ್ರ ಲೋಕಾರ್ಪಣೆ

ಮುದ್ದೇಬಿಹಾಳ : ಈ ಭಾಗದಲ್ಲಿ ಪ್ರಗತಿಯಲ್ಲಿರುವ ಬೂದಿಹಾಳ-ಪೀರಾಪೂರ ಹಾಗೂ ನಾಗರಬೆಟ್ಟ ಏತ ನೀರಾವರಿ ಯೋಜನೆಗಳನ್ನು ಶೀಘ್ರವೇ ದಿನಾಂಕ ನಿಗದಿ ಮಾಡಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಕೆಎಸ್‌ಡಿ ನಿಗಮದ ಅಧ್ಯಕ್ಷ, ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಹೇಳಿದರು.

ತಾಲ್ಲೂಕಿನ ನಾಲತವಾಡದ ಸಮೀಪದಲ್ಲಿರುವ ಅಮರೇಶ್ವರ ದೇವಸ್ಥಾನದ ಬಳಿ ಸ್ಥಗಿತಗೊಂಡಿದ್ದ ಚಿಮ್ಮಲಗಿ ಏತ ನೀರಾವರಿ ಪೂರ್ವ ಕಾಲುವೆಯ ಬಾಕಿ ಕಾಮಗಾರಿಗೆ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಗುರುವಾರ ಭೂಮಿ ಪೂಜೆ ನೆರವೇರಿಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಸುಮಾರು ವರ್ಷಗಳಿಂದಲೂ ನನೆಗುದಿಗೆ ಬಿದ್ದಿದ್ದ ಚಿಮ್ಮಲಗಿ ಏತ ನೀರಾವರಿ ಪೂರ್ವ ಕಾಲುವೆಯ ಕಿಮೀ 19.600 ರ ರಸ್ತೆಗೆ ಅಡ್ಡಲಾಗಿ ನಿರ್ಮಿಸುವ ಕಾಲುವೆ 33.57 ಲಕ್ಷ ಮೊತ್ತದ ಸೇತುವೆಗೆ ಚಾಲನೆ ನೀಡಲಾಗಿದೆ. ಸದ್ಯ ಚಾಲನೆ ನೀಡಲಾದ ಸೇತುವೆ ಕಾಮಗಾರಿಗೆ ಪ್ಯಾಕೇಜ್ ಕಾಮಗಾರಿಯಲ್ಲಿ ಸೇರಿಸಲಾಗಿತ್ತು. ಮನಬಂದAತೆ ಯಾರಿಗೂ ಗುತ್ತಿಗೆ ಕೊಡಬಾರದು ಎನ್ನುವ ಉದ್ದೇಶದಿಂದ ವಿಳಂಬವಾಯಿತು. ಸಿಂಗಲ್ ಗುತ್ತಿಗೆ ಅವೈಜ್ಞಾನಿಕವಾಗಿತ್ತು. ಪ್ಯಾಕೇಜ್‌ಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಈ ಕಾಮಗಾರಿ ವಿಳಂಬವಾಯಿತು ಎಂದರು.

ರೈತರ ಅಡೆತಡೆ ಮತ್ತು ಗುತ್ತಿಗೆಯ ತಾಂತ್ರಿಕ ದೋಷದ ಪರಿಣಾಮ ಹಲವು ಬಾರಿ ಕಾಮಗಾರಿ ವಿಳಂಬವಾಗಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿ ಈಗ ಕೆಲಸ ಶುರು ಮಾಡಲಾಗುತ್ತದೆ ಎಂದರು.ನಮ್ಮ ಭಾಗದ ನಾಗರಬೆಟ್ಟ ಹಾಗೂ ಬೂದಿಹಾಳ ಪೀರಾಪೂರ ಏತ ನೀರಾವರಿ ಯೋಜನೆಯೂ ಸಹ ಬಹುತೇಕ ಪೂರ್ಣಗೊಂಡಿದ್ದು ಸಿಎಂ ಹಾಗೂ ಡಿಸಿಎಂ ಅವರೊಂದಿಗೆ ಚರ್ಚಿಸಿ ದಿನಾಂಕ ನಿಗದಿ ಮಾಡಲಾಗುವುದು ಎಂದರು.

—-

ಆಮರಣ ಉಪವಾಸ ಸತ್ಯಾಗ್ರಹ ಹಿಂದಕ್ಕೆ : ಹಲವಾರು ವರ್ಷ ನನೆಗುದಿಗೆ ಬಿದ್ದಿದ್ದ ಕಾಲುವೆ ಕಾಮಗಾರಿಗೆ ಚಾಲನೆ ನೀಡಬೇಕು ಎಂದು ಆಗ್ರಹಿಸಿ ಯುವ ಜನ ಸೇನೆಯ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ನೇತೃತ್ವದಲ್ಲಿ ನ.18 ರಿಂದ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದ್ದರು.ಈ ಹಿಂದೆಯೂ ಮೂರು ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿ ಅಧಿಕಾರಿಗಳು, ಸರ್ಕಾರದ ಗಮನಕ್ಕೆ ತಂದಿದ್ದರು.ಇದಕ್ಕೆ ಸ್ಪಂದಿಸಿರುವ ಶಾಸಕ ಅಪ್ಪಾಜಿ ನಾಡಗೌಡ ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳೊಂದಿಗೆ ಮಾತನಾಡಿ ಕಾಮಗಾರಿ ಆರಂಭಕ್ಕೆ ಭೂಮಿ ಪೂಜೆ ನಡೆಸುವ ಮೂಲಕ ಹೋರಾಟಗಾರರಿಗೆ ಸ್ಪಂದಿಸಿದ್ದಾರೆ.ಹೋರಾಟಕ್ಕೆ ಅಧಿಕಾರಿಗಳು, ಸರ್ಕಾರ, ಶಾಸಕರು ಸ್ಪಂದಿಸಿರುವ ಹಿನ್ನೆಲೆಯಲ್ಲಿ ಉದ್ದೇಶಿತ ಹೋರಾಟವನ್ನು ಹಿಂದಕ್ಕೆ ಪಡೆದುಕೊಂಡಿರುವುದಾಗಿ ಹೋರಾಟಗಾರ ಶಿವಾನಂದ ವಾಲಿ ತಿಳಿಸಿದ್ದು ಆದಷ್ಟು ಬೇಗ ರೈತ ಜಮೀನುಗಳಿಗೆ ನೀರು ಹರಿಯಬೇಕು.ಜಮೀನು ಕಳೆದುಕೊಂಡವರಿಗೆ ಪರಿಹಾರ ದೊರೆಯಬೇಕು ಎಂದು DCG NEWSಗೆ ತಿಳಿಸಿದ್ದಾರೆ.

ಪ್ರಮುಖರಾದ ಮುರುಗಯ್ಯ ಕಂಠಿಮಠ, ಪ.ಪಂ ಸದಸ್ಯರಾದ ಪ್ರಥ್ವಿರಾಜ ನಾಡಗೌಡ, ಮುಖಂಡ ಗುರು ದೇಶಮುಖ, ಗುತ್ತಿಗೆದಾರ ರಾಯನಗೌಡ ತಾತರಡ್ಡಿ, ಪ.ಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಇಲಕಲ್, ಉಪಾಧ್ಯಕ್ಷ ಬಸವರಾಜ ಗಂಗನಗೌಡ್ರ, ಸಿಒ ಈರಣ್ಣ ಕೊಣ್ಣೂರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ವಾಯ್.ಎಚ್.ವಿಜಯಕರ್, ಲಲಿತಾ ಗೋರಬಾಳ, ರಾಜಬಿ ನಾಡದಾಳ, ಯಮನಪ್ಪ ಬಂಡಿವಡ್ಡರ, ಕೆಬಿಜೆಎನ್‌ಎಲ್ ಎಇ ಅಮರೇಗೌಡ, ಮುತ್ತು ಗೋರಬಾಳ,ಎಇ ಅಬೂಬಕರ್ ಬಾಗವಾನ, ಸುನಿಲಕುಮಾರ , ಮಹಾಂತೇಶ ಗಂಗನಗೌಡ್ರ , ಉಮರ್ ಮೂಲಿಮನಿ, ಬಾಬು ಕ್ಷತ್ರಿ, ಅಮರಪ್ಪ ಸೀರಿ, ಅಲ್ಲಾಭಕ್ಷ ಮೂಲಿಮನಿ ಇದ್ದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ