Big relief for former CM BSY

ಮಾಜಿ ಸಿಎಂ BSYಗೆ ಬಿಗ್ ರಿಲೀಫ್!

ಮಾಜಿ ಸಿಎಂ BSYಗೆ ಬಿಗ್ ರಿಲೀಫ್!

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಸಿಎಂ‌ ಸಿದ್ದರಾಮಯ್ಯ‌, ಡಿಸಿಎಂ ಡಿ.ಕೆ ಶಿವಕುಮಾರ್ ಮತ್ತು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಕಾನೂನು ಕಂಟಕ ಎದುರಾಗುತ್ತಿದೆ. ಏತನ್ಮಧ್ಯೆ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (BSY) ಅವರಿಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್ ಸಿಕ್ಕಿದೆ.

Join Our Telegram: https://t.me/dcgkannada

ಹೌದು, ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕೋ ಕೇಸ್ ಎದುರಿಸುತ್ತಿರುವ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರನ್ನು ಬಂಧಿಸಲು ಈಗಿರುವ ತಡೆಯಾಜ್ಞೆ ತೆರವುಗೊಳಿಸುವಂತೆ ಸಿಐಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಬಿಎಸ್ ವೈಗೆ ತಾತ್ಕಾಲಿಕವಾಗಿ ರಿಲೀಫ್ ನೀಡಿದೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂ.ನಾಗಪ್ರಸನ್ನ ಅವರ ಪೀಠವು, ಸೆ.30ಕ್ಕೆ ಮಧ್ಯಂತರ ಆದೇಶವನ್ನು ಮುಂದೂಡಿ ಆದೇಶವನ್ನು ನೀಡಿದೆ.
ಯಡಿಯೂರಪ್ಪ(BSY) ಅವರನ್ನು ಬಂಧಿಸದಂತೆ ತಡೆ ನೀಡಿದ್ದ ಆದೇಶ ತೆರವು ಮಾಡಬೇಕು ಎಂದು ಕೋರಿ ಸಿಐಡಿ ಎಸ್ ಪಿಪಿ ಅಶೋಕ್ ನಾಯಕ್ ಅವರು ಅರ್ಜಿ ಸಲ್ಲಿಸಿದ್ದರು.

ಪೋಕೋ ಕೇಸ್ ಕುರಿತು ತನಿಖೆ ಪೂರ್ಣಗೊಳಿಸಿದ್ದ ಸಿಐಡಿ, ಈ ಹಿಂದೆ ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್‌ ಸಲ್ಲಿಕೆ ಮಾಡಿತ್ತು. ಇದರಿಂದ ಬಂಧನ ಭೀತಿಯಿಂದ ತಮ್ಮ ವಿರುದ್ಧದ ಪೋಕೋ ಪ್ರಕರಣ ರದ್ದುಗೊಳಿಸುವಂತೆ ಕೋರಿ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು.

ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶ ನೀಡಿತ್ತು. ಈ ಆದೇಶ ರದ್ದು ಕೋರಿ ಸಿಐಡಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಹಿನ್ನೆಲೆ ಇಂದು ಕೋರ್ಟ್ ವಿಚಾರಣೆ ನಡೆಸಿದೆ. BSY ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಅವರು ವಾದ ಮಂಡಿಸಿದರು.

ಪ್ರಕರಣದ ಹಿನ್ನೆಲೆ ಏನು?

ತಾಯಿಯೋರ್ವಳು ತನ್ನ ಅಪ್ರಾಪ್ತ ಪುತ್ರಿಯೊಂದಿಗೆ ಸಹಾಯ ಕೋರಿ ಯಡಿಯೂರಪ್ಪ ಅವರ ಮನೆಗೆ ಕಳೆದ ಫೆ.2ರಂದು ಬಂದಿದ್ದರು. ಆಗ ಮಹಿಳೆಯ ಪುತ್ರಿಯ ಮೇಲೆ ಬಿಎಸ್‌ವೈ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಮಾ.3ರಂದು ಅರ್ಜಿದಾರರು ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು.

ಬಳಿಕ, ಬಾಲಕಿಯ ತಾಯಿ ಕಾರಣಾಂತರದಿಂದ ಮೃತಪಟ್ಟಿದ್ದರು. ಪ್ರಕರಣದ ಗಂಭೀರತೆಯಿಂದ ಸರ್ಕಾರ ಈ ಪೋಕೋ ಆರೋಪದ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿತ್ತು.

ಸಿಎಂ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಗೆ BIG SHOCK..!

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿದ ಬೆನ್ನಲ್ಲೇ ಇದೀಗ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ಗೆ ಬಿಗ್ ಶಾಕ್ ಎದುರಾಗಿದೆ. (Lokayukta vs DKS)

ಹೌದು, ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆಶಿಗೆ ಲೋಕಾಯುಕ್ತ ಪೊಲೀಸರು (Lokayukta vs DKS) ನೋಟಿಸ್‌ ನೀಡಿ, ಇಂದೇ ವಿಚಾರಣೆಗೆ ಹಾಜರಾಗುವಂತೆ ತಾಕೀತು ಮಾಡಿದ್ದಾರೆ.

ಇದನ್ನೂ ಓದಿ: Murder case: ಆಸ್ತಿಗಾಗಿ ಮೂವರು ಅಕ್ಕಂದಿರೇ ತಮ್ಮನನ್ನು ಕೊಚ್ಚಿ.. ಕೊಚ್ಚಿ.. ಕೊಂದೆ ಬಿಟ್ರು..!

ಹೀಗಾಗಿ, ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯ ಬಳಿಕ ಡಿ.ಕೆ ಶಿವಕುಮಾರ್ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

Latest News

ಚೆನ್ನೈ ವಿರುದ್ಧ ಸೋಲು : ಪ್ಲೇ ಆಪ್ ನಿಂದ ಕೋಲ್ಕತ್ತ ಔಟ್

ಚೆನ್ನೈ ವಿರುದ್ಧ ಸೋಲು : ಪ್ಲೇ ಆಪ್ ನಿಂದ ಕೋಲ್ಕತ್ತ ಔಟ್

ಕೋಲ್ಕತ್ತ: ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಚೆನ್ನೈ ವಿರುದ್ಧ ಸೋಲುವ ಮೂಲಕ

ನಾಲತವಾಡ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಾಲತವಾಡ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಾಲತವಾಡ: ಕೆಎಸ್ಆರ್.ಟಿಸಿ ಬಸ್ ಗೆ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟಿರುವ ಘಟನೆ ಆರೇಶಂಕರ ಕ್ರಾಸ್

ಅಭ್ಯುದಯ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಅಭ್ಯುದಯ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಮುದ್ದೇಬಿಹಾಳ : ಪಟ್ಟಣದ ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ ಮುದ್ದೇಬಿಹಾಳ, ಕೋಳೂರು, ಅಡವಿ

ನಿರ್ಲಕ್ಷ್ಯದ ವಿರುದ್ಧ ಆಕ್ರೋಶ : ಜಾತಿ ಗಣತಿಗೆ ಅಧಿಕಾರಿಗಳ ಅನಾದರ-ಆರೋಪ

ನಿರ್ಲಕ್ಷ್ಯದ ವಿರುದ್ಧ ಆಕ್ರೋಶ : ಜಾತಿ ಗಣತಿಗೆ ಅಧಿಕಾರಿಗಳ ಅನಾದರ-ಆರೋಪ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಒಳಮೀಸಲಾತಿ ಕಲ್ಪಿಸಲು ಆರಂಭಿಸಿರುವ ಜಾತಿ ಗಣತಿಗೆ ಮುದ್ದೇಬಿಹಾಳ ತಾಲ್ಲೂಕಿನಲ್ಲಿ

ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು: ಅಂಬೇಡ್ಕರ್ ಸೇನೆ ಒತ್ತಾಯ

ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು: ಅಂಬೇಡ್ಕರ್ ಸೇನೆ ಒತ್ತಾಯ

ಲಿಂಗಸಗೂರು: ತಾಲ್ಲೂಕಿನ ಚಿತ್ತಾಪೂರ ಗ್ರಾಮದಲ್ಲಿ ಬೋರವೇಲ್ ನೀರು ಕುಡಿಯಲು ಯೋಗ್ಯವಿಲ್ಲದ ಕಾರಣ ಗ್ರಾಮದ ಜನರಿಗೆ ಯೋಗ್ಯವಾದ ಕೃಷ್ಣ ನದಿಯ ನೀರನ್ನು ಒದಗಿಸಬೇಕು ಎಂದು ಸಹಾಯಕ ಆಯುಕ್ತರಿಗೆಅಂಬೇಡ್ಕರ ಸೇನೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು. ಕಳೆದ ವರ್ಷ ಬೇಸಿಗೆಯಲ್ಲಿ ಚಿತ್ತಾಪೂರ ಗ್ರಾಮದ ಸಂಪೂರ್ಣ ಜನರಿಗೆ ವಾಂತಿ ಬೇಧಿಯಿಂದ ಸಾರ್ವಜನಿಕರು ತತ್ತರಿಸಿ ಹೋಗಿದ್ದರು. ಇಡೀ ರಾಜ್ಯಾದ್ಯಂತ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿತ್ತು. ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕ ಮಟ್ಟದ ಅಧಿಕಾರಿಗಳು ಬೇಟಿ ನೀಡಿ, ಹತೋಟಿಗೆ ತರುವ

ಅಕ್ರಮ ಗಣಿಗಾರಿಕೆ ಗಾಲಿ ಜನಾರ್ಧನ್ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ

ಅಕ್ರಮ ಗಣಿಗಾರಿಕೆ ಗಾಲಿ ಜನಾರ್ಧನ್ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ

ದೆಹಲಿ: ಅನಂತಪುರ ಜಿಲ್ಲೆಯ ಓಬಳಾಪುರಂ ಮೈನಿಂಗ್ ಕಂಪನಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಇದೀಗ ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ಅಪರಾಧಿ ಎಂದು ತೀರ್ಪು ಪ್ರಕಟಿಸಿದೆ. ಇದರ ಬೆನ್ನಲ್ಲೇ ಕೋರ್ಟ್ ಶಿಕ್ಷೆ ಪ್ರಕಟಿಸಿದ್ದು ಶಾಸಕ ಜನಾರ್ಧನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಓಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅಪರಾಧಿ ಎಂದು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ