
ವರದಿ: ಕಿರಣಗೌಡ ಹಳೆಮನಿ

ಸಿಂಧನೂರು : ತಾಲೂಕಿನಲ್ಲಿ ಶೈಕ್ಷಣಿಕ ಪ್ರಗತಿಯಲ್ಲಿ ಕುಂಠಿತವಾಗುತ್ತಿದ್ದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಒಂದೇ ಕುರ್ಚಿಗೆ ಇಬ್ಬರೂ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಗಳು ಇರುವುದರಿಂದ ಅಧಿಕಾರಿಗಳ ವರ್ಗಕ್ಕೆ ಹಾಗೂ ಸಿಬ್ಬಂದಿ ವರ್ಗಕ್ಕೆ ತಲೆ ನೋವಾಗಿ ಪರಿಣಮಿಸಿದೆ.
ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada
ಕೆಲವು ತಿಂಗಳ ಹಿಂದೆ ಇದ್ದ ಬಿಇಒ ಸೋಮಶೇಖರಗೌಡ ವರ್ಗಾವಣೆಯಾದ ನಂತರ ಖಾಲಿಯಾಗಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕುರ್ಚಿಗೆ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಬಸವಲಿಂಗಪ್ಪ ಅಧಿಕಾರವನ್ನು ವಹಿಸಿಕೊಂಡು ಕಾರ್ಯವನ್ನು ನಿರ್ವಹಿಸುತ್ತಿದ್ದರು.
ಶತಾಯಗತಾಯ ಪ್ರಯತ್ನ
ಆದರೆ, ಕಾರಣಾಂತರಗಳಿಂದ ಕೆಲಸ ನಿರ್ವಹಿಸಲು ಆಗುತ್ತಿಲ್ಲ ಒತ್ತಡವಾಗುತ್ತಿದ್ದು, ಕೂಡಲೇ ಕ್ಷೇತ್ರ ಶಿಕ್ಷಣಾಧಿಕಾರಿಗಳ ನಿಯೋಜನೆಗೆ ಮೇಲ್ಮಟ್ಟದ ಅಧಿಕಾರಿಗಳ ಜೊತೆಗೆ ಚರ್ಚೆ ಮಾಡಿ ತಾವೇ ಸ್ವತಃ ಕ್ಷೇತ್ರ ಶಿಕ್ಷಣಾಧಿಕಾರಿಗಳ ಅಧಿಕಾರದ ಗದ್ದುಗೆಗೆ ಯಾರನ್ನಾದರೂ ನಿಯೋಜನೆ ಮಾಡಿ ಎಂದು ಸಂಬಂಧಪಟ್ಟ ಮೇಲಾಧಿಕಾರಿಗಳ ಕಚೇರಿಗಳಿಗೆ ಅಲೆದಾಟ ಮಾಡಿ, ಬೆಂಗಳೂರುವರೆಗೂ ಹೋಗಿ ತಮ್ಮ ಮೇಲಿರುವ ಭಾರವನ್ನು ಕೆಳಗಿಳಿಸಿಕೊಳ್ಳಲು ಶತಾಯಗತಾಯ ಪ್ರಯತ್ನವನ್ನು ಕೂಡ ಮಾಡಿದ್ದಾರೆ.
ಈಗ, ಕೆಲವು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಕಾರ್ಯವನ್ನು ನಿರ್ವಹಿಸುತ್ತಿರುವ ವಾಜೀದಾ ಮಜೀದ್ ಆಟಕ್ಕೆ ಉಂಟು ಲೆಕ್ಕಕ್ಕೆ ಇಲ್ಲ ಎನ್ನುವ ಹಾಗಾಗಿದೆ. ನೂತನವಾಗಿ ಅಧಿಕಾರವನ್ನು ಸ್ವೀಕರಿಸಿಕೊಂಡಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳು ಇದುವರೆಗೂ ಕೂಡ ಅಧಿಕಾರಿಗಳ ಸಭೆಯನ್ನು ಮಾಡದೆ ಕಾರ್ಯ ನಿರ್ವಹಿಸುತ್ತಿದ್ದಾರೆ.
ಇದರಿಂದ ಅಧಿಕಾರಿಗಳು ಯಾರ ಮಾತು ಕೇಳಬೇಕೆ ಎನ್ನುವುದು ಯಕ್ಷಪ್ರಶ್ನೆಯಾಗಿದೆ. ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹತ್ತಿರ ಯಾವುದಾದರೂ ಕೆಲಸದ ಪತ್ರಗಳಿಗೆ ರುಜು ಮಾಡಿಸಲು ಹೋದರೆ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಬಸವಲಿಂಗಪ್ಪ ಅವರನ್ನೇ ಕೇಳಿ ಎಂದು ಹೇಳುತ್ತಿರುವುದು ಮುಜುಗರಕ್ಕೀಡು ಮಾಡಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಹೆಸರು ಹೇಳಲು ಬಯಸದ ಸಿಬ್ಬಂದಿ ತಿಳಿಸಿದ್ದಾರೆ.
ಇದನ್ನೂ ಓದಿ: ಕುಸಿದ ಅಂಗನವಾಡಿ ಚಾವಣಿ ಅಪಾಯದಿಂದ ಪಾರದ ಮಕ್ಕಳು