BJP Rebel Leaders: ಬಿಜೆಪಿಯಲ್ಲೀಗ 20 ಬಣ! ಕೂಡಲಸಂಗಮ to ಬಳ್ಳಾರಿ ಪಾದಯಾತ್ರೆಗೆ ಡೇಟ್ ಫಿಕ್ಸ್?

BJP Rebel Leaders: ಬಿಜೆಪಿಯಲ್ಲೀಗ 20 ಬಣ! ಕೂಡಲಸಂಗಮ to ಬಳ್ಳಾರಿ ಪಾದಯಾತ್ರೆಗೆ ಡೇಟ್ ಫಿಕ್ಸ್?

ಬೆಳಗಾವಿ : ಬಿಜೆಪಿಯ ಅತೃಪ್ತ ನಾಯಕರು (BJP Rebel Leaders) ಬಳ್ಳಾರಿ ಯಾತ್ರೆಗೆ ಮುಂದಾಗಿದ್ದು, ಸೆಪ್ಟೆಂಬರ್‌ 17 ರಿಂದ ಕೂಡಲಸಂಗಮದಿಂದ ಬಳ್ಳಾರಿಗೆ ಪಾದಯಾತ್ರೆ ನಡೆಸಲು ಉದ್ದೇಶಿಸಲಾಗಿದೆ ಎಂದು ವರದಿಯಾಗಿದೆ.

ಮುಡಾ ಹಗರಣದ ವಿರುದ್ಧದ ಬಿಜೆಪಿ-ಜೆಡಿಎಸ್‌ ‘ಮೈಸೂರು ಚಲೋ’ ಪಾದಯಾತ್ರೆ ಮುಕ್ತಾಯಗೊಂಡಿರುವ ಬೆನ್ನ ಹಿಂದೆಯೇ ಕೂಡಲಸಂಗಮದಿಂದ ಬಳ್ಳಾರಿವರೆಗೂ ಬಿಜೆಪಿ‌ಯ ಅತೃಪ್ತ ನಾಯಕರು (BJP Rebel Leaders) ಪಾದಯಾತ್ರೆ ನಡೆಸುವ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ ಎಂಬ ಮಾತು ರಾಜಕೀಯ ವಲಯದಲ್ಲಿ ಜೋರಾಗಿದೆ.

Join Our Telegram: https://t.me/dcgkannada

ಬೆಳಗಾವಿ ನಗರದ ಹೊರವಲಯದಲ್ಲಿರುವ ಖಾಸಗಿ ರೆಸಾರ್ಟ್‌ವೊಂದರಲ್ಲಿ ಭಾನುವಾರ ಬಿಜೆಪಿ ನಾಯಕರಾದ ಬಸನಗೌಡ ಪಾಟೀಲ ಯತ್ನಾಳ್, ರಮೇಶ್ ಜಾರಕಿಹೊಳಿ, ಜಿ.ಎಂ.ಸಿದ್ದೇಶ್ವರ, ಅಣ್ಣಾಸಾಹೇಬ ಜೊಲ್ಲೆ, ಅರವಿಂದ ಲಿಂಬಾವಳಿ, ಪ್ರತಾಪ ಸಿಂಹ, ಕುಮಾರ ಬಂಗಾರಪ್ಪ ಸೇರಿದಂತೆ ಒಟ್ಟು 12 ನಾಯಕರು ರಹಸ್ಯ ಸಭೆ ನಡೆಸಿ, ಈ ತಿರ್ಮಾನಕ್ಕೆ ಬಂದಿದ್ದಾರೆ ಎನ್ನಲಾಗಿದೆ.

ಪಾದಯಾತ್ರೆ ವೇಳೆ ಕಾಂಗ್ರೆಸ್‌ನ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಎಸ್ಸಿ, ಎಸ್ಟಿ ಅನುದಾನ ದುರ್ಬಳಕೆಯ ವಿರುದ್ಧ ಹೋರಾಟ ನಡೆಸಲು ಚರ್ಚಿಸಲಾಗಿದೆ. ಮುಡಾ ಹಗರಣದಲ್ಲಿ ಬಿಜೆಪಿ ನಾಯಕರು ಹೊಂದಾಣಿಕೆ ರಾಜಕೀಯ ಮಾಡುತ್ತಿದ್ದಾರೆ. ಇವರೆಲ್ಲರೂ ಸೇರಿಕೊಂಡು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಮಾಡಲು ಹೊರಟಿದ್ದಾರೆ ಎಂಬ ಸಂದೇಶವನ್ನು ಪಕ್ಷದ ಹೈಕಮಾಂಡ್‌ಗೆ ರವಾನಿಸುವ ಬಗ್ಗೆಯೂ ಚರ್ಚೆ ನಡೆಸಿದ್ದಾರೆ.

ಪ್ರತ್ಯೇಕ ಪಾದಯಾತ್ರೆಯ ಬಗ್ಗೆ ಕೇಂದ್ರ ನಾಯಕರ ಜೊತೆಗೆ ಚರ್ಚಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಮಹತ್ವದ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: Rape case : ಸಮಾಧಿ ಅಗೆದು ಶವದ ಮೇಲೆ ಅತ್ಯಾಚಾರ..! ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು (ವಿಡಿಯೋ ನೋಡಿ)

ಕಾಂಗ್ರೆಸ್‌ನ ವಾಲ್ಮೀಕಿ ನಿಗಮದ ಹಗರಣದ ವಿರುದ್ಧದ ಹೋರಾಟದ ನೆಪದಲ್ಲಿ ತಮ್ಮದೇ ಪಕ್ಷದ ನಾಯಕರ ವಿರುದ್ಧ ಬಿಜೆಪಿಯ ಅತೃಪ್ತ ನಾಯಕರು (BJP Rebel Leaders) ಈಗ ಬಂಡೆದಿದ್ದು, ತಮ್ಮ ಪಕ್ಷದ ನಾಯಕರಿಗೇ ಸಡ್ಡು ಹೊಡೆದಿದ್ದಾರೆ. ಪಾದಯಾತ್ರೆಗೂ ಮುನ್ನವೇ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನಾಯಕತ್ವದ ವಿರುದ್ಧ ಸಮರ ಸಾರಿದ್ದ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ರಮೇಶ್ ಜಾರಕಿಹೊಳಿ ಅವರು, ಬಳ್ಳಾರಿ ಪಾದಯಾತ್ರೆ ಮಾಡುವುದಾಗಿ ಹೇಳಿಕೆ ನೀಡಿದ್ದರು. ಇದೀಗ ಅದರ ಮುಂದುವರಿದ ಭಾಗವಾಗಿಯೇ ಬೆಳಗಾವಿಯಲ್ಲಿ ಸಭೆ ನಡೆದಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಬೃಹತ್ ಕೈಗಾರಿಕೆ ಖಾತೆ ಸಚಿವ ಎಂ.ಬಿ.ಪಾಟೀಲ್ ಅವರು, ಬಿಜೆಪಿಯಲ್ಲಿ 20 ಬಣಗಳಿವೆ. ಆರ್.ಅಶೋಕ್‌ ಬಣ, ವಿಜಯೇಂದ್ರ ಬಣ, ಪ್ರಹ್ಲಾದ ಜೋಶಿ ಬಣ, ಸಂತೋಷ‌ ಬಣ, ಅಶ್ವತ್ಥ ನಾರಾಯಣ ಬಣ, ಯತ್ನಾಳ-ಜಾರಕಿಹೊಳಿ ಬಣ, ಸಿ.ಟಿ.ರವಿ ಬಣ… ಹೀಗೆ ಸಾಕಷ್ಟು ಬಣಗಳಿವೆ. ಒಂದೊಂದು ಬಣವೂ ಪಾದಯಾತ್ರೆ ಮಾಡಲಿ ಎಂದು ಕುಹಕವಾಡಿದ್ದಾರೆ.

Latest News

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ನೂತನ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಬೆಂಗಳೂರು, ಜೂನ್‌ 26: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ವಿವಿಧ ಕಾರ್ಖಾನೆಗಳು ಹಾಗೂ ಮನೆ ಕೆಲಸದ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ ಚರ್ಚಿಸಿದರು. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಕಾರ್ಮಿಕರ ಸಮಸ್ಯೆ ಚರ್ಚೆ:ಕರ್ನಾಟಕ ಜನರಲ್ ಲೇಬರ್ ಯೂನಿಯನ್ ಬೆಂಗಳೂರು ಇವರ ಮನವಿ ಮೇರೆಗೆ ಮೆ. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಲಿಮಿಟೆಡ್.. ಕಾರ್ಮಿಕರ ಸಮಸ್ಯೆಗಳ ಕುರಿತು ಸಭೆ ನಡೆಸಿ ಚರ್ಚಿಸಿದರು.

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಮುದ್ದೇಬಿಹಾಳ : ಜೂ.27 ರಿಂದ ಮೊಹರಂ ಹಬ್ಬದ ಆಚರಣೆ ಆರಂಭಗೊಳ್ಳಲಿದ್ದು ಶಾಂತಿಯುತವಾಗಿ ಆಚರಿಸುವಂತೆ ಪಿಎಸ್‌ಐ ಸಂಜಯ ತಿಪರೆಡ್ಡಿ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮೊಹರಂ ಶಾಂತಿಸಭೆಯಲ್ಲಿ ಅವರು ಮಾತನಾಡಿದರು. ಜೂ.27 ರಂದು ಮೊಹರಂ ಹಬ್ಬದ ಆಚರಣೆ ಆರಂಭಗೊಂಡು 29 ರಂದು ದಫನ್ ಮಾಡಲಾಗುತ್ತದೆ. ಈ ಸಮಯದಲ್ಲಿ ಅಲಾಯ್ ದೇವರುಗಳನ್ನು ಪ್ರತಿಷ್ಠಾಪಿಸುವ ಸಮಿತಿಯವರು ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು. ಮೊಹರಂ ಹಬ್ಬ ಭಾವೈಕ್ಯತೆಯ ಸಂಕೇತವಾಗಿದ್ದು ಉಭಯ