BPL ration card good news

BPL ಕಾರ್ಡ್.. GOOD NEWS

BPL ಕಾರ್ಡ್.. GOOD NEWS

ಬೆಂಗಳೂರು: ಇನ್ನು ಮುಂದೆ ಅನ್ನಭಾಗ್ಯ ಯೋಜನೆಯಡಿ ಬಡತನ ರೇಖೆಗಿಂತ ಕೆಳಗಿರುವ (BPL) ಕಾರ್ಡುದಾರರಿಗೆ ಉಚಿತ ಅಕ್ಕಿ ನೀಡುವುದಕ್ಕಾಗಿ ಕರ್ನಾಟಕಕ್ಕೆ ಅಕ್ಕಿ ಪೂರೈಸಲು ಸಿದ್ಧವಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Join Our Telegram: https://t.me/dcgkannada

ಅಕ್ಕಿ ಪೂರೈಸುವ ಬಗ್ಗೆ ಭಾರತೀಯ ಆಹಾರ ನಿಗಮ (FCI) ಈಗಾಗಲೇ ಘೋಷಣೆ ಮಾಡಿದೆ. ಹೀಗಾಗಿ, ಫಲಾನುಭವಿಗಳಿಗೆ ಈಗ ನೀಡುತ್ತಿರುವ 170 ರೂಪಾಯಿಗಳ ಬದಲಿಗೆ 5 ಕೆಜಿ ಅಕ್ಕಿ ಹೆಚ್ಚು ಸಿಗುವ ಸಾಧ್ಯತೆಯಿದೆ.

ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡುವಂತೆ ರಾಜ್ಯ ಸರ್ಕಾರ ಮಾಡಿದ್ದ ಮನವಿಯನ್ನು ಕೇಂದ್ರ ಸರ್ಕಾರ ಕಳೆದ ವರ್ಷ ತಿರಸ್ಕರಿಸಿತ್ತು. ಇದು ರಾಜ್ಯ ಸರ್ಕಾರ ಮತ್ತು ಕೇಂದ್ರದ ನಡುವೆ ವಾಕ್ಸಮರಕ್ಕೂ ಕಾರಣವಾಯಿತು. ಆದರೆ, ಇದೀಗ ಕೇಂದ್ರ ಸರ್ಕಾರ ನಿರ್ಧಾರ ಬದಲಾಯಿಸಿದೆ.

ಕರ್ನಾಟಕ ಸರ್ಕಾರವು ಅನ್ನಭಾಗ್ಯ ಯೋಜನೆಗಾಗಿ 2.38 ಲಕ್ಷ ಟನ್ ಅಕ್ಕಿಯನ್ನು ಪೂರೈಸಲು ಮನವಿ ಮಾಡಿದೆ. ಅದನ್ನು ಪೂರೈಸಲು ನಾವು ಸಿದ್ಧರಿದ್ದೇವೆ ಎಂದು ಎಫ್‌ಸಿಐನ ಬೆಂಗಳೂರಿನ ಪ್ರಾದೇಶಿಕ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ವರ್ಷ ಕರ್ನಾಟಕಕ್ಕೆ ಅಕ್ಕಿ ಪೂರೈಸಲಿಲ್ಲ ಏಕೆ?

ಕಳೆದ ವರ್ಷ ಮುಂಗಾರು ಮಳೆಯ ಕೊರತೆಯು ಅಕ್ಕಿ ದಾಸ್ತಾನಿನ ಮೇಲೆ ಪರಿಣಾಮ ಬೀರಿತ್ತು. ಹೀಗಾಗಿ, ದೇಶೀಯ ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ ಸ್ಥಗಿತಗೊಳಿಸಲಾಗಿತ್ತು. ಆ ಕಾರಣದಿಂದ ರಾಜ್ಯ ಸರ್ಕಾರದ ಮನವಿಯನ್ನು ಪರಿಗಣಿಸಿರಲಿಲ್ಲ. ಈ ವರ್ಷ ಉತ್ತಮ ಮಳೆಯಾಗಿದೆ. ಎಫ್‌ಸಿಐ (ಕರ್ನಾಟಕ ವಿಭಾಗ) 7.42 ಲಕ್ಷ ಟನ್ ಅಕ್ಕಿ ದಾಸ್ತಾನು ಹೊಂದಿದೆ. 2025 ರ ಮಾರ್ಚ್‌ವರೆಗೆ ಕೆಜಿಗೆ 28 ​​ರೂಪಾಯಿನಂತೆ ರಾಜ್ಯಕ್ಕೆ ಪೂರೈಸಲು ಸಿದ್ಧವಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Viral video: ಹೆಂಗಸಿನ ಮೇಲೆ ವ್ಯಾಮೋಹವಿದ್ದರೆ ನಮ್ಮ ಬಳಿ ಬನ್ನಿ: ರೆಡ್ ಲೈಟ್ ಏರಿಯಾ ಮಹಿಳೆಯ ಆಕ್ರೋಶ..!

ಕರ್ನಾಟಕಕ್ಕೆ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಆಹಾರ ಇಲಾಖೆ ಸಚಿವ ಪ್ರಲ್ಹಾದ್ ಜೋಶಿ ಕೆಲವು ದಿನಗಳ ಹಿಂದಷ್ಟೇ ಹೇಳಿದ್ದನ್ನು ಈಗ ಸ್ಮರಿಸಬಹುದು.

Latest News

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಇಳಕಲ್ಲ: ತಾಲೂಕಿನ ಗಡಿಸುಂಕಾಪುರ ಗ್ರಾಮದ ಹತ್ತಿರ ಇಳಕಲ್ ದತ್ತ ಬರುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಮುದ್ದೇಬಿಹಾಳ : ಪಟ್ಟಣದ ಏಪಿಎಂಸಿಯ ಜಾಗೆಯ ಕುರಿತು ಕಲಬುರ್ಗಿ ಉಚ್ಛ ನ್ಯಾಯಾಲಯ ಸರ್ವೆ ನಂ.98ಕ್ಕೆ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ,

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ ಪಟ್ಟಣದ ಶ್ರೀ ಅಭಿನವ ತಿರುಪತಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ 11 ನೇ ರಾಜ್ಯ ಪೆಂಕಾಕ್ ಸಿಲಾಸ್ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳಾದ ಶಕುಂತಲಾ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ )25 ರಿಂದ 30 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ವಿಕ್ರಾಂತ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ ) 20 ರಿಂದ 25 ಕೆಜಿ ವಿಭಾಗದಲ್ಲಿ ಕಂಚಿನ ಪದಕ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ ಬೇಕು. ಪ್ರತಿಯೊಬ್ಬ ನಾಗರಿಕರಲ್ಲಿಯೂ ಇದು ನಮ್ಮ ನಗರ, ನಮ್ಮ ಓಣಿ, ನನ್ನ ಮನೆ ಎಂಬ ಹೆಮ್ಮೆ ಮೂಡಿದಾಗ ಮಾತ್ರ ಸ್ವಚ್ಛ ನಗರ ಹೊಂದಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಹೆಮ್ಮ ಮೂಡುವಂತೆ ನಾವು ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡ ಜಿಲ್ಲಾಡಳಿತ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ