ಬಿದರಕುಂದಿ : ಮದ್ಯವರ್ಜನಾ ಶಿಬಿರಕ್ಕೆ ಚಾಲನೆ: ದುಶ್ಚಟಗಳಿಂದ ಮುಕ್ತರಾಗಿ ಒಳ್ಳೆಯ ಬದುಕು ಸಾಗಿಸಿ-ಸಂತೋಷಕುಮಾರ

ಬಿದರಕುಂದಿ : ಮದ್ಯವರ್ಜನಾ ಶಿಬಿರಕ್ಕೆ ಚಾಲನೆ: ದುಶ್ಚಟಗಳಿಂದ ಮುಕ್ತರಾಗಿ ಒಳ್ಳೆಯ ಬದುಕು ಸಾಗಿಸಿ-ಸಂತೋಷಕುಮಾರ

ಮುದ್ದೇಬಿಹಾಳ : ಧರ್ಮಸ್ಥಳದ ಧರ್ಮಾಧಿಕಾರ ವೀರೇಂದ್ರ ಹೆಗ್ಗಡೆಯವರು ಸಮಾಜದ ಕೆಳಸ್ತರದಲ್ಲಿರುವವಷ್ಟೇ ಅಲ್ಲದೇ ಮದ್ಯದ ವ್ಯಸನಿಗಳು ದುಶ್ಚಟಗಳಿಂದ ದೂರವಾಗಿ ಗೌರವದ ಬದುಕು ನಡೆಸುವಂತಾಗಬೇಕು ಎಂಬ ಸದುದ್ಧೇಶ ಹೊಂದಿದ ಕಾರ್ಯಕ್ರಮವಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಸಂತೋಷಕುಮಾರ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಮುದ್ದೇಬಿಹಾಳ ತಾಲೂಕು,ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ ಬೆಳ್ತಂಗಡಿ,ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ ವಿಜಯಪುರ ,ಶ್ರೀ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನ ಕೇಂದ್ರ, ಉಜಿರೆ ಹಾಗೂ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ತಾಲ್ಲೂಕಿನ ಬಿದರಕುಂದಿ ಗ್ರಾಮದಲ್ಲಿ ಶುಕ್ರವಾರದಿಂದ ಹಮ್ಮಿಕೊಂಡಿರುವ 2027 ನೇ ಮದ್ಯವರ್ಜನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ನಿವೃತ್ತ ಡಿವೈಎಸ್ಪಿ ಎಸ್.ಎಸ್.ಹುಲ್ಲೂರು ಮಾತನಾಡಿ, ಪರಿವರ್ತನೆ ಜಗದ ನಿಯಮ ಎಂಬAತೆ ಅರಿತು ಅಥವಾ ಅರಿಯದೆ ಮಾಡಿದ ದುಶ್ಚಟದಿಂದ ಮುಕ್ತರಾಗಿ ಉತ್ತಮ ಜೀವನವನ್ನು ಕಟ್ಟಿಕೊಂಡು ಸಮಾಜದಲ್ಲಿ ಒಳ್ಳೆಯ ವ್ಯಕ್ತಿಯಾಗಿ ಜೀವನವನ್ನು ಸಾಗಿಸಬೇಕು ಎಂದು ತಿಳಿಸಿದರು.

ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮಾಂತಗೌಡ ಸಿ ಬಿರಾದಾರ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಡಾ. ವೀರೇಶ ಪಾಟೀಲ್ ,ತಾಲ್ಲೂಕು ಯೋಜನಾಧಿಕಾರಿ ನಾಗೇಶ್, ಯೋಜನಾಧಿಕಾರಿ ಶಿವಾನಂದ .ಪಿ, ಮಧ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳು ಇದ್ದರು.ನಿಂಗನಗೌಡ ಪಾಟೀಲ್ ನಿರೂಪಿಸಿದರು.ಜಗದೀಶ ಸುರ್ವೆ ವಂದಿಸಿದರು.

Latest News

ನಿಯೋಜಿತ ಕನ್ನಡ ಸಾಹಿತ್ಯಭವನ ನಿರ್ಮಾಣಕ್ಕೆ ಸ್ಥಳ ನಿಗದಿ

ನಿಯೋಜಿತ ಕನ್ನಡ ಸಾಹಿತ್ಯಭವನ ನಿರ್ಮಾಣಕ್ಕೆ ಸ್ಥಳ ನಿಗದಿ

ಮುದ್ದೇಬಿಹಾಳ : ಸಾಹಿತ್ಯ ಚಟುವಟಿಕೆಗಳನ್ನು ಕೈಗೊಳ್ಳಲು ಪಟ್ಟಣದ ಆಲಮಟ್ಟಿ ರಸ್ತೆಯ ಬಳಿ ಇರುವ ಸಾಯಿಮಂದಿರ

‘ಹೃದಯದ ಅಂತರoಗದ ಗೋಡೆಯಲ್ಲಿ ಕನ್ನಡ ಶಾಶ್ವತವಾಗಿ ನೆಲೆಸಲಿ’

‘ಹೃದಯದ ಅಂತರoಗದ ಗೋಡೆಯಲ್ಲಿ ಕನ್ನಡ ಶಾಶ್ವತವಾಗಿ ನೆಲೆಸಲಿ’

ಮುದ್ದೇಬಿಹಾಳ : ಇಂದಿನ ಆಧುನಿಕ ಕಾಲದಲ್ಲಿ ಇಂಗ್ಲಿಷ್ ಭಾಷೆಯ ಅವಶ್ಯಕತೆ ಇದೆ ಎಂಬುದನ್ನು ನಾವು

ಮುದ್ದೇಬಿಹಾಳ ಬಂದ್ ಸಂಪೂರ್ಣ ಯಶಸ್ವಿ:  ಕಾರ್ಖಾನೆಯವರು ಉಲ್ಟಾ ಹೊಡೆದಿದ್ದಾರೆ-ಶಾಂತಗೌಡ ಪಾಟೀಲ್

ಮುದ್ದೇಬಿಹಾಳ ಬಂದ್ ಸಂಪೂರ್ಣ ಯಶಸ್ವಿ: ಕಾರ್ಖಾನೆಯವರು ಉಲ್ಟಾ ಹೊಡೆದಿದ್ದಾರೆ-ಶಾಂತಗೌಡ ಪಾಟೀಲ್

ಮುದ್ದೇಬಿಹಾಳ : ಕಬ್ಬು ಬೆಳೆಗಾರರ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ

ಬೆಳೆ ಸರ್ವೆಯಲ್ಲಿ ಭಾರೀ ಲೋಪ; ಅಧಿಕಾರಿಗಳು,ಜನಪ್ರತಿನಿಧಿಗಳು ರೈತರ ಕತ್ತು ಕೊಯ್ಯಬೇಡಿ-ಶಾಂತಗೌಡ ಪಾಟೀಲ್

ಬೆಳೆ ಸರ್ವೆಯಲ್ಲಿ ಭಾರೀ ಲೋಪ; ಅಧಿಕಾರಿಗಳು,ಜನಪ್ರತಿನಿಧಿಗಳು ರೈತರ ಕತ್ತು ಕೊಯ್ಯಬೇಡಿ-ಶಾಂತಗೌಡ ಪಾಟೀಲ್

ಮುದ್ದೇಬಿಹಾಳ : ಕಳೆದ ಬಾರಿ ರೈತರಿಗೆ ಬೆಳೆ ವಿಮೆ ನೀಡುವ ಸಮಯದಲ್ಲಿ ಸಮೀಕ್ಷೆ ಸರಿಯಾಗಿ

ಶಾಸಕ ನಾಡಗೌಡರ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ:  ‘ನಿನ್ನ ಹಾಗೆ ಹವಾಯಿ ಚಪ್ಪಲಿ ಹಾಕಿಕೊಂಡು ನಾನು ನಾಟಕ ಮಾಡಿಲ್ಲ’-ನಡಹಳ್ಳಿ’

ಶಾಸಕ ನಾಡಗೌಡರ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ: ‘ನಿನ್ನ ಹಾಗೆ ಹವಾಯಿ ಚಪ್ಪಲಿ ಹಾಕಿಕೊಂಡು ನಾನು ನಾಟಕ ಮಾಡಿಲ್ಲ’-ನಡಹಳ್ಳಿ’

ಮುದ್ದೇಬಿಹಾಳ : ನಾನು ನಿಮ್ಮ ಹಾಗೆ ಹವಾಯಿ ಚಪ್ಪಲ ಹಾಕಿಕೊಂಡು ನಾಟಕ ಮಾಡಿಲ್ಲ.ಬೆಂಗಳೂರು ತುಂಬ ಆಸ್ತಿ ಮಾಡಿಲ್ಲ.ಶಾಲಾ,ಕಾಲೇಜು ಮಕ್ಕಳಿಗೆ ಪುಸ್ತಕ ಕೊಟ್ಟರೂ ಇವರಿಗೆ ಸಂಕಟ.ನನ್ನ ಸಾಮಾಜಿಕ ಸೇವೆಯನ್ನು ತಿರುಚಿ ಮಾತನಾಡುತ್ತಿರುವ ಶಾಸಕ ನಾಡಗೌಡರಿಗೆ ಬುದ್ಧಿಭ್ರಮಣೆಯಾಗಿದೆ ಎಂದು ಮಾಜಿ ಶಾಸಕ,ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ವಾಗ್ದಾಳಿ ಮಾಡಿದರು. ಪಟ್ಟಣದ ತಮ್ಮ ಫಾರಂ ಹೌಸ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಹಿರೇಮುರಾಳದ ಕಾರ್ಯಕ್ರಮವೊಂದರಲ್ಲಿ ನನ್ನ ಹೆಸರು ಉಲ್ಲೇಖಿಸದೇ ಶಾಲಾ,ಕಾಲೇಜು ಮಕ್ಕಳಿಗೆ

ಬರಗಾಲದಲ್ಲಿ ಸನ್ಮಾನ ಸಾಮಗ್ರಿ ತರಬೇಡಿ-ಶಾಸಕ ಸಿ.ಎಸ್.ನಾಡಗೌಡ

ಬರಗಾಲದಲ್ಲಿ ಸನ್ಮಾನ ಸಾಮಗ್ರಿ ತರಬೇಡಿ-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವರು ತಮ್ಮ ರಾಜಕೀಯ ಲಾಭಕ್ಕೋಸ್ಕರ ಜನರಲ್ಲಿ ಇಲ್ಲಸಲ್ಲದ ವಿಚಾರಗಳನ್ನು ತುಂಬುವುದು.ಇರುವAತಹ ವಾತಾವರವನ್ನು ಹದಗೆಡಿಸುವುದು ಮಾಡುತ್ತಾರೆ.ಜನರು ಇಂತಹದ್ದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ತಾಲ್ಲೂಕಿನ ಹಿರೇಮುರಾಳದಲ್ಲಿ ಲೋಕೋಪಯೋಗಿ ಇಲಾಖೆಯಿಂದ 2025-26ನೇ ಸಾಲಿನ ಶಿರಾಡೋಣ ಲಿಂಗಸೂರ ರಾಜ್ಯ ಹೆದ್ದಾರಿ-41ರಲ್ಲಿ ಬರುವ ಸೇತುವೆಗಳ ಪುನರ್‌ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ನಾನು ಯಾವತ್ತೂ ಜನರಿಗೆ,ಶಾಲೆ,ಕಾಲೇಜು ಮಕ್ಕಳಿಗೆ ಡಾಬಾಗೆ ಹೋಗು,10 ಸಾವಿರ ರೂ.ತಗೆದಕೊಂಡು ಊಟ ಮಾಡು ಎಂದು ಹೇಳುವ ಅಭ್ಯಾಸ