Guarantee schemes CM Siddaramaiah guarantee for guarantee schemes

BIG BREAKING: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರು

BIG BREAKING: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರು

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್ ಚಂದ್‌ ಗೆಹೋಟ್ ಅಬರು ಗ್ರೀನ್ ಸಿಗ್ನಲ್‌ ನೀಡಿದ್ದಾರೆ.

Join Our Telegram: https://t.me/dcgkannada

ಈ ಕುರಿತಾದ ಆದೇಶವನ್ನು ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರವಾನೆ ಮಾಡಿದ್ದಾರೆ. ಇದರಿಂದ ರಾಜ್ಯ ಸರ್ಕಾರ ಇಕ್ಕಟಿಗೆ ಸಿಲುಕಿದ್ದು, ಮುಂದಿನ ನಡೆಯ ಕುರಿತು ಚರ್ಚಿಸಲು ಸಚಿವರ ದಂಡು ಸಿದ್ದರಾಮಯ್ಯ‌ ಮನೆಗೆ ಆಗಮಿಸುತ್ತಿದ್ದಾರೆ.

ಇದನ್ನೂ ಓದಿ: Cubbon park: ವೃದ್ಧನಿಂದ ಹೀನ ಕೃತ್ಯ.. ಕಬ್ಬನ್ ಪಾರ್ಕ್‌ ನಲ್ಲಿ ಮಹಿಳೆಯರ ಎದುರೇ ಹಸ್ತಮೈಥುನ.. (ವೈರಲ್ ವಿಡಿಯೋ ನೋಡಿ)

ರಾಜ್ಯಪಾಲರ ಆದೇಶ ಪ್ರಶ್ನಿಸಿ ಕಾನೂನು ಹೋರಾಟ ಮಾಡುವ ಆಯ್ಕೆ ಸಿದ್ದರಾಮಯ್ಯ‌ ಮತ್ತು ತಂಡದ ಎದುರು ಇದೆ.

ಮುಡಾ ಹಗರಣ.. ಸಿಎಂ ಪರ ಅರ್ಜಿ ವಜಾಗೊಳಿಸಿ ಆ.21ಕ್ಕೆ ವಿಚಾರಣೆ ಮುಂದೂಡಿದ್ದ ಕೋರ್ಟ್

ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದ ಆರೋಪ ಕುರಿತಾದಂತೆ ಪ್ರಕರಣದ ಅರ್ಜಿಯ ವಿಚಾರಣೆಯನ್ನು ಆಗಸ್ಟ್ 21ಕ್ಕೆ ಮುಂದೂಡಿತ್ತು. ಈಗ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ.

ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ಹಾಗೂ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ನಡೆಸಲಾಯಿತು.

ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಆರೋಪದ ಸಂಬಂಧ ಸ್ನೇಹಮಯಿ ಕೃಷ್ಣ ಅರ್ಜಿಯ ವಿಚಾರಣೆ ನಡೆಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಆಗಸ್ಟ್ 20ರಂದು ವಿಚಾರಣೆಗೆ ಸ್ವೀಕರಿಸುವುದಾಗಿ ತಿಳಿಸಿ, ಆಗಸ್ಟ್ 21ಕ್ಕೆ ವಿಚಾರಣೆಯನ್ನು ಮುಂದೂಡಿತ್ತು.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪರವಾಗಿ ಸಲ್ಲಿಕೆಯಾಗಿದ್ದ ಮಧ್ಯಂತರ ಅರ್ಜಿಯನ್ನು ಕೋರ್ಟ್ ವಜಾಗೊಳಿದ್ದು, ಸಿಎಂ ಸಂಕಷ್ಟ ಎದುರಾಗುವ ಸಾಧ್ಯತೆ ದಟ್ಟವಾಗಿದೆ.

ಹೌದು, ಸಿಎಂ ಸಿದ್ದರಾಮಯ್ಯ‌ ವಿರುದ್ಧ ಸ್ನೇಹಮಯಿ ಕೃಷ್ಣ ಎನ್ನುವವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಏತ್ಮಮಧ್ಯೆ, ಆಲಂ ಪಾಷಾ ಪ್ರಾಸಿಕ್ಯೂಷನ್ ಅನುಮತಿ ಇಲ್ಲದೆ ಸಿಎಂ ವಿರುದ್ಧ ಪ್ರಕರಣವನ್ನೇ ಸ್ವೀಕರಿಸಬಾರದು ಎಂದು ಮಧ್ಯಂತರ ಅರ್ಜಿ ಸಲ್ಲಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ಸಿಎಂ ಪರ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಕೋರ್ಟ್ ಆದೇಶವನ್ನು ನೀಡಿದೆ. ಅಲ್ಲದೆ, ವಿಚಾರಣೆಯ ವೇಳೆ ಆಲಂ ಪಾಷಾ ಎನ್ನುವವರು ಪ್ರಾಜಸಿಕ್ಯೂಷನ್ ಗೆ ಅನುಮತಿ ಇಲ್ಲದೆ, ಸಿಎಂ ಕೇಸ್ ಸ್ವೀಕರಿಸದಂತೆ ಅರ್ಜಿಯನ್ನು ಯಾವ ಕಾನೂನಿನ ಅಡಿ ಅರ್ಜಿ ಸಲ್ಲಿಸಿದ್ದೀರಾ ಎಂದು ಮಧ್ಯಂತರ ಅರ್ಜಿದಾರರಿಗೆ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಪ್ರಶ್ನಿಸಿದ್ದಾರೆ. ಈ ವೇಳೆ ಸಾರ್ವಜನಿಕ ಹಿತಾಸಕ್ತಿಯಿಂದ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದರು.

ಆಲಂ ಪಾಷಾ ಅವರ ಈ ವಾದಕ್ಕೆ ಜಡ್ಜ್ ಸಂತೋಷ ಗಜಾನನ ಭಟ್ ಅಸಮಾಧಾನ ವ್ಯಕ್ತಪಡಿಸಿದರು. ಅರ್ಜಿದಾರ ಆಲಂಪಾಷ ದೂರು ದಾಖಲಿಸಲು ಅನುಮತಿ ಕೇಳುತ್ತಿಲ್ಲ. ಬದಲಿಗೆ ಕಾನೂನಿನ ಪ್ರಕ್ರಿಯೆನ್ನೇ ತಡೆಹಿಡಿಯಲು ಕೇಳುತ್ತಿದ್ದಾರೆ. ಹೀಗಾಗಿ, ಆಲಂಪಾಷ ಅರ್ಜಿ ವಜಾ ಗೊಳಿಸಲು ಅರ್ಹ ಎಂದು ಕೋರ್ಟ್ ಆದೇಶ ಹೊರಡಿಸಿದೆ.

ಈ ವೇಳೆ ಆಲಂ ಪಾಷ ವಾದಕ್ಕೆ ಸ್ನೇಹಮಯಿ ಕೃಷ್ಣ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿ, ಸಂಬಂಧವಿಲ್ಲದ ವ್ಯಕ್ತಿಯ ವಾದ ಆಲಿಸಬಾರದು. ಕೋರ್ಟ್ ಸಮಯ ವ್ಯರ್ಥ ಮಾಡಿರುವುದಕ್ಕೆ ದಂಡ ವಿಧಿಸಬೇಕು ಎಂದು ದೂರುದಾರರ ಸ್ನೇಹಮಹಿನ ಕೃಷ್ಣ ಪರ ಹಿರಿಯ ವಕೀಲೆ ಲಕ್ಷ್ಮಿ ಅಯ್ಯಂಗಾರ್ ವಾದ ಮಂಡಿಸಿದರು.

ವಿಚಾರಣೆ ಸಂದರ್ಭದಲ್ಲಿದಲ್ಲಿ ಪಿಸಿಆರ್ ಅಂದರೆ ಪಬ್ಲಿಕ್ ಕಂಟ್ರೋಲ್ ರೂಂ ಎಂದು ಆಲಂಪಾಷ ಹೇಳಿದಾಗ, ಪಿ ಸಿ ಆರ್ ಎಂದರೇನು ಎಂದು ತಿಳಿಯದೆ ಅರ್ಜಿ ಸಲ್ಲಿಸಿದ್ದೀರಾ? ಕೋರ್ಟ್ನಲ್ಲಿ ತಮಾಷೆ ಮಾಡುತ್ತಿದ್ದೀರಾ ಎಂದು ಜಡ್ಜ್ ತರಾಟೆಗೆ ತೆಗೆದುಕೊಂಡಿದರು. ಅಲ್ಲದೆ, ನೀವು ಸಂತ್ರಸ್ತರಾ? ಅಥವಾ ದೂರುದಾರರಾ? ಸ್ಪಷ್ಟಪಡಿಸಿ ಎಂದು ಜಡ್ಜ್ ಗರಂ ಆಗಿ ಸೂಚಿಸಿದರು.

Latest News

ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಮುದ್ದೇಬಿಹಾಳ : ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ತಾವು ಹಣಕ್ಕೆ ಬೇಡಿಕೆ ಇಟ್ಟಿರುವುದಾಗಿ ತಮ್ಮ

ದಸ್ತು ಬರಹಗಾರರ ಸಂಘಕ್ಕೆ ಆಯ್ಕೆ

ದಸ್ತು ಬರಹಗಾರರ ಸಂಘಕ್ಕೆ ಆಯ್ಕೆ

ಮುದ್ದೇಬಿಹಾಳ : ತಾಲೂಕಾ ದಸ್ತು ಬರಹಗಾರರ ಸಂಘದ ನೂತನ ಪದಾಧಿಕಾರಿಗಳನ್ನು ಈಚೇಗೆ ಆಯ್ಕೆ ಮಾಡಲಾಯಿತು.

ಹೋರಾಟಗಾರನಿಂದ ಹಣಕ್ಕೆ ಬೇಡಿಕೆ : ಪುರಸಭೆ ಅಧ್ಯಕ್ಷ ಗೊಳಸಂಗಿ ಆರೋಪ

ಹೋರಾಟಗಾರನಿಂದ ಹಣಕ್ಕೆ ಬೇಡಿಕೆ : ಪುರಸಭೆ ಅಧ್ಯಕ್ಷ ಗೊಳಸಂಗಿ ಆರೋಪ

ಮುದ್ದೇಬಿಹಾಳ : ತಾಲ್ಲೂಕು ಪಂಚಾಯಿತಿಗೆ ಸೇರಿದ ವಸತಿ ಗೃಹಗಳನ್ನು ನೆಲಸಮಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಪುರಸಭೆ

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ಮುದ್ದೇಬಿಹಾಳ : ಗ್ರಾಮದ ದೇವತೆ ಜಾತ್ರೆಯ ಸಮಯದಲ್ಲಿ ಪಟ್ಟಣದ ಲಕ್ಷ್ಮಿ ಚಿತ್ರಮಂದಿರದ ಎದುರಿಗೆ ಇರುವ

ಆ.12 ರಂದು ಕಿಲ್ಲಾ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ

ಆ.12 ರಂದು ಕಿಲ್ಲಾ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ

ಮುದ್ದೇಬಿಹಾಳ : ಪಟ್ಟಣದ ಕಿಲ್ಲಾ ಗಲ್ಲಿಯಲ್ಲಿರುವ ಗುಗ್ಗಳ ಬಸವೇಶ್ವರ ಹಾಗೂ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಆ.12 ರಂದು ನಡೆಸಲು ಊರಿನ ದೈವದವರು ನಿರ್ಣಯ ಕೈಗೊಂಡಿದ್ದಾರೆ. ಪಟ್ಟಣದ ಕುಂಬಾರ ಓಣಿಯಲ್ಲಿರುವ ಗ್ರಾಮದೇವತೆ ದೇವಸ್ಥಾನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವದ ಕುರಿತ ಪೂರ್ವಭಾವಿ ಸಭೆಯಲ್ಲಿ ಜಾತ್ರೆಯ ಕುರಿತು ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಯಿತು. ವೇ.ಆಯ್.ಬಿ.ಹಿರೇಮಠ ಮಾತನಾಡಿ, ಆ.12 ರಂದು ದೇವರನ್ನು ಗಂಗಸ್ಥಳಕ್ಕೆ ಕರೆದೊಯ್ಯುವುದು,9ಕ್ಕೆ ಪಿಲೇಕೆಮ್ಮ ದೇವಸ್ಥಾನದಿಂದ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಮುದ್ದೇಬಿಹಾಳ : ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಮಾದರಿ ಎಸ್.ಸಿ.ಎಸ್.ಟಿ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನಿತ್ಯವೂ ವಿದ್ಯಾರ್ಥಿಗಳ ಓಡಾಟಕ್ಕೆ ನಗರ ಸಾರಿಗೆ ಬಸ್‌ನ್ನು ಮಂಗಳವಾರದಿಂದ ಆರಂಭಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಎಸ್.ಎಲ್.ಪಾಟೀಲ್ ತಿಳಿಸಿದ್ದಾರೆ. ಪಟ್ಟಣದ ಬಸ್ ನಿಲ್ದಾಣದಿಂದ ಕಾಲೇಜಿಗೆ ಸುಮಾರು 1.50 ಕಿ.ಮೀ ದೂರವಿದ್ದು ವಿದ್ಯಾರ್ಥಿಗಳು, ಉಪನ್ಯಾಸಕರ ಓಡಾಟಕ್ಕೆ ಸಮಸ್ಯೆಯಾಗಿದ್ದನ್ನು ಸಾರಿಗೆ ಘಟಕದ ಅಧಿಕಾರಿಗಳ ಗಮನಕ್ಕೆ ತಂದಾಗ ಕೂಡಲೇ ನಗರ ಸಾರಿಗೆ ಬಸ್ ಆರಂಭಕ್ಕೆ ಕ್ರಮ ಕೈಗೊಂಡಿದ್ದಾರೆ ಎಂದು