Picture of mohan bhagavath

ಪ್ರಧಾನಿ ಮೋದಿಗೆ BIG SHOCK!

ಪ್ರಧಾನಿ ಮೋದಿಗೆ BIG SHOCK!

ಪುಣೆ: ನಾವು ದೇವರಾಗಬೇಕೋ ಅಥವಾ ಬೇಡವೋ ಎಂಬುದನ್ನು ಜನರು ನಿರ್ಧರಿಸು ತ್ತಾರೆ. ನಾವು ದೇವರಾಗಿದ್ದೇವೆ ಎಂದು ಘೋಷಿಸಬಾರದು ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ ಭಾಗವತ್ ಹೇಳಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಪ್ರಧಾನಿ ನರೇಂದ್ರ ಮೋದಿ ಲೋಕಸಭೆ ಚುನಾವಣೆ ವೇಳೆ ‘ನಾನು ಜೈವಿಕವಾಗಿ ಜನಿಸಿದಂತೆ ಭಾಸವಾಗುತ್ತಿಲ್ಲ. ನನ್ನನ್ನು ಭಗವಂತನೇ ಕಳಿಸಿದ್ದಾನೆ ಎಂಬಂತೆ ಭಾಸವಾಗುತ್ತಿದೆ’ ಎಂಬ ಹೇಳಿಕೆ ನೀಡಿದ್ದರು. ಇದಕ್ಕೆ ಸಂಬಂಧಿಸಿ ಜು.19ರಂದೂ ಭಾಗವತ್, ‘ಒಬ್ಬ ವ್ಯಕ್ತಿಯು ‘ಸೂಪರ್‌ಮ್ಯಾನ್’ ಆಗಲುಬಯಸಬಹುದು. ನಂತರ ‘ದೇವತೆ’ ಮತ್ತು ‘ಭಗವಾನ್’ ಮತ್ತು ‘ವಿಶ್ವರೂಪ’ ಆಗಲು ಹಾತೊರೆಯಬಹುದು. ಆದರೆ ಮುಂದೆ ಏನಾಗುತ್ತದೆ ಎಂಬ ಅರಿವು ಯಾರಿಗೂ ಇರಲ್ಲ’ ಎಂದು ಹೇಳಿದ್ದರು. ಇದಾದ ನಂತರ ಭಾಗವತ್ ಅವರು ಅಂಥದ್ದೇ ಹೇಳಿಕೆ ನೀಡುತ್ತಿರುವುದು 2ನೇ ಬಾರಿ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್, ‘ಮೋದಿ ಹಾಗೂ ಆರೆಸ್ಸೆಸ್ ಸಂಬಂಧ ಲೋಕ ಸಭೆ ಚುನಾವಣೆ ನಂತರ ಹಾಳಾಗುತ್ತಿರುವ ಸಂಕೇತ ಇದು’ ಎಂದಿದ್ದಾರೆ.

ಭಾಗವತ್ ಹೇಳಿದ್ದೇನು?:

ಪುಣೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಗುರುವಾರ ರಾತ್ರಿ ಮಾತನಾಡಿದ ಭಾಗವತ್, ‘ಕೆಲವರು ಶಾಂತವಾಗಿರುವುದಕ್ಕಿಂತ ಮಿಂಚಿನಂತೆ ಹೊಳೆಯಬೇಕು ಎಂದು ಭಾವಿಸುತ್ತಾರೆ. ಆದರೆ మింబు ಹಾಗೂ ಗುಡುಗು-ಸಿಡಿಲಿನ ಬಳಿಕ ಮೊದಲಿಗಿಂತ ಹೆಚ್ಚುಕತ್ತಲೆಯಾದಂತೆಕಾಣುತ್ತದೆ. ಆದ್ದರಿಂದ, ಕಾರ್ಯಕರ್ತರು ದೀಪದಂತೆ ಉರಿಯಬೇಕು ಮತ್ತು ಅಗತ್ಯವಿದ್ದಾಗ ಹೊಳೆಯಬೇಕು’ ಎಂದು ಮಾರ್ಮಿಕವಾಗಿ ನುಡಿದರು.

ಇದನ್ನೂ ಓದಿ: Viral video: ರೀಲ್ಸ್ ಗಾಗಿ ನಾಗರ ಹಾವನ್ನೇ ಕಚ್ಚಿ ನಿಂತ ಯುವಕ! ಆಮೇಲ್ ಆಗಿದ್ದು ದೊಡ್ದುಡ ದುರಂತ! (ವೈರಲ್ ವಿಡಿಯೋ ನೋಡಿ)

‘ನಾವು ನಮ್ಮ ಜೀವನದಲ್ಲಿ ಸಾಧ್ಯವಾದಷ್ಟು ಒಳ್ಳೆಯ ಕೆಲಸವನ್ನು ಮಾಡಲು ಪ್ರಯತ್ನಿಸಬೇಕು. ನಾವು ಹೊಳೆಯಬಾರದು ಅಥವಾಎದ್ದುಕಾಣಬಾರದುಎಂದುಯಾರೂ ಹೇಳುತ್ತಿಲ್ಲ. ಕೆಲಸದಮೂಲಕ, ಪ್ರತಿಯೊಬ್ಬರೂ ಪೂಜ್ಯ ವ್ಯಕ್ತಿಯಾಗಬಹುದು. ಆದರೆ ನಾವು ಆ ಮಟ್ಟವನ್ನು ತಲುಪಿದ್ದೇವೆಯೇ ಎಂಬುದನ್ನು ಇತರರು ನಿರ್ಧರಿಸುತ್ತಾರೆ. ನಮ್ಮಷ್ಟಕ್ಕೆ ನಾವೇ ‘ನಾವು ದೇವರಾಗಿದ್ದೇವೆ’ ಎಂದು ಘೋಷಿಕೊಳ್ಳಬಾರದು’ ಎಂದರು.

Latest News

ಐಪಿಎಲ್‌ ಪಂದ್ಯ ನಿಷೇಧಕ್ಕೆ ಸಚಿವ ಸಂತೋಷ್‌ ಲಾಡ್‌ ಆಗ್ರಹ

ಐಪಿಎಲ್‌ ಪಂದ್ಯ ನಿಷೇಧಕ್ಕೆ ಸಚಿವ ಸಂತೋಷ್‌ ಲಾಡ್‌ ಆಗ್ರಹ

ಬೆಂಗಳೂರು: ಭಾರತ ನಡೆಸಿದ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ನಂತರ ಪಾಕಿಸ್ತಾನವು ಭಾರತದ ನಾಗರಿಕರನ್ನು ಗುರಿಯಾಗಿರಿಸಿ

ಚೆನ್ನೈ ವಿರುದ್ಧ ಸೋಲು : ಪ್ಲೇ ಆಪ್ ನಿಂದ ಕೋಲ್ಕತ್ತ ಔಟ್

ಚೆನ್ನೈ ವಿರುದ್ಧ ಸೋಲು : ಪ್ಲೇ ಆಪ್ ನಿಂದ ಕೋಲ್ಕತ್ತ ಔಟ್

ಕೋಲ್ಕತ್ತ: ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಚೆನ್ನೈ ವಿರುದ್ಧ ಸೋಲುವ ಮೂಲಕ

ನಾಲತವಾಡ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಾಲತವಾಡ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಾಲತವಾಡ: ಕೆಎಸ್ಆರ್.ಟಿಸಿ ಬಸ್ ಗೆ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟಿರುವ ಘಟನೆ ಆರೇಶಂಕರ ಕ್ರಾಸ್

ಅಭ್ಯುದಯ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಅಭ್ಯುದಯ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಮುದ್ದೇಬಿಹಾಳ : ಪಟ್ಟಣದ ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ ಮುದ್ದೇಬಿಹಾಳ, ಕೋಳೂರು, ಅಡವಿ

ನಿಶ್ಚಿತಾರ್ಥದ ಮನೆಯಿಂದ ಮಸಣದೆಡಗೆ: ಅಪಘಾತದಲ್ಲಿ ಕಮರಿದ ಮದುವೆಯ ಕನಸು

ನಿಶ್ಚಿತಾರ್ಥದ ಮನೆಯಿಂದ ಮಸಣದೆಡಗೆ: ಅಪಘಾತದಲ್ಲಿ ಕಮರಿದ ಮದುವೆಯ ಕನಸು

ನಿಶ್ಚಿತಾರ್ಥದ ಖುಷಿಯಲ್ಲಿ ಪಯಣ ಬೆಳೆಸಿದ ಕುಟುಂಬಕ್ಕೆ ಇಂದು ಬೆಳಗ್ಗಿನ ಜಾವ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ನಿಶ್ಚಿತಾರ್ಥ ಮುಗಿಸಿಕೊಂಡು ಬಾಗಲಕೋಟ ಜಿಲ್ಲೆಯ ಕುಳಗೇರಿ ಕ್ರಾಸ್ ಗೆ ತೆರಳುತ್ತಿರುಬ ಕುಟುಂಬ ಅಪಘಾತಕ್ಕೆ ಬಲಿಯಾಗಿದೆ. ಶ್ವೇತಾ ಎಬ ಯುವತಿ ಎರಡು ದಿನಗಳ‌ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದಳು. ಹೊಸ ಬಾಳ‌ ಸಂಗಾತಿ ಹಾಗೂ ಹೊಸ ಜೀವನದ ಕನಸಿನೊಂದಿಗೆ ಕಾರನ್ನೇರಿ ಪಯಣ ಬೆಳೆಸಿದ್ದಳು. ವಿಧಿಯ ಮುಂದೆ, ಅಪಘಾತದಲ್ಲಿ ಕನಸು ನುಚ್ಚು ನೂರಾಗಿದೆ. ಎರಡು ದಿನಗಳ ಹಿಂದೆ ಸಾಗರ

ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು: ಅಂಬೇಡ್ಕರ್ ಸೇನೆ ಒತ್ತಾಯ

ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು: ಅಂಬೇಡ್ಕರ್ ಸೇನೆ ಒತ್ತಾಯ

ಲಿಂಗಸಗೂರು: ತಾಲ್ಲೂಕಿನ ಚಿತ್ತಾಪೂರ ಗ್ರಾಮದಲ್ಲಿ ಬೋರವೇಲ್ ನೀರು ಕುಡಿಯಲು ಯೋಗ್ಯವಿಲ್ಲದ ಕಾರಣ ಗ್ರಾಮದ ಜನರಿಗೆ ಯೋಗ್ಯವಾದ ಕೃಷ್ಣ ನದಿಯ ನೀರನ್ನು ಒದಗಿಸಬೇಕು ಎಂದು ಸಹಾಯಕ ಆಯುಕ್ತರಿಗೆಅಂಬೇಡ್ಕರ ಸೇನೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು. ಕಳೆದ ವರ್ಷ ಬೇಸಿಗೆಯಲ್ಲಿ ಚಿತ್ತಾಪೂರ ಗ್ರಾಮದ ಸಂಪೂರ್ಣ ಜನರಿಗೆ ವಾಂತಿ ಬೇಧಿಯಿಂದ ಸಾರ್ವಜನಿಕರು ತತ್ತರಿಸಿ ಹೋಗಿದ್ದರು. ಇಡೀ ರಾಜ್ಯಾದ್ಯಂತ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿತ್ತು. ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕ ಮಟ್ಟದ ಅಧಿಕಾರಿಗಳು ಬೇಟಿ ನೀಡಿ, ಹತೋಟಿಗೆ ತರುವ