ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಪ್ರತ್ಯೇಕ (BJP Rebels) ಪಾದಯಾತ್ರೆಗೆ ಪಕ್ಷದ ವರಿಷ್ಠರು ಅನುಮತಿ ನೀಡಿದರೆ ನನ್ನದೇನು ತಕರಾರು ಇಲ್ಲ ಎನ್ನುವ ಮೂಲಕ ಬಿಜೆಪಿ ರಾಜ್ಯಾ ಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಮ್ಮ ವಿರೋಧಿ ಬಣದ ಮುಂದೆ ಮಂಡಿಯೂರಿದ್ರಾ ಎಂಬ ಮಾತು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.
ಹೌದು, ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಕೆಲವರು ಪಾದಯಾತ್ರೆ ಮಾಡುವ ಅಪೇಕ್ಷೆ ವ್ಯಕ್ತಪಡಿಸಿದ್ದಾರೆ. ಇದರಿಂದ ಪಕ್ಷಕ್ಕೆ ಶಕ್ತಿ ಸಿಗುವುದಾದರೆ, ವರಿಷ್ಠರು ಅನುಮತಿ ನೀಡಿದರೆ ನನ್ನದೇನು ತಕರಾರು ಇಲ್ಲ ಎಂದು ಹೇಳಿದ್ದಾರೆ.
Join Our Telegram: https://t.me/dcgkannada
ವರಿಷ್ಠರು ಅನುಮತಿ ನೀಡಿದರೆ ಮಾತ್ರ ಪಾದಯಾತ್ರೆ ಮಾಡಲು ಅವರು ಸ್ವತಂತ್ರರು. ಆದರೆ, ಆ ಪಾದಯಾತ್ರೆ ಪಕ್ಷಕ್ಕೆ ಪೂರಕವಾಗಿರಬೇಕು ಮತ್ತು ಪಕ್ಷ ಸಂಘಟನೆಗೆ ಲಾಭದ ಸದುದ್ದೇಶ ಇರಬೇಕು ಎಂದು ಅಭಿಪ್ರಾಯಪಟ್ಟರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ವಿಜಯೇಂದ್ರ(BY Vijayendra), ನಾನು ಪಕ್ಷದ ಅಧ್ಯಕ್ಷನಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಆದ್ಯ ಕರ್ತವ್ಯ. ನಾನು ಅಧ್ಯಕ್ಷನಾದಾಗಿನಿಂದಲೂ ಸತತವಾಗಿ ಆ ಕೆಲಸ ಮಾಡುತ್ತಾ ಬಂದಿದ್ದೇನೆ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ: ಮುಡಾ ಹಗರಣ.. ಸಿಎಂ ಪರ ಅರ್ಜಿ ವಜಾ..! ಆ.21ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
ಭಾನುವಾರ ಬೆಳಗಾವಿಯ ರೆಸಾರ್ಟ್‌ವೊಂದರಲ್ಲಿ ಬಿಜೆಪಿಯ ಕೆಲವು ಹಿರಿಯ ನಾಯಕರು ಪ್ರತ್ಯೇಕವಾಗಿ ಸಭೆ ನಡೆಸಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಕೂಡಲಸಂಗಮದಿಂದ ಬಳ್ಳಾರಿವರೆಗೆ (Kudalasangama to Ballary) ಪಾದಯಾತ್ರೆ ನಡೆಸಬೇಕು. ಅಲ್ಲದೆ, ಶೀಘ್ರ ಈ ಸಂಬಂಧ ಪಕ್ಷದ ವರಿಷ್ಠರನ್ನು ಸಂಪರ್ಕಿಸಬೇಕು ಎಂಬ ನಿರ್ಧಾರ ಕೈಗೊಂಡಿದ್ದರು.
ಪಕ್ಷದ ಮುಖಂಡರು, ಬಸನಗೌಡ ಪಾಟೀಲ ಯತ್ನಾಳ್ (Basanagouda patil yatnal), ರಮೇಶ್ ಜಾರಕಿಹೊಳಿ, ಅರವಿಂದ ಲಿಂಬಾವಳಿ, ಜಿ.ಎಂ.ಸಿದ್ಧೇಗೌಡ, ಕುಮಾರ್ ಬಂಗಾರಪ್ಪ, ಪ್ರತಾಪ್ ಸಿಂಹ ಆ ಸಭೆಯಲ್ಲಿ ಭಾಗವಹಿಸಿದ್ದರು.