ಮುದ್ದೇಬಿಹಾಳ : ಪಟ್ಟಣದ ಸರ್ಕಾರಿ ಆಸ್ಪತ್ರೆಯ ನವೀಕರಣ ಕಾರ್ಯದ ಭೂಮಿಪೂಜೆ ಹಾಗೂ ತಾಲ್ಲೂಕು ಆಸ್ಪತ್ರೆಯ ಆರೋಗ್ಯ ಘಟಕ ಪ್ರಯೋಗಾಲಯದ ಉದ್ಘಾಟನಾ ಸಮಾರಂಭಕ್ಕೆ ಶಾಸಕ ಸಿ.ಎಸ್.ನಾಡಗೌಡ ಗುರುವಾರ ಚಾಲನೆ ನೀಡಿದರು.
ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಶಾಸಕರು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಆಸ್ಪತ್ರೆಯ ನವೀಕರಣಕ್ಕೆ 2 ಕೋಟಿ ರೂ. ವೆಚ್ಚದಲ್ಲಿ ನಿರ್ವಹಿಸಲಾಗುವುದು. 55 ಲಕ್ಷ ರೂ. ವೆಚ್ಚದಲ್ಲಿ ಪ್ರಯೋಗಾಲಯ ಉದ್ಘಾಟಿಸಲಾಗಿದೆ ಎಂದು ಆಡಳಿತ ವೈದ್ಯಾಧಿಕಾರಿ ಡಾ. ಅನೀಲಕುಮಾರ ಶೇಗುಣಸಿ ತಿಳಿಸಿದರು.
ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಉದ್ಯಮಿ ಎ.ಗಣೇಶ ನಾರಾಯಣಸ್ವಾಮಿ, ಸಂಗನಗೌಡ ಬಿರಾದಾರ, ಕೆಯುಸಿ ಬ್ಯಾಂಕ್ ಅಧ್ಯಕ್ಷ ಸಿ.ಎಲ್.ಬಿರಾದಾರ, ವಕೀಲರಾದ ಬಿ.ಎ.ನಾಡಗೌಡ, ವೈದ್ಯರು, ಆಸ್ಪತ್ರೆಯ ಸಿಬ್ಬಂದಿ ಇದ್ದರು.