ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸುತ್ತಿದ್ದಾರೆ.
ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ ಸೀತಾರಾಮನ್. ಕಿಸಾನ್ ಕ್ರೆಡಿಟ್ ಕಾರ್ಯ ಸಾಲದ ಮಿತಿಯನ್ನು 5 ಲಕ್ಷಕ್ಕೆ ಹೆಚ್ಚಳ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.
ಏನಿದು ಕಿಸಾನ್ ಕ್ರೆಡಿಟ್ ಕಾರ್ಡ್?
ಕಿಸಾನ್ ಕ್ರೆಡಿಟ್ ಕಾರ್ಡ್ (KCC) ಭಾರತ ಸರ್ಕಾರವು ರೈತರಿಗೆ ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳಿಗೆ ಸಾಲ ಒದಗಿಸಲು ಪ್ರಾರಂಭಿಸಿದ ಒಂದು ಯೋಜನೆಯಾಗಿದೆ. ಇದನ್ನು 1998 ರಲ್ಲಿ ಪರಿಚಯಿಸಲಾಯಿತು.
ಕಿಸಾನ್ ಕ್ರೆಡಿಟ್ ಕಾರ್ಡ್‌ನ ಉದ್ದೇಶಗಳು:
- ರೈತರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಒದಗಿಸುವುದು.
- ಕೃಷಿ ಉತ್ಪಾದನೆಯನ್ನು ಹೆಚ್ಚಿಸುವುದು.
- ರೈತರ ಆದಾಯವನ್ನು ಹೆಚ್ಚಿಸುವುದು.
- ರೈತರನ್ನು ಸಾಲದ ಸುಳಿಯಿಂದ ಪಾರು ಮಾಡುವುದು.
ಕಿಸಾನ್ ಕ್ರೆಡಿಟ್ ಕಾರ್ಡ್‌ನ ಪ್ರಯೋಜನಗಳು:
- ಕಡಿಮೆ ಬಡ್ಡಿದರದಲ್ಲಿ ಸಾಲ ಲಭ್ಯವಿರುತ್ತದೆ.
- ಯಾವುದೇ ರೀತಿಯ ಭದ್ರತೆ ನೀಡುವ ಅಗತ್ಯವಿಲ್ಲ.
- ಸಾಲವನ್ನು ಮರುಪಾವತಿಸಲು ರೈತರಿಗೆ ಸಾಕಷ್ಟು ಸಮಯಾವಕಾಶವಿರುತ್ತದೆ.
- ಈ ಕಾರ್ಡ್ ಬಳಸಿ ಬಿತ್ತನೆ ಬೀಜಗಳು, ಗೊಬ್ಬರ ಮತ್ತು ಕೀಟನಾಶಕಗಳನ್ನು ಖರೀದಿಸಬಹುದು.
ಕಿಸಾನ್ ಕ್ರೆಡಿಟ್ ಕಾರ್ಡ್‌ಗೆ ಅರ್ಹತೆಗಳು:
- ನೀವು ರೈತರಾಗಿರಬೇಕು.
- ನಿಮಗೆ ಸ್ವಂತ ಜಮೀನು ಇರಬೇಕು ಅಥವಾ ನೀವು ಗೇಣಿದಾರರಾಗಿರಬೇಕು.
- ನಿಮ್ಮ ವಯಸ್ಸು 18 ರಿಂದ 75 ವರ್ಷಗಳ ನಡುವೆ ಇರಬೇಕು.
ಕಿಸಾನ್ ಕ್ರೆಡಿಟ್ ಕಾರ್ಡ್‌ಗೆ ಅರ್ಜಿ ಸಲ್ಲಿಸುವುದು ಹೇಗೆ?
- ನೀವು ಹತ್ತಿರದ ಬ್ಯಾಂಕ್ ಅಥವಾ ಕೃಷಿ ಕಚೇರಿಗೆ ಹೋಗಿ ಅರ್ಜಿ ಸಲ್ಲಿಸಬಹುದು.
- ಅರ್ಜಿಯೊಂದಿಗೆ ನಿಮ್ಮ ಜಮೀನಿನ ದಾಖಲೆಗಳು, ಗುರುತಿನ ಚೀಟಿ ಮತ್ತು ವಿಳಾಸ ಪುರಾವೆಗಳನ್ನು ಸಲ್ಲಿಸಬೇಕು.
ಕಿಸಾನ್ ಕ್ರೆಡಿಟ್ ಕಾರ್ಡ್ ರೈತರಿಗೆ ಬಹಳ ಉಪಯುಕ್ತವಾದ ಯೋಜನೆ. ಈ ಯೋಜನೆಯಡಿ ಸಾಲ ಪಡೆದು ತಮ್ಮ ಕೃಷಿಯನ್ನು ಅಭಿವೃದ್ಧಿಪಡಿಸಬಹುದು.
ದಾಖಲೆ: ನಿರ್ಮಲಾ ಸೀತಾರಾಮನ್ ಅವರು ಸತತ ಎಂಟನೇ ಬಾರಿಗೆ ಬಜೆಟ್ ಮಂಡಿಸಿದ ದಾಖಲೆ ನಿರ್ಮಿಸುತ್ತಿದ್ದಾರೆ. 2019ರಲ್ಲಿ ಮೋದಿ ಸರ್ಕಾರದ ಎರಡನೇ ಅವಧಿಯಲ್ಲಿ ಪೂರ್ಣಾವಧಿ ಹಣಕಾಸು ಸಚಿವೆಯಾಗಿ ನೇಮಕವಾದ ನಿರ್ಮಲಾ ಸೀತಾರಾಮನ್ ಅವರು ಒಟ್ಟು 7 ಪೂರ್ಣಾವಧಿ 2024ರ ಫೆಬ್ರವರಿಯಲ್ಲಿ ಒಂದು ಮಧ್ಯಂತರ ಬಜೆಟ್ ಮಂಡಿಸಿದ್ದರು.