BJP rebel leader Basanagowda Patil Yatna expelled from BJP for 6 years

ಬಿಜೆಪಿ ರೆಬೆಲ್ ನಾಯಕ ಬಸನಗೌಡ ಪಾಟೀಲ ಯತ್ನಾಳ ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಚಾಟನೆ

ಬಿಜೆಪಿ ರೆಬೆಲ್ ನಾಯಕ ಬಸನಗೌಡ ಪಾಟೀಲ ಯತ್ನಾಳ ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಚಾಟನೆ

Ad
Ad

ಪಕ್ಷದ ಶಿಸ್ತು ಉಲ್ಲಂಘನೆ ಮಾಡಿರುವ ಕಾರಣದಿಂದ ವಿಜಯಪುರ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿ ಶಿಸ್ತು ಸಮಿತಿ 6 ವರ್ಷಗಳ ಕಾಲ ತತಕ್ಷಣದಿಂದಲೇ ಉಚ್ಚಾಟಿಸಿದೆ. ಬಿಜೆಪಿ ಹೈಕಮಾಂಡ್‌ ಯತ್ನಾಳ ಅವರಿಗೆ ಶೋಕಾಸ್ ನೋಟಿಸ್ ಕೂಡ ಜಾರಿ ಮಾಡಿತ್ತು. ಬಿಜೆಪಿ ಹೈಕಮಾಂಡ್‌ಗೆ ಅವರ ಉತ್ತರದಿಂದ ಸೂಕ್ತ ಉತ್ತರ ಸಿಕ್ಕಿಲ್ಲವೆಂದು ಶಾಸಕ ಬಸನಗೌಡ ಪಾಟೀಲ್ ಅವರನ್ನು ಉಚ್ಛಾಟಿಸಿದೆ.

Ad
Ad

ಪಕ್ಷದ ಕೇಂದ್ರ ಶಿಸ್ತು ಸಮಿತಿಯು 2025 ಫೆಬ್ರವರಿ 10 ರಂದು ನೀಡಿದ್ದ ಶೋಕಾಸ್ ನೋಟಿಸ್‌ ನೀಡಿತ್ತು. ನೋಟಿಸ್ ಗೆ ಯತ್ನಾಳ ಅವರ ಪ್ರತಿಕ್ರಿಯೆಯನ್ನು ಪರಿಗಣಿಸಿದೆ ಮತ್ತು ಹಿಂದಿನ ಶೋಕಾಸ್ ನೋಟಿಸ್‌ಗಳಿಗೆ ಪ್ರತಿಕ್ರಿಯೆಯಾಗಿ ಉತ್ತಮ ನಡವಳಿಕೆ ಮತ್ತು ನಡವಳಿಕೆಯ ಭರವಸೆಗಳನ್ನು ನೀಡಿದ್ದರೂ ಸಹ, ನೀವು ಪಕ್ಷದ ಶಿಸ್ತಿನ ಪದೇ ಪದೇ ಉಲ್ಲಂಘಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದೆ. ಆದ್ದರಿಂದ, ನಿಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ 6 ವರ್ಷಗಳ ಅವಧಿಗೆ ಉಚ್ಚಾಟಿಸಲು ನಿರ್ಧರಿಸಲಾಗಿದೆ. ಇಲ್ಲಿಯವರೆಗೆ ಹೊಂದಿದ್ದ ಯಾವುದೇ ಪಕ್ಷದ ಹುದ್ದೆಯಿಂದ ನಿಮ್ಮನ್ನು ತೆಗೆದುಹಾಕಲಾಗಿದೆ ಎಂದು ಬಿಜೆಪಿ ಕೇಂದ್ರ ಶಿಸ್ತು ಸಮಿತಿಯ ಕಾರ್ಯದರ್ಶಿ ಓಂ ಪಾಠಕ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಪಹಲ್ಗಾಂನಲ್ಲಿ ಉಗ್ರರ ದಾಳಿ: ರಾಜ್ಯದ 178 ಪ್ರವಾಸಿಗರನ್ನು ಸುರಕ್ಷಿತವಾಗಿ ಕರೆತಂದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಪಹಲ್ಗಾಂನಲ್ಲಿ ಉಗ್ರರ ದಾಳಿ: ರಾಜ್ಯದ 178 ಪ್ರವಾಸಿಗರನ್ನು ಸುರಕ್ಷಿತವಾಗಿ ಕರೆತಂದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಸಚಿವ ಲಾಡ್‌ ಕಾರ್ಯಕ್ಕೆ ಪ್ರವಾಸಿಗರಿಂದ ಕೃತಜ್ಞತೆ ಬೆಂಗಳೂರು, ಏಪ್ರಿಲ್‌ 24: ಕಾಶ್ಮೀರದ ಪಹಲ್ಗಾಂನಲ್ಲಿ ಪ್ರವಾಸಿಗರನ್ನು

ಕಾಶ್ಮೀರದಿಂದ ರಾಜ್ಯಕ್ಕೆ ಮರಳು ಪ್ರವಾಸಿಗರಿಗೆ ನೆರವು ನೀಡುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್

ಕಾಶ್ಮೀರದಿಂದ ರಾಜ್ಯಕ್ಕೆ ಮರಳು ಪ್ರವಾಸಿಗರಿಗೆ ನೆರವು ನೀಡುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್

ಪಹಲ್ಗಾಮ್: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ ನಡೆದ ಭಯೋತ್ಪಾದಕರ ದಾಳಿ ನಂತರ ಕರ್ನಾಟಕ

ದೇಶದ ಋಣ ತೀರಿಸಲು ಯುವಕರು ಮುಂದೆ ಬನ್ನಿ : ಚಕ್ರವರ್ತಿ ಸೂಲಿಬೆಲೆ

ದೇಶದ ಋಣ ತೀರಿಸಲು ಯುವಕರು ಮುಂದೆ ಬನ್ನಿ : ಚಕ್ರವರ್ತಿ ಸೂಲಿಬೆಲೆ

ಗುಳೆದಗುಡ್ಡ : ನಮ್ಮ ಹಿರಿಯರು 5 ಋಣಗಳನ್ನು ತೀರಿಸಲು ಹೆಳಿದ್ದಾರೆ. ಅವುಗಳೆಂದರೆ ದೇವರ ಋಣ,

ಭಾರೀ ಬಿರುಗಾಳಿ,ಆಲಿಕಲ್ಲು ಮಳೆ:4000 ಪಪ್ಪಾಯಿ ಗಿಡಗಳು ನಾಶ, ದ್ರಾಕ್ಷಿ ಬೆಳೆಗೂ ಹಾನಿ

ಭಾರೀ ಬಿರುಗಾಳಿ,ಆಲಿಕಲ್ಲು ಮಳೆ:4000 ಪಪ್ಪಾಯಿ ಗಿಡಗಳು ನಾಶ, ದ್ರಾಕ್ಷಿ ಬೆಳೆಗೂ ಹಾನಿ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದಲ್ಲಿ ಬುಧವಾರ ಸಂಜೆ ಬೀಸಿದ ಭಾರಿ ಬಿರುಗಾಳಿ, ಅಕಾಲಿಕ ಆಲಿಕಲ್ಲು

ಸಿಎಂ, ಗೃಹ ಸಚಿವರು ಕ್ಷಮೆಯಾಚಿಸಲು ನಡಹಳ್ಳಿ ಆಗ್ರಹ

ಸಿಎಂ, ಗೃಹ ಸಚಿವರು ಕ್ಷಮೆಯಾಚಿಸಲು ನಡಹಳ್ಳಿ ಆಗ್ರಹ

ಮುದ್ದೇಬಿಹಾಳ : ಸಿಇಟಿ ಪರೀಕ್ಷೆ ಬರೆಯುವುದಕ್ಕೆ ತೆರಳಿದ್ದ ಜನಿವಾರ ಸಮಾಜದವರೊಂದಿಗೆ ಅನುಚಿತವಾಗಿ ನಡೆದುಕೊಂಡ ಘಟನೆಗೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಸಿಎಂ ಸಿದ್ಧರಾಮಯ್ಯ, ಗೃಹ ಸಚಿವ ಪರಮೇಶ್ವರ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ. ಎಸ್. ಪಾಟೀಲ ನಡಹಳ್ಳಿ ಆಗ್ರಹಿಸಿದರು. ಪಟ್ಟಣದ ಬಿಜೆಪಿ ಮಂಡಲ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.‌ ಜನಿವಾರ ವಿಪ್ರ ಸಮಾಜವೂ ಸೇರಿ ಹಲವು ಸಮಾಜದವರ ಪ್ರಾತಿನಿಧಿಕ ಸಂಕೇತವಾಗಿದ್ದು ಅದಕ್ಕೆ

ನಿವೃತ ಪೊಲೀಸ್ ಅಧಿಕಾರಿ ಪತ್ನಿಯಿಂದಲೇ ಹತ್ಯೆ

ನಿವೃತ ಪೊಲೀಸ್ ಅಧಿಕಾರಿ ಪತ್ನಿಯಿಂದಲೇ ಹತ್ಯೆ

ಬೆಂಗಳೂರುಃ ಕರ್ನಾಟಕದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಓಂ ಪ್ರಕಾಶ್ ಅವರನ್ನು ಅವರ ಪತ್ನಿಯಿಂದಲೇ ಭೀಕರವಾಗಿ ಹತ್ಯೆಯಾಗಿದ್ದಾರೆ. ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ನಿವಾಸದಲ್ಲಿ ಈ ಕೊಲೆ ನಡೆದಿದೆ. ನಿವೃತ ಅಧಿಕಾರಿ ಓಂ ಪ್ರಕಾಶ್ ಕೊಲೆ ಬಗ್ಗೆ ಅವರ ಪತ್ನಿಯೇ ಮಾಹಿತಿಯನ್ನು ನೀಡಿದ್ದಾರೆ. ಸ್ವತಃ ಓಂ ಪ್ರಕಾಶ್ ಅವರ ಪತ್ನಿಯೇ ಅವರನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಕೊಲೆಯಾದ ಬಳಿಕ ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು.