Big victory for Congress.. Another embarrassment for BJP

ಕಾಂಗ್ರೆಸ್ ದಿಗ್ವಿಜಯ.. BJPಗೆ ಮತ್ತೊಮ್ಮೆ ಮುಖಭಂಗ

ಕಾಂಗ್ರೆಸ್ ದಿಗ್ವಿಜಯ.. BJPಗೆ ಮತ್ತೊಮ್ಮೆ ಮುಖಭಂಗ

ಹುನಗುಂದ: ಇಳಕಲ್ ನಗರಸಭೆ, ಹುನಗುಂದ ಪಿಎಲ್ಡಿ ಬ್ಯಾಂಕ್ ಸೋಲಿನಿಂದ ಕಂಗೆಟ್ಟಿರುವ ಬಿಜೆಪಿಗೆ ಮತ್ತೊಂದು ಸೋಲಿಸಿ ರುಚಿ ತೋರಿಸುವಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ ಯಶಸ್ಸು ಕಂಡಿದ್ದಾರೆ.

ಹೌದು, ಹುನಗುಂದ ಪುರಸಭೆಯ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್‌ನ ಭಾಗ್ಯಶ್ರೀ ಬಸವರಾಜ ರೇವಡಿ ಹಾಗೂ ಉಪಾಧ್ಯಕ್ಷರಾಗಿ ರಾಜವ್ವ ಹನಮಪ್ಪ ಬಾದಾಮಿ ಮಂಗಳವಾರ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ ಎಂದು ಚುನಾವಣೆ ಅಧಿಕಾರಿಯೂ ಆದ ತಹಸೀಲ್ದಾರ ನಿಂಗಪ್ಪ ಬಿರಾದಾರ ಹೇಳಿದರು.

Join Our Telegram: https://t.me/dcgkannada

ಪುರುಸಭೆಯ ಒಟ್ಟು 23 ಸದಸ್ಯರ ಬಲವುಳ್ಳ ಕಾಂಗ್ರೆಸ್ ನಿಂದ ಅಧ್ಯಕ್ಷ ಸ್ಥಾನಕ್ಕೆ ಭಾಗ್ಯಶ್ರೀ ರೇವಡಿ ಅವರು ಸ್ಪರ್ಧಿಸಿ ಕಾಂಗ್ರೆಸ್ 12 ಮತಗಳೊಂದಿಗೆ ಬಿಜೆಪಿಯ ಒಬ್ಬರು ಜೆಡಿಎಸ್ ನ ಇಬ್ಬರು ಸದಸ್ಯರು ಹಾಗೂ ಶಾಸಕರ ಒಂದು ಮತವು ಸೇರಿದಂತೆ ಒಟ್ಟು 16 ಮತಗಳನ್ನು ಪಡೆದು ಗೆಲುವು ಸಾಧಿಸಿದರೆ ಪ್ರತಿಸ್ಪರ್ಧಿ ಬಿಜೆಪಿಯ ಬಸವ್ವ ಬಸಪ್ಪ ಚಿತ್ತಾವಾಡಗಿ ೮ ಮತಗಳನ್ನ ಪಡೆದು ಪರಭವಗೊಂಡಿದ್ದಾರೆ.

ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಲ್ಲಿ ಪರಿಶಿಷ್ಟ ಜಾತಿ ಮಹಿಳೆ ಇಲ್ಲದಿರುವುದರಿಂದ ಕಾಂಗ್ರೆಸ್ ನಿಂದ ಒಬ್ಬರೇ ನಾಮಪತ್ರ ಸಲ್ಲಿಸಿದ ರಾಜವ್ವ ಹನುಮಪ್ಪ ಬಾದಾಮಿ ಅವಿರೋಧವಾಗಿ ಆಯ್ಕೆಯಾದರು.

ನಂತರ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರು ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜೊತೆಗೆ ಪುರಸಭೆಯಲ್ಲಿ ಕಾಂಗ್ರೆಸ್ ಅಧಿಕಾರ ಪಡೆದಿರುವುದರಿಂದ ಪಟ್ಟಣದ ಮೂಲ ಸೌಕರ್ಯ ಸೇರಿದಂತೆ ಸರ್ವಾಂಗೀಣ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಅನುದಾನವನ್ನು ಸರ್ಕಾರದಿಂದ ತಂದು ಸುಂದರವಾದ ಮಾದರಿಯ ಹುನಗುಂದ ಪಟ್ಟಣವನ್ನು ಮಾಡಲು ಸಂಕಲ್ಪ ಮಾಡುತ್ತೇನೆ. ಅಮೃತ ಯೋಜನೆ ಅಡಿಯಲ್ಲಿ ಹುನಗುಂದ ಪಟ್ಟಣಕ್ಕೆ 24×7 ಕುಡಿಯುವ ನೀರಿನ ಯೋಜನೆಯ, 18 ಕೋಟಿ ವೆಚ್ಚದಲ್ಲಿ ಒಳಚರಂಡಿ ಯೋಜನೆ ಅನುಮೋದನೆ ಆಗಿದ್ದು, ರಸ್ತೆ, ಕುಡಿಯುವ ನೀರು ಮೂಲಭೂತ ಸೌಲಭ್ಯೆಗಳಿಗೆ ನಗೋರೋತ್ಥಾನ ಯೋಜನೆಯ ೪ನೇ ಹಂತದಲ್ಲಿ ಕಾಮಗಾರಿ ಆರಂಭವಾಗಿವೆ.

ಬಡವರಿಗೆ ಪುರಸಭೆಯ 24 ಎಕರೆಯಲ್ಲಿ ಗುರುತಿಸಿ 941 ನಿವೇಶನ ಹಕ್ಕು ಪತ್ರಗಳನ್ನು ವಿತರಿಸಲಾಗಿದೆ. ಸರ್ಕಾರದಿಂದ 500 ಮನೆ ನಿರ್ಮಾಣಕ್ಕೆ ಮಂಜುರಾತಿಯನ್ನು ನೀಡಿದ್ದು ಕೇವಲ 6 ತಿಂಗಳಲ್ಲಿ ಎಲ್ಲ ಬಡವರಿಗೆ ನಿರ್ಮಿಸಿ ಕೊಡಲಾಗುವುದು. ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಪಟ್ಟಣದ ಜವಾಬ್ದಾರಿಯಿಂದ ಎಲ್ಲ ಸದಸ್ಯರ ವಿಶ್ವಾಸಕ್ಕೆ ತೆಗೆದಕೊಂಡು ಉತ್ತಮ ಆಡಳಿತವನ್ನು ನಡೆಸಬೇಕೆಂದು ಎಂದು ತಿಳಿಸಿದರು.

ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಯ ನಂತರ ಹರ್ಷಗೊಂಡ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಸಿಹಿ ತಿನ್ನಿಸಿ ಗುಲಾಲು ಎರಚಿ, ಪಟಾಕಿ ಸಿಡಿಸಿ ಸಂತಸ ವ್ಯಕ್ತಪಡಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ ದೊಡಮನಿ, ಮಾಜಿ ಅಧ್ಯಕ್ಷ ಶರಣು ಬೆಲ್ಲದ, ಪರವೇಜ್ ಖಾಜಿ ಉಪಾಧಕ್ಷರಾದ ಗುರುಬಾಯಿ ಹೂಗಾರ, ಶಾಂತಾ ಮೇಲಿನಮನಿ, ಸದಸ್ಯರಾದ ಮಹಮ್ಮದ ದೋಟಿಹಾಳ, ಬಸವರಾಜ ಗೋಣ್ಣಗರ, ಮೈನು ಧನ್ನೂರ, ಚಂದ್ರು ತಳವಾರ, ಯಲ್ಲಪ್ಪ ನಡುವಿನಮನಿ, ಕಮಲವ್ವ ಸಂದಿಮನಿ, ಶರಣಮ್ಮ ಮುಕ್ಕಣ್ಣವರ, ಖೈರುನಬಿ ನಾಯಕ, ಸಂಗಣ್ಣ ಗಂಜೀಹಾಳ, ಮುತ್ತಣ್ಣ ಕಲಗೋಡಿ, ಸುರೇಶ ಹಳಪೇಟಿ, ಗಂಗಣ್ಣ ಇಲಕಲ್ಲ, ರವಿ ಹುಚನೂರ, ಅಮರೇಶ ನಾಗೂರ, ಮೆಹಬೂಬ ಸರಕಾವಸ, ಜಬ್ಬಾರ ಕಲಬುರ್ಗಿ, ವಿಶ್ವನಾಥ ಬ್ಯಾಳಿ, ದೇವು ಡಂಬಳ,ಮಲ್ಲಣ್ಣ ಹೂಗಾರ, ಮುತ್ತು ಲೋಕಾಪೂರ, ಮಲ್ಲಣ್ಣ ಅಠರದಾನಿ ಸೇರಿದಂತೆ ಇತರರು ಇದ್ದರು.

ಇದನ್ನೂ ಓದಿ: ಟಗರಿನ ಕಾಳಗಕ್ಕೆ ವೇದಿಕೆ ಸಜ್ಜು.. “ಯಾರಿವಳ‌ ಗಂಡ” ನಾಟಕ ಉದ್ಘಾಟನೆಗೆ ಶಾಸಕ ಕಾಶಪ್ಪನವರ ಆದಾಪೂರಕ್ಕೆ ಬರ್ತಿದ್ದಾರೆ.. ಮುಂದುವರಿಯುತ್ತಾ ವಾಗ್ವಾದ..?

ಪೊಲೀಸ್ ಬಂದೋಬಸ್ತ್ ನಲ್ಲಿ ಮತದಾನ:

ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಹುನಗುಂದ ಡಿವೈಎಸ್ಪಿ ವಿಶ್ವನಾಥ ಕುಲಕರ್ಣಿ ನೇತೃತ್ವದಲ್ಲಿ ಸಿಪಿಐ ಸುನೀಲ ಸವದಿ, ಪಿಎಸ್‌ಐಗಳಾದ ಚನ್ನಯ್ಯ ದೇವೂರ, ಎಸ್.ಆರ್.ನಾಯಕ ಅವರು ಪೋಲಿಸ್ ಬಾರಿ ಬೀಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಪುರಸಭೆಯ ಎರಡು ರಸ್ತೆಗಳಿಗೆ ಬ್ಯಾರಿಕೇಟ್ ಅಳವಡಿಸಿ ಹೆಚ್ಚಿನ ಪೋಲಿಸ್ ಸಿಬ್ಬಂದಿಗಳು ನೇಮಿಸಿ ಚುನಾವಣೆಗೆ ಸಂಬಂಧಿಸಿದ ಸಿಬ್ಬಂದಿಗಳನ್ನು ಮಾತ್ರ ಪುರಸಭೆ ಒಳಗಡೆಗೆ ಅವಕಾಶ ನೀಡಿದ್ದರು.

Latest News

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀಟ್

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕು ಬಣಜಿಗ ಸಮಾಜದ ನೂತನ ಕಾರ್ಯಕಾರಿಣಿ ಮಂಡಳಿಯನ್ನು ಸರ್ವಾನುಮತದಿಂದ ಭಾನುವಾರ ಆಯ್ಕೆ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ರಾಯಚೂರು,ಜೂ 15- ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಡೆದಿರುವ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ನಾರಾಯಣಪುರ: ಕೊಡೇಕಲ್ ಪಟ್ಟಣದ ಸರರ್ಕಾರಿ ಪ್ರೌಢಶಾಲೆಯಲ್ಲಿ ವಲಯ ವ್ಯಾಪ್ತಿಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಹಿರಿಯ, ಕಿರಿಯ ಪ್ರಾಥಮಿಕ ಶಾಲೆಗಳ ಮುಖ್ಯಶಿಕ್ಷಕರ ಸಭೆ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸುರುಪುರ ಬಿಇಒ ಯಲ್ಲಪ್ಪ ಕಾಡ್ಲೂರ ಮಾತನಾಡಿ ಮಕ್ಕಳಿಗೆ ಕಲಿಕೆಗೆ ಪೂರಕವಾದ ವಾತವರಣ ನಿರ್ಮಾಣದ ಜೊತೆಗೆ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸುವದು ಹಾಗೂ ಕ್ಲಸ್ಟರ್ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಸೇರಿ ಅನುದಾನಿತ ಶಾಲೆಗಳಲ್ಲಿ ಸಿಗುವ ಬಿಸಿಯೂಟ, ಸಮವಸ್ತ್ರ ಪಠ್ಯಪುಸ್ತಕಗಳ ವಿತರಣೆ ಸೇರಿ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಮುದ್ದೇಬಿಹಾಳ : ಜನೌಷಧಿ ಕೇಂದ್ರಗಳು, ಉಚಿತ ಅಕ್ಕಿ ಕೊಡುವ ಯೋಜನೆ, ಆಯುಷ್ಮಾನ್ ಆರೋಗ್ಯ ಕಾರ್ಡ ಇಂತಹ ನೂರಾರು ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಮಾಡಲಾಗಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಬಿಜೆಪಿ ಸರ್ಕಾರ ಕೇಂದ್ರದಲ್ಲಿ 11 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಐದು ಲಕ್ಷ ರೂ.ಗಳವರೆಗೆ ಆರೋಗ್ಯ ವಿಮೆ ಕಲ್ಪಿಸುವ ಯೋಜನೆಯನ್ನು ಮೋದಿ