ವಿಜಯಪುರ: ಗ್ಯಾರಂಟಿ ಯೋಜನೆ ಮತ್ತು BPL Card ರದ್ದು ಮಾಡುವ ಕುರಿತು ಎದ್ದಿರುವ ಊಹಾಪೋಹಗಳಿಗೆ ಸಚಿವ ಎಂ.ಬಿ
ಪಾಟೀಲ ಪ್ರತಿಕ್ರಿಯಿಸಿದ್ದಾರೆ.
Join Our Telegram: https://t.me/dcgkannada
ನಮ್ಮ ಕಮಿಟ್ ಮೆಂಟ್, ಅದು ನಮ್ಮ ಬದ್ಧತೆ. ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲೋದಿಲ್ಲ. ನಮ್ಮ ಸರ್ಕಾರ ಇರೋವರೆಗೂ ಗ್ಯಾರಂಟಿ ಇರುತ್ತದೆ ಎಂದು ವಿಜಯಪುರದಲ್ಲಿ ಸಚಿವ ಎಂ. ಬಿ.ಪಾಟೀಲ್ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನು ಮಾಡಬಹುದಾಗಿದೆ. ನಮ್ಮ ಮುಖ್ಯಮಂತ್ರಿಗಳು ಹಣಕಾಸು ತಜ್ಞರು. 15 ಬಜೆಟ್ ಮಂಡನೆ ಮಾಡಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆ ಬಗ್ಗೆ ಯಾರಿಗೂ ಸಂಶಯ ಬೇಡ ಎಂದು ಸ್ಪಷ್ಟವಾಗಿ ಹೇಳಿದರು.
ಇದನ್ನೂ ಓದಿ: Murder: ಆಸ್ತಿ ವಿಚಾರಕ್ಕೆ ಗಲಾಟೆ; ಮಚ್ಚಿನಿಂದ ಅಪ್ಪನನ್ನೆ ಕೊಚ್ಚಿ ಕೊಂದ ಪಾಪಿ ಮಗ..!
BPL Card ರದ್ದು: ಸತೀಶ್ ಜಾರಕಿಹೊಳಿ ಹೇಳಿದ್ದರ ಬಗ್ಗೆ ನನಗೆ ಗೊತ್ತಿಲ್ಲ. ಆದರೆ ನಮ್ಮಲ್ಲಿ ಒತ್ತಡ ಬಹಳ ಇದೆ ರಾಜ್ಯದಲ್ಲಿ ಅತಿ ಹೆಚ್ಚು 82% ಬಿಪಿಎಲ್ ಕಾರ್ಡ್. ಎಲ್ಲರಿಗೂ ಬಿಪಿಎಲ್ ಕಾರ್ಡ್ ಇದೆ ಎಂದು ಮಾಹಿತಿ ನೀಡಿದ್ದಾರೆ.
ಅನವಶ್ಯಕವಾಗಿ ಶ್ರೀಮಂತರ ಬಿಪಿಎಲ್ ಯಾಕೆ ಎಂಬ ಚಿಂತನೆ ನಡೆಯುತ್ತಿದೆ ಎಂದ ಎಂಬಿ ಪಾಟೀಲ್, ಈ ಬಗ್ಗೆ ಸಮಗ್ರವಾಗಿ ಸಮೀಕ್ಷೆ ಆಗಬೇಕಾಗಿದೆ. ಸರಕಾರ ಈ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.