Bold step of labor department to eradicate child labour: Minister Santhosh Lad

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಾರ್ಮಿಕ‌ ಇಲಾಖೆಯ ದಿಟ್ಟ ಹೆಜ್ಜೆ: ಸಚಿವ ಸಂತೋಷ ಲಾಡ್

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಾರ್ಮಿಕ‌ ಇಲಾಖೆಯ ದಿಟ್ಟ ಹೆಜ್ಜೆ: ಸಚಿವ ಸಂತೋಷ ಲಾಡ್

ಬೆಂಗಳೂರು, ಜೂನ್‌ 12: ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತ ಅರಿವು ಮನೆಗಳಿಂದಲೇ ಆರಂಭವಾಗಬೇಕು. ಸಾರ್ವಜನಿಕರು ಈ ಬಗ್ಗೆ ಜಾಗೃತರಾಗಬೇಕು ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಹೇಳಿದರು.

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಕಾರ್ಮಿಕ ಇಲಾಖೆ ವತಿಯಿಂದ ಬೆಂಗಳೂರಿನ ಎಂ ಜಿ ರಸ್ತೆಯ ಮಹಾತ್ಮ ಗಾಂಧಿ ಉದ್ಯಾನದಿಂದ ಕೆ ಆರ್‌ ವೃತ್ತದವರೆಗೆ ಹಮ್ಮಿಕೊಂಡಿದ್ದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಬಾಲ ಕಾರ್ಮಿಕರಾಗುವುದನ್ನು ತಡೆಯಲು ಕಾರ್ಮಿಕ ಇಲಾಖೆ ಹಲವು ಕ್ರಮ ಕೈಗೊಂಡಿದೆ. ಸರ್ಕಾರದೊಂದಿಗೆ ಜನರೂ ಕೈ ಜೋಡಿಸಿದರೆ ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬಹುದು ಎಂದರು.

ಮಕ್ಕಳನ್ನು ದುಡಿಸಿಕೊಳ್ಳುವುದು ಅಪರಾಧ. ಯಾರೇ ಇದನ್ನು ಉಲ್ಲಂಘಿಸಿದರೆ ಆರು ತಿಂಗಳಿಂದ ಎರಡು ವರ್ಷದವರೆಗೆ ಶಿಕ್ಷೆ, ದಂಡ ವಿಧಿಸಲಾಗುತ್ತದೆ. ಪೋಷಕರಿಗೂ ಶಿಕ್ಷೆ ಆಗಲಿದೆ. ಇದರ ಮೂಲಕ ಭಯ ಮೂಡಿಸುವುದು ಇಲಾಖೆಯ ಉದ್ದೇಶವಲ್ಲ. ಬಾಲ ಕಾರ್ಮಿಕ ಪದ್ಧತಿ ಬಗ್ಗೆ ಸಾಮಾಜಿಕ ವ್ಯವಸ್ಥೆಯಡಿ ಅರಿವು ಮೂಡಿಸಬೇಕು ಎಂದು ವಿವರಿಸಿದರು.

ರಾಜ್ಯದ ೨೨ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ, ಜಿಲ್ಲಾಧಿಕಾರಿ, ಎಸ್‌ ಪಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆ ಸಭೆ ಮಾಡಿ ಮಕ್ಕಳು ಕಾರ್ಮಿಕರಾಗುವುದನ್ನು ತಡೆಯಲು ಕ್ರಮ ಕೈಗೊಂಡಿದ್ದೇವೆ. ಡಿಸಿ, ಸಿಇಒ, ಎಸ್ಪಿಗಳು ಮುತುವರ್ಜಿ ವಹಿಸಿದರೆ ನಿರ್ಮೂಲನೆ ಸುಲಭವಾಗಲಿದೆ. ವರ್ಷಕ್ಕೆ ಒಂದು ಬಾರಿ ದಿನಾಚರಣೆ ಮಾಡಿದರೆ ಸಾಲದು. ಎರಡು ತಿಂಗಳಿಗೆ ಒಂದು ಬಾರಿ ಈ ಸಂಬಂಧ ಅರಿವು ಮೂಡಿಸುವ ಕೆಲಸ ಆಗಬೇಕು ಎಂದು ಸೂಚನೆ ನೀಡಿದರು.

ಹೈವೆ ಬದಿಗಳಲ್ಲಿನ ಡಾಬಾ, ಹೋಟೆಲ್‌, ಗ್ಯಾರೇಜ್‌, ಸಣ್ಣ ಸಣ್ಣ ಮೆಕ್ಯಾನಿಕ್‌ ಶಾಪ್‌ಗಳಲ್ಲಿ ಮಕ್ಕಳು ಕೆಲಸ ಮಾಡುತ್ತಾರೆ. ಅವರು ಕೆಲಸ ಬಿಟ್ಟು ಶಾಲೆಗಳಿಗೆ ಹೋಗುವಂತಾಗಬೇಕು. ಬಾಲ ಕಾರ್ಮಿಕರನ್ನು ದುಡಿಮೆಗೆ ನೇಮಿಸಿಕೊಂಡಿದ್ದು ಯಾರದೇ ಗಮನಕ್ಕೆ ಬಂದರೆ ಕೂಡಲೇ ಸಹಾಯವಾಣಿ 1098 ಗೆ ಕರೆ ಮಾಡಿ ಮಾಹಿತಿ ನೀಡಿ. ಸರ್ಕಾರದೊಂದಿಗೆ ಕೈ ಜೋಡಿಸಿ ನಾವು ನೀವೆಲ್ಲ ಸೇರಿ ಈ ಪದ್ಧತಿಯನ್ನು ತೊಲಗಿಸೋಣ ಎಂದು ಕರೆ ನೀಡಿದರು.

ಸರ್ಕಾರೇತರ ಸಂಸ್ಥೆಗಳನ್ನು ಸೇರಿಸಿಕೊಂಡು ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವ ಚಟುವಟಿಕೆ ಹೆಚ್ಚಿಸಬೇಕು. ಮಕ್ಕಳಿಗೆ ಕಲಿಕೆ ಮೊದಲಾಗಬೇಕು. ಕೆಲಸ ಅಲ್ಲ. ಆಟವಾಡುವ ವಯಸ್ಸಲ್ಲಿ ಮಕ್ಕಳು ಕೆಲಸ ಮಾಡಬಾರದು. ಈ ನಿಟ್ಟಿನಲ್ಲಿ ಎಲ್ಲ ಸಾರ್ವಜನಿಕರು ಸೇರಿ ಒಂದಾಗೋಣ. ನಾವು ನೀವು ಸೇರಿ ಒಳ್ಳೆ ಕೆಲಸ ಮಾಡೋಣ ಎಂದರು.

ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ಖ್ಯಾತ ನಟಿ ಅದಿತಿ ಪ್ರಭುದೇವ ಅವರು ಮಾತನಾಡಿ,” ಬಾಲ ಕಾರ್ಮಿಕರಾಗದಂತೆ ತಡೆಯುವುದು ನಮ್ಮೆಲ್ಲರ ಜವಾಬ್ದಾರಿ. ಕೇವಲ ಸರ್ಕಾರದ ಜವಾಬ್ದಾರಿ ಅಲ್ಲ. ಬಡತನಕ್ಕೂ ಬಾಲಕಾರ್ಮಿಕ ಪದ್ಧತಿಗೂ ನಂಟಿದೆ ಎನ್ನಲಾಗುತ್ತದೆ. ಅದು ಹೌದು. ಆದರೆ ಅದನ್ನು ಹೋಗಲಾಡಿಸಬಹುದು ಎಂದರು.

ಮಕ್ಕಳನ್ನು ಓದಿಸಲಾಗದ ಪರಿಸ್ಥಿತಿಯಲ್ಲಿ ಎಷ್ಟೋ ಪೋಷಕರು ಇದ್ದಾರೆ. ಅಂತಹವರಿಗೊಂದು ನಾವು ಸಣ್ಣ ಸಹಾಯ ಮಾಡಿದರೆ ಎಷ್ಟೋ ಮಕ್ಕಳು ಬಾಲ ಕಾರ್ಮಿಕರಾಗುವುದು ತಪ್ಪಲಿದೆ. ಒಳ್ಳೆಯ ಶಿಕ್ಷಣ ಸಿಕ್ಕರೆ ಮಕ್ಕಳು ಉತ್ತಮ ಪ್ರಜೆ ಆಗುತ್ತಾರೆ. ನಮ್ಮ ಸುತ್ತಮುತ್ತ ಬಾಲ ಕಾರ್ಮಿಕರು ಕಂಡು ಬಂದರೆ ನಮ್ಮ ಜವಾಬ್ದಾರಿ ನಿರ್ವಹಿಸೋಣ ಎಂದರು.

ಇದೇ ವೇಳೆ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಪ್ರಮಾಣ ಸ್ವೀಕರಿಸಲಾಯಿತು.

ಜಾಥಾದಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಶ್ರೀ ಜಿ ಜಗದೀಶ, ಕಾರ್ಮಿಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಡಾ. ಎನ್‌ ವಿ ಪ್ರಸಾದ್‌, ಕಾರ್ಮಿಕ ಆಯುಕ್ತರಾದ ಡಾ. ಎಚ್‌ ಎನ್‌ ಗೋಪಾಲಕೃಷ್ಣ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಕಾರ್ಯದರ್ಶಿಗಳಾದ ಭಾರತಿ ಡಿ, ಜಂಟಿ ಕಾರ್ಮಿಕ ಆಯುಕ್ತರಾದ ರವಿಕುಮಾರ್‌, ಕಾರ್ಮಿಕ ಇಲಾಖೆಯ ಇತರ ಅಧಿಕಾರಿಗಳು, ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಶಾಲಾ ಮಕ್ಕಳು ಭಾಗವಹಿಸಿದ್ದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು