ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಮತ್ತು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಕಾನೂನು ಕಂಟಕ ಎದುರಾಗುತ್ತಿದೆ. ಏತನ್ಮಧ್ಯೆ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (BSY) ಅವರಿಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್ ಸಿಕ್ಕಿದೆ.
Join Our Telegram: https://t.me/dcgkannada
ಹೌದು, ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕೋ ಕೇಸ್ ಎದುರಿಸುತ್ತಿರುವ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರನ್ನು ಬಂಧಿಸಲು ಈಗಿರುವ ತಡೆಯಾಜ್ಞೆ ತೆರವುಗೊಳಿಸುವಂತೆ ಸಿಐಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಬಿಎಸ್ ವೈಗೆ ತಾತ್ಕಾಲಿಕವಾಗಿ ರಿಲೀಫ್ ನೀಡಿದೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂ.ನಾಗಪ್ರಸನ್ನ ಅವರ ಪೀಠವು, ಸೆ.30ಕ್ಕೆ ಮಧ್ಯಂತರ ಆದೇಶವನ್ನು ಮುಂದೂಡಿ ಆದೇಶವನ್ನು ನೀಡಿದೆ.
ಯಡಿಯೂರಪ್ಪ(BSY) ಅವರನ್ನು ಬಂಧಿಸದಂತೆ ತಡೆ ನೀಡಿದ್ದ ಆದೇಶ ತೆರವು ಮಾಡಬೇಕು ಎಂದು ಕೋರಿ ಸಿಐಡಿ ಎಸ್ ಪಿಪಿ ಅಶೋಕ್ ನಾಯಕ್ ಅವರು ಅರ್ಜಿ ಸಲ್ಲಿಸಿದ್ದರು.
ಪೋಕೋ ಕೇಸ್ ಕುರಿತು ತನಿಖೆ ಪೂರ್ಣಗೊಳಿಸಿದ್ದ ಸಿಐಡಿ, ಈ ಹಿಂದೆ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿತ್ತು. ಇದರಿಂದ ಬಂಧನ ಭೀತಿಯಿಂದ ತಮ್ಮ ವಿರುದ್ಧದ ಪೋಕೋ ಪ್ರಕರಣ ರದ್ದುಗೊಳಿಸುವಂತೆ ಕೋರಿ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು.
ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶ ನೀಡಿತ್ತು. ಈ ಆದೇಶ ರದ್ದು ಕೋರಿ ಸಿಐಡಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಹಿನ್ನೆಲೆ ಇಂದು ಕೋರ್ಟ್ ವಿಚಾರಣೆ ನಡೆಸಿದೆ. BSY ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಅವರು ವಾದ ಮಂಡಿಸಿದರು.
ಪ್ರಕರಣದ ಹಿನ್ನೆಲೆ ಏನು?
ತಾಯಿಯೋರ್ವಳು ತನ್ನ ಅಪ್ರಾಪ್ತ ಪುತ್ರಿಯೊಂದಿಗೆ ಸಹಾಯ ಕೋರಿ ಯಡಿಯೂರಪ್ಪ ಅವರ ಮನೆಗೆ ಕಳೆದ ಫೆ.2ರಂದು ಬಂದಿದ್ದರು. ಆಗ ಮಹಿಳೆಯ ಪುತ್ರಿಯ ಮೇಲೆ ಬಿಎಸ್‌ವೈ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಮಾ.3ರಂದು ಅರ್ಜಿದಾರರು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಬಳಿಕ, ಬಾಲಕಿಯ ತಾಯಿ ಕಾರಣಾಂತರದಿಂದ ಮೃತಪಟ್ಟಿದ್ದರು. ಪ್ರಕರಣದ ಗಂಭೀರತೆಯಿಂದ ಸರ್ಕಾರ ಈ ಪೋಕೋ ಆರೋಪದ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿತ್ತು.
ಸಿಎಂ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಗೆ BIG SHOCK..!
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿದ ಬೆನ್ನಲ್ಲೇ ಇದೀಗ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ಗೆ ಬಿಗ್ ಶಾಕ್ ಎದುರಾಗಿದೆ. (Lokayukta vs DKS)
ಹೌದು, ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆಶಿಗೆ ಲೋಕಾಯುಕ್ತ ಪೊಲೀಸರು (Lokayukta vs DKS) ನೋಟಿಸ್ ನೀಡಿ, ಇಂದೇ ವಿಚಾರಣೆಗೆ ಹಾಜರಾಗುವಂತೆ ತಾಕೀತು ಮಾಡಿದ್ದಾರೆ.
ಇದನ್ನೂ ಓದಿ: Murder case: ಆಸ್ತಿಗಾಗಿ ಮೂವರು ಅಕ್ಕಂದಿರೇ ತಮ್ಮನನ್ನು ಕೊಚ್ಚಿ.. ಕೊಚ್ಚಿ.. ಕೊಂದೆ ಬಿಟ್ರು..!
ಹೀಗಾಗಿ, ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯ ಬಳಿಕ ಡಿ.ಕೆ ಶಿವಕುಮಾರ್ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.