ಯತ್ನಾಳ್‌ ವಿರುದ್ಧ ಶಿಸ್ತು ಕ್ರಮಕ್ಕೆ ವರಿಷ್ಠರ ಚಿಂತನೆ?!

ಯತ್ನಾಳ್‌ ವಿರುದ್ಧ ಶಿಸ್ತು ಕ್ರಮಕ್ಕೆ ವರಿಷ್ಠರ ಚಿಂತನೆ?!


ಬೆಂಗಳೂರು: ಸ್ವಪಕ್ಷೀಯರ ವಿರುದ್ಧವೇ ಬಹಿರಂಗ ಹೇಳಿಕೆ ನೀಡಿ, ಪಕ್ಷಕ್ಕೆ ಸಾಕಷ್ಟು ಮುಜುಗರ ಸೃಷ್ಟಿಸುತ್ತಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಶಿಸ್ತುಕ್ರಮ ಜರುಗಿಸಲು ಬಿಜೆಪಿ ವರಿಷ್ಠರು ಗಂಭೀರ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ.

ಬಿ.ವೈ. ವಿಜಯೇಂದ್ರ ಬಿಜೆಪಿ ಅಧ್ಯಕ್ಷರಾದ ಮೇಲಂತೂ ಯತ್ನಾಳ್‌ ನಾಲಿಗೆ, ಬಿಎಸ್‌ವೈ ಕುಟುಂಬದ ವಿರುದ್ಧ ಮತ್ತಷ್ಟು ಹರಿತಗೊಂಡಿದೆ. ಯಾವ ಮುಲಾಜು ಇಲ್ಲದೇ ಮನಬಂದಂತೆ ಅವರ ವಿರುದ್ಧ ನಾಲಿಗೆ ಹರಿಬಿಡುತ್ತಿದ್ದಾರೆ ಎಂದು ಕೆಲ ಬಿಜೆಪಿ ನಾಯಕರು ಆರೋಪಿಸಿದ್ದಾರೆ ಎಂದು ತಿಳಿದು ಬಂದಿದೆ.

ವಿಧಾನಸಭೆಯ ಅಧಿವೇಶನದಲ್ಲಿಯೂ ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ ನಡೆಸಿದ್ದು, ಬಿಜೆಪಿಯ ನಾಯಕರಿಗೆ ಮುಜುಗರ ತರಿಸಿತ್ತು. ಸರ್ಕಾರ, ಯತ್ನಾಳ್ ಹೇಳಿಕೆ ಆಧರಿಸಿ ವಿಪಕ್ಷಗಳನ್ನು ಕೆಣಕಿದವು. ತದನಂತರ ಮಾಧ್ಯಮದ ಎದುರು ರಾಜ್ಯ ಬಿಜೆಪಿಯ ನಾಯಕತ್ವವನ್ನು ಯತ್ನಾಳ್ ಪ್ರಶ್ನಿಸುತ್ತಾ ಇದ್ದಾರೆ.

ಮುಡಾ ಹಗರಣ ಖಂಡಿಸಿ ಮೈಸೂರು ಪಾದಯಾತ್ರೆಯ ನಾಯಕತ್ವದ ಕುರಿತು ಯತ್ನಾಳ್ ಅಪಸ್ವರ ತೆಗೆದು, ಕುಮಾರ ಬಂಗಾರಪ್ಪ ಮನೆಯಲ್ಲಿ ಸಂಗಡಿಗರೊಂದಿಗೆ ಸಭೆ ನಡೆಸಿ, ಪ್ರತ್ಯೇಕವಾಗಿ ಪಾದಯಾತ್ರೆಯನ್ನು ಕೂಡಸಂಗಮದಿಂದ ಬಳ್ಳಾರಿ ವರೆಗೂ ಆಯೋಜಿಸುವ ಬಗ್ಗೆ ಚರ್ಚೆ ಮಾಡಿದ್ದರು.

ಈ ಎಲ್ಲಾ ಬೆಳವಣಿಗಗಳು ರಾಜ್ಯ ನಾಯಕತ್ವದ ಕುರಿತು ಅವರು ಸತತವಾಗಿ ಪ್ರಶ್ನಿಸುತ್ತಿರುವ ಸಂಕೇತ. ಇದೀಗ ಬಿಜೆಪಿ ಹೈಕಮಾಂಡ್ ಯತ್ನಾಳ್ ಅವರ ನಾಲಿಗೆಗೆ ಬೀಗ ಹಾಕಲು ಮುಂದಾಗಲಿದೆ ಎನ್ನಲಾಗಿದೆ. ಇದು ಎಷ್ಟರ ಮಟ್ಟಿಗೆ ಫಲ ನೀಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Latest News

ಅ.25 ರಂದು ಯರಝರಿಯಲ್ಲಿ ನವರಾತ್ರೋತ್ಸವ,ಸಾಮೂಹಿಕ ವಿವಾಹ

ಅ.25 ರಂದು ಯರಝರಿಯಲ್ಲಿ ನವರಾತ್ರೋತ್ಸವ,ಸಾಮೂಹಿಕ ವಿವಾಹ

ಮುದ್ದೇಬಿಹಾಳ : ನವರಾತ್ರೋತ್ಸವದ ಅಂಗವಾಗಿ ತಾಲ್ಲೂಕಿನ ಯರಝರಿಯ ಯಲ್ಲಾಲಿಂಗೇಶ್ವರ ಮಠದಲ್ಲಿ ಮಲ್ಲಾರಲಿಂಗ ಮಹಾರಾಜರ ನೇತೃತ್ವದಲ್ಲಿ

ಬಂಜಾರ ಸಮಾಜದಲ್ಲಿ ಮತಾಂತರ ಪಿಡುಗಿನ ಜಾಗೃತಿ-ರವಿ ನಾಯಕ

ಬಂಜಾರ ಸಮಾಜದಲ್ಲಿ ಮತಾಂತರ ಪಿಡುಗಿನ ಜಾಗೃತಿ-ರವಿ ನಾಯಕ

ಮುದ್ದೇಬಿಹಾಳ : ನಮ್ಮ ತಾಂಡಾಗಳಲ್ಲಿರುವ ಬಂಜಾರಾ ಜನಾಂಗದವರಲ್ಲಿ ಕೆಲವರು ಮತಾಂತರದ ಪಿಡುಗಿಗೆ ಬಲಿಯಾಗುತ್ತಿದ್ದಾರೆ.ಅಂತಹ ಪ್ರಕರಣಗಳು

ಮಕ್ಕಳಿಗೆ ಒಳ್ಳೆಯ ಸಂಸ್ಕಾರ,ಶಿಕ್ಷಣ ಇಂದಿನ ಅಗತ್ಯ-ಶಾಸಕ ಸಿ.ಎಸ್.ನಾಡಗೌಡ

ಮಕ್ಕಳಿಗೆ ಒಳ್ಳೆಯ ಸಂಸ್ಕಾರ,ಶಿಕ್ಷಣ ಇಂದಿನ ಅಗತ್ಯ-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಪಿಂಜಾರ ಸಮುದಾಯ ಶ್ರಮಿಕ ಸಮಾಜವಾಗಿದ್ದು ಎಲ್ಲ ಸಮಾಜದವರೊಂದಿಗೆ ಬೆರೆಯುವ ಜನಾಂಗವಾಗಿದ್ದಾರೆ.ನೀವು ಯಾವ

ಮುದ್ದೇಬಿಹಾಳದಲ್ಲಿ ಐತಿಹಾಸಿಕ ನವರಾತ್ರಿ ನವಶಕ್ತಿ ವೈಭವ

ಮುದ್ದೇಬಿಹಾಳದಲ್ಲಿ ಐತಿಹಾಸಿಕ ನವರಾತ್ರಿ ನವಶಕ್ತಿ ವೈಭವ

ಮುದ್ದೇಬಿಹಾಳ : ನವರಾತ್ರಿ ದಸರಾ ಉತ್ಸವ ಸಂಚಲನ ಸಮಿತಿ ವತಿಯಿಂದ ನವದುರ್ಗೆಯರ ಕಡೆಗೆ ನಮ್ಮ

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಮುದ್ದೇಬಿಹಾಳ : ರಾಜ್ಯದ ಸಕ್ಕರೆ ಕಾರ್ಖಾನೆಗಳ ಅಸೋಶಿಯೇಷನ್‌ದಲ್ಲಿ ಯಾವ ತೀರ್ಮಾನ ಕೈಗೊಂಡಿದೆಯೋ ಅದರಂತೆ ನಮ್ಮ ಕಾರ್ಖಾನೆಯು ನಡೆದುಕೊಳ್ಳಲಿದ್ದು ಜಿಲ್ಲಾಧಿಕಾರಿಗಳ ನಿರ್ದೇಶನದ ನಂತರವೇ ಕಾರ್ಖಾನೆಯ ಕಬ್ಬು ನುರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದು ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಹಣಮಂತಗೌಡ ಪಾಟೀಲ್ ಹೇಳಿದರು. ತಾಲ್ಲೂಕಿನ ಯರಗಲ್ ಮದರಿಯಲ್ಲಿರುವ ಶ್ರೀ ಬಾಲಾಜಿ ಶುಗರ್ಸ್ ಅಂಡ್ ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ನ ಕಾರ್ಖಾನೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಾಯ್ಲರ್ ಪ್ರದೀಪನ ಕಾರ್ಯಕ್ರಮದಲ್ಲಿ ತಮ್ಮನ್ನು

ಮಾಜಿ ಶಾಸಕ ಎ.ಎಸ್;ಪಾಟೀಲ ನಡಹಳ್ಳಿ ಆಕ್ರೋಶ:         ಆಲಮಟ್ಟಿ ಆಣೆಕಟ್ಟು ಎತ್ತರ ವಿರೋಧಿಸಿದ ತೆಲಂಗಾಣಕ್ಕೆ ಕೃಷ್ಣೆ ನೀರು..!

ಮಾಜಿ ಶಾಸಕ ಎ.ಎಸ್;ಪಾಟೀಲ ನಡಹಳ್ಳಿ ಆಕ್ರೋಶ: ಆಲಮಟ್ಟಿ ಆಣೆಕಟ್ಟು ಎತ್ತರ ವಿರೋಧಿಸಿದ ತೆಲಂಗಾಣಕ್ಕೆ ಕೃಷ್ಣೆ ನೀರು..!

ಮುದ್ದೇಬಿಹಾಳ : ತೆಲಂಗಾಣಕ್ಕೆ ಅಧಿಕೃತ ಆದೇಶವಿಲ್ಲದೆ ಸಿಎಂ ಮೌಖಿಕ ಸೂಚನೆ ಮೇರೆಗೆ ಕೃಷ್ಣಾ ನದಿ ನೀರು ಹರಿಸಲಾಗುತ್ತಿದೆ.ಇದು ಗಂಭೀರ ವಿಚಾರವಾಗಿದೆ. ಉತ್ತರ ಕರ್ನಾಟಕದ ರೈತರ ಹಿತಾಸಕ್ತಿಯನ್ನು ಕಡೆಗಣಿಸುತ್ತಿರುವ ರಾಜ್ಯ ಸರ್ಕಾರದ ಗಮನ ಸೆಳೆಯುವ ಕೆಲಸವನ್ನು ರಾಜಧಾನಿಯಲ್ಲಿರುವ ಆಡಳಿತ ಸೌಧಕ್ಕೆ ತಲುಪಿಸುವ ಕಾರ್ಯವನ್ನು ಪತ್ರಿಕೆ ಮತ್ತು ಟಿವಿ ಮಾಧ್ಯಮಗಳು ಮಾಡಬೇಕು ಎಂದು ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಮನವಿ ಮಾಡಿದರು. ಪಟ್ಟಣದ ತಮ್ಮ ದಾಸೋಹ ನಿಲಯದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.