ಮುದ್ದೇಬಿಹಾಳ : ಧರ್ಮಸ್ಥಳದ ಧರ್ಮಾಧಿಕಾರ ವೀರೇಂದ್ರ ಹೆಗ್ಗಡೆಯವರು ಸಮಾಜದ ಕೆಳಸ್ತರದಲ್ಲಿರುವವಷ್ಟೇ ಅಲ್ಲದೇ ಮದ್ಯದ ವ್ಯಸನಿಗಳು ದುಶ್ಚಟಗಳಿಂದ ದೂರವಾಗಿ ಗೌರವದ ಬದುಕು ನಡೆಸುವಂತಾಗಬೇಕು ಎಂಬ ಸದುದ್ಧೇಶ ಹೊಂದಿದ ಕಾರ್ಯಕ್ರಮವಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಸಂತೋಷಕುಮಾರ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಮುದ್ದೇಬಿಹಾಳ ತಾಲೂಕು,ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ ಬೆಳ್ತಂಗಡಿ,ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ ವಿಜಯಪುರ ,ಶ್ರೀ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನ ಕೇಂದ್ರ, ಉಜಿರೆ ಹಾಗೂ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ತಾಲ್ಲೂಕಿನ ಬಿದರಕುಂದಿ ಗ್ರಾಮದಲ್ಲಿ ಶುಕ್ರವಾರದಿಂದ ಹಮ್ಮಿಕೊಂಡಿರುವ 2027 ನೇ ಮದ್ಯವರ್ಜನ ಶಿಬಿರ ಉದ್ಘಾಟಿಸಿ ಮಾತನಾಡಿದರು.
ನಿವೃತ್ತ ಡಿವೈಎಸ್ಪಿ ಎಸ್.ಎಸ್.ಹುಲ್ಲೂರು ಮಾತನಾಡಿ, ಪರಿವರ್ತನೆ ಜಗದ ನಿಯಮ ಎಂಬAತೆ ಅರಿತು ಅಥವಾ ಅರಿಯದೆ ಮಾಡಿದ ದುಶ್ಚಟದಿಂದ ಮುಕ್ತರಾಗಿ ಉತ್ತಮ ಜೀವನವನ್ನು ಕಟ್ಟಿಕೊಂಡು ಸಮಾಜದಲ್ಲಿ ಒಳ್ಳೆಯ ವ್ಯಕ್ತಿಯಾಗಿ ಜೀವನವನ್ನು ಸಾಗಿಸಬೇಕು ಎಂದು ತಿಳಿಸಿದರು.
ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮಾಂತಗೌಡ ಸಿ ಬಿರಾದಾರ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಡಾ. ವೀರೇಶ ಪಾಟೀಲ್ ,ತಾಲ್ಲೂಕು ಯೋಜನಾಧಿಕಾರಿ ನಾಗೇಶ್, ಯೋಜನಾಧಿಕಾರಿ ಶಿವಾನಂದ .ಪಿ, ಮಧ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳು ಇದ್ದರು.ನಿಂಗನಗೌಡ ಪಾಟೀಲ್ ನಿರೂಪಿಸಿದರು.ಜಗದೀಶ ಸುರ್ವೆ ವಂದಿಸಿದರು.







