Wheeling Thugs wheeling on the highway.. Locals who taught the thugs a lesson

Bike Wheeling: ಹೆದ್ದಾರಿಯಲ್ಲಿ ಪುಂಡರ ವೀಲ್ಹಿಂಗ್.. ಪುಂಡರಿಗೆ ಪಾಠ ಕಲಿಸಿದ ಸ್ಥಳೀಯರು (ವೈರಲ್ ವಿಡಿಯೋ ನೋಡಿ)

Bike Wheeling: ಹೆದ್ದಾರಿಯಲ್ಲಿ ಪುಂಡರ ವೀಲ್ಹಿಂಗ್.. ಪುಂಡರಿಗೆ ಪಾಠ ಕಲಿಸಿದ ಸ್ಥಳೀಯರು (ವೈರಲ್ ವಿಡಿಯೋ ನೋಡಿ)

ನೆಲಮಂಗಲ: ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಬೈಕ್ ವೀಲ್ಹಿಂಗ್ (Bike Wheeling) ಮಾಡುತ್ತಾ ಹೆದ್ದಾರಿಯಲ್ಲಿ ಸಂಚರಿಸುವ ಪ್ರಯಾಣಿಕರಲ್ಲಿ ಆತಂಕ ಉಂಟು ಮಾಡುತ್ತಿದ್ದ ಪುಂಡರನ್ನು ಸಾರ್ವ ಜನಿಕರು ಅಡ್ಡಗಟ್ಟಿ ದ್ವಿಚಕ್ರವಾಹನಗಳನ್ನು ಜಖಂ ಗೊಳಿಸಿ ಬುದ್ದಿ ಕಲಿಸಿರುವ ಘಟನೆ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ.

Join Our Telegram: https://t.me/dcgkannada

ಘಟನೆ ವಿವರ: ಆ.15ರಂದು ಸ್ವಾತಂತ್ರ ದಿನಾಚರಣೆಯಂದು ಬೆಂಗಳೂರು ಕಡೆಯಿಂದ ತುಮ ಕೂರು ಕಡೆಗೆ ಎರಡು ದ್ವಿಚಕ್ರ ವಾಹನಗಳಲ್ಲಿ ಚಲಿ ಸುತ್ತಿದ್ದ ನಾಲ್ವರ ಪುಂಡರ ಗುಂಪು ವೀಲ್ಹಿಂಗ್ (Bike Wheeling) ಮಾಡುತ್ತಿದ್ದರು. ಹೆದ್ದಾರಿಯ ಅಡಕಮಾರನಹಳ್ಳಿ ಸಮೀಪ ಮೇತುವೆ ಬಳಿ ಇದನ್ನು ಗಮನಿಸಿದ ಪ್ರಯಾಣಿಕರು, ವೀಲ್ಹಿಂಗ್ ಮಾಡುತ್ತಿದ್ದ ಪುಂ ಡರನ್ನು ಅಡ್ಡಗಟ್ಟಿ ಪ್ರಶ್ನಿಸಿದ್ದಾರೆ.

ಈ ವೇಳೆ ಹೆದರಿದ ಪುಂಡರು ಪರಾರಿಯಾಗಿದ್ದು, ಪ್ರಯಾಣಿಕರು ಪುಂಡರಿಗೆ ಬುದ್ದಿಕಲಿಸುವ ಸಲುವಾಗಿ ಅವರು ಬಿಟ್ಟುಹೋಗಿದ್ದ ದ್ವಿಚಕ್ರ ವಾಹನಗಳನ್ನು ಹೆದ್ದಾರಿ ಮೆಲ್ಲೇತುವೆ ಮೇಲಿಂದ ಕೆಳಗೆಸೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಕಲಿ ನಂಬರ್‌ಪ್ಲೇಟ್: ರಾಷ್ಟ್ರೀಯ ಹೆದ್ದಾರಿಯಲ್ಲಿ ವೀಲ್ಹಿಂಗ್ ಮಾಡುತ್ತಿದ್ದ ಪುಂಡರ ಹಾವಳಿ ಮಾಹಿತಿ ಪಡೆದುಕೊಂಡ ಡಿವೈಎಸ್ಪಿ ಜಗದೀಶ್ ಎಸೆದ ಬೈಕ್‌ ಗಳ ತನಿಖೆಗೆ ತಂಡ ರಚಿಸಿದ್ದು, ದ್ವಿಚಕ್ರವಾಹನಗಳಿಗೆ ಅಳವಡಿಸಿದ್ದ ನಂಬರ್‌ಪ್ಲೇಟ್‌ಗಳು ಬದಲಿಸಿ ನಕಲಿ ನಂಬರ್‌ಗಳನ್ನು ಅಳವಡಿಸಿಕೊಂಡು ಈ ಕೃತ್ಯಕ್ಕೆ ಮುಂದಾಗಿದ್ದರೆಂದು ತಿಳಿಸಿದ್ದಾರೆ.

ಇದನ್ನೂ ಓದಿ: Suicide case: ಪತ್ನಿ ಕೊಂದು ಪರಾರಿ ಆಗಿದ್ದ ಪತಿರಾಯ.. ನೇಣು ಬಿಗಿದು ಆತ್ಮಹತ್ಯೆ

ನೆಲಮಂಗಲ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸಾರ್ವಜನಿಕರು ಹೆದ್ದಾರಿ ಮೇಲಿನಿಂದ ಕೆಳಗೆ ಎಸೆದಿದ್ದ ದ್ವಿಚಕ್ರವಾಹನಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ