ಬಸ್ಸೇ ಎಮರ್ಜೆನ್ಸಿ ವಾಹನವಾಯ್ತು!

ಬಸ್ಸೇ ಎಮರ್ಜೆನ್ಸಿ ವಾಹನವಾಯ್ತು!

Ad
Ad

Ad
Ad

ಮಂಗಳೂರು: ಚಲಿಸುತ್ತಿದ್ದ ಬಸ್​​ನಲ್ಲೇ ವಿದ್ಯಾರ್ಥಿ ಹೃದಯಾಘಾತಕ್ಕೀಡಾದಾಗ ಬಸ್ ಚಾಲಕ ಹಾಗೂ ನಿರ್ವಾಹಕ ಸಮಯ ಪ್ರಜ್ಞೆ ಮೆರೆದು, ಜೀವ ರಕ್ಷಿಸಿದ ಅಪರೂಪದ ವಿದ್ಯಮಾನ ನಡೆದಿದೆ.

ಮಂಗಳೂರಿನ ಕೂಳೂರು ಮಾರ್ಗ 13ಎಫ್​ನಲ್ಲಿ ಎಂದಿನಂತೆ ಕೃಷ್ಣ ಪ್ರಸಾದ್ ಬಸ್ ಪ್ರಯಾಣಿಕರೊಂದಿಗೆ ತೆರಳುತ್ತಿದ್ದಾಗ ಕಾಲೇಜು ವಿದ್ಯಾರ್ಥಿಯೊಬ್ಬರಲ್ಲಿ ಹಠಾತ್ ಹೃದಯಾಘಾತದ ಲಕ್ಷಣಗಳು ಕಾಣಿಸಿವೆ. ತಕ್ಷಣವೇ ಬಸ್ ಚಾಲಕ ಗಜೇಂದ್ರ ಕುಂದರ್ ಮತ್ತು ಕಂಡಕ್ಟರ್ ಮಹೇಶ್ ಪೂಜಾರಿ ಬಸ್ ಅನ್ನು ತುರ್ತು ವಾಹನವನ್ನಾಗಿ ಪರಿವರ್ತಿಸಿದರು.

ಬಸ್​​ನಲ್ಲಿದ್ದ ಎಮರ್ಜೆನ್ಸಿ ಸೈರನ್ ಚಾಲೂ ಮಾಡಿದ ಅವರು ಕೇವಲ 6 ನಿಮಿಷಗಳಲ್ಲಿ 6 ಕಿಲೋಮೀಟರ್ ದೂರ ಕ್ರಮಿಸಿ ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಗೆ ತಲುಪಿದರು.

ಸಂದರ್ಭವನ್ನು ಅರಿತುಕೊಂಡು ತಕ್ಷಣವೇ ಬಸ್ಸನ್ನು ಆಸ್ಪತ್ರೆಯತ್ತ ಚಲಾಯಿಸಿದ ಕಾರಣ ವಿದ್ಯಾರ್ಥಿಯನ್ನು ರಕ್ಷಿಸಲು ಸಾಧ್ಯವಾಯಿತು. ಪರಿಣಾಮವಾಗಿ ವಿದ್ಯಾರ್ಥಿಯ ಜೀವವೂ ಉಳಿಯಿತು. ಚಾಲಕ ಮತ್ತು ನಿರ್ವಾಹಕನ ಸಮಯ ಪ್ರಜ್ಞೆಗೆ ಮತ್ತು ಮಾನವೀಯತೆಗೆ ಇದೀಗ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಬಸ್ ಚಾಲಕರು ಮತ್ತು ಕಂಡಕ್ಟರ್‌ಗಳು ಮಾನವೀಯತೆ ಮತ್ತು ಸಹಾನುಭೂತಿಯ ಸಾಕಾರರು ಎಂಬುದನ್ನು ಈ ಮೂಲಕ ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ ಎಂದು ಪ್ರಯಾಣಿಕರು ಹರ್ಷ ವ್ಯಕ್ತಪಡಿಸಿದ್ದಾರೆ.

Latest News

ಪಹಲ್ಗಾಂನಲ್ಲಿ ಉಗ್ರರ ದಾಳಿ: ರಾಜ್ಯದ 178 ಪ್ರವಾಸಿಗರನ್ನು ಸುರಕ್ಷಿತವಾಗಿ ಕರೆತಂದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಪಹಲ್ಗಾಂನಲ್ಲಿ ಉಗ್ರರ ದಾಳಿ: ರಾಜ್ಯದ 178 ಪ್ರವಾಸಿಗರನ್ನು ಸುರಕ್ಷಿತವಾಗಿ ಕರೆತಂದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಸಚಿವ ಲಾಡ್‌ ಕಾರ್ಯಕ್ಕೆ ಪ್ರವಾಸಿಗರಿಂದ ಕೃತಜ್ಞತೆ ಬೆಂಗಳೂರು, ಏಪ್ರಿಲ್‌ 24: ಕಾಶ್ಮೀರದ ಪಹಲ್ಗಾಂನಲ್ಲಿ ಪ್ರವಾಸಿಗರನ್ನು

ಕಾಶ್ಮೀರದಿಂದ ರಾಜ್ಯಕ್ಕೆ ಮರಳು ಪ್ರವಾಸಿಗರಿಗೆ ನೆರವು ನೀಡುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್

ಕಾಶ್ಮೀರದಿಂದ ರಾಜ್ಯಕ್ಕೆ ಮರಳು ಪ್ರವಾಸಿಗರಿಗೆ ನೆರವು ನೀಡುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್

ಪಹಲ್ಗಾಮ್: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ ನಡೆದ ಭಯೋತ್ಪಾದಕರ ದಾಳಿ ನಂತರ ಕರ್ನಾಟಕ

ದೇಶದ ಋಣ ತೀರಿಸಲು ಯುವಕರು ಮುಂದೆ ಬನ್ನಿ : ಚಕ್ರವರ್ತಿ ಸೂಲಿಬೆಲೆ

ದೇಶದ ಋಣ ತೀರಿಸಲು ಯುವಕರು ಮುಂದೆ ಬನ್ನಿ : ಚಕ್ರವರ್ತಿ ಸೂಲಿಬೆಲೆ

ಗುಳೆದಗುಡ್ಡ : ನಮ್ಮ ಹಿರಿಯರು 5 ಋಣಗಳನ್ನು ತೀರಿಸಲು ಹೆಳಿದ್ದಾರೆ. ಅವುಗಳೆಂದರೆ ದೇವರ ಋಣ,

ಭಾರೀ ಬಿರುಗಾಳಿ,ಆಲಿಕಲ್ಲು ಮಳೆ:4000 ಪಪ್ಪಾಯಿ ಗಿಡಗಳು ನಾಶ, ದ್ರಾಕ್ಷಿ ಬೆಳೆಗೂ ಹಾನಿ

ಭಾರೀ ಬಿರುಗಾಳಿ,ಆಲಿಕಲ್ಲು ಮಳೆ:4000 ಪಪ್ಪಾಯಿ ಗಿಡಗಳು ನಾಶ, ದ್ರಾಕ್ಷಿ ಬೆಳೆಗೂ ಹಾನಿ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದಲ್ಲಿ ಬುಧವಾರ ಸಂಜೆ ಬೀಸಿದ ಭಾರಿ ಬಿರುಗಾಳಿ, ಅಕಾಲಿಕ ಆಲಿಕಲ್ಲು

ಸಿಎಂ, ಗೃಹ ಸಚಿವರು ಕ್ಷಮೆಯಾಚಿಸಲು ನಡಹಳ್ಳಿ ಆಗ್ರಹ

ಸಿಎಂ, ಗೃಹ ಸಚಿವರು ಕ್ಷಮೆಯಾಚಿಸಲು ನಡಹಳ್ಳಿ ಆಗ್ರಹ

ಮುದ್ದೇಬಿಹಾಳ : ಸಿಇಟಿ ಪರೀಕ್ಷೆ ಬರೆಯುವುದಕ್ಕೆ ತೆರಳಿದ್ದ ಜನಿವಾರ ಸಮಾಜದವರೊಂದಿಗೆ ಅನುಚಿತವಾಗಿ ನಡೆದುಕೊಂಡ ಘಟನೆಗೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಸಿಎಂ ಸಿದ್ಧರಾಮಯ್ಯ, ಗೃಹ ಸಚಿವ ಪರಮೇಶ್ವರ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ. ಎಸ್. ಪಾಟೀಲ ನಡಹಳ್ಳಿ ಆಗ್ರಹಿಸಿದರು. ಪಟ್ಟಣದ ಬಿಜೆಪಿ ಮಂಡಲ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.‌ ಜನಿವಾರ ವಿಪ್ರ ಸಮಾಜವೂ ಸೇರಿ ಹಲವು ಸಮಾಜದವರ ಪ್ರಾತಿನಿಧಿಕ ಸಂಕೇತವಾಗಿದ್ದು ಅದಕ್ಕೆ

ನಿವೃತ ಪೊಲೀಸ್ ಅಧಿಕಾರಿ ಪತ್ನಿಯಿಂದಲೇ ಹತ್ಯೆ

ನಿವೃತ ಪೊಲೀಸ್ ಅಧಿಕಾರಿ ಪತ್ನಿಯಿಂದಲೇ ಹತ್ಯೆ

ಬೆಂಗಳೂರುಃ ಕರ್ನಾಟಕದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಓಂ ಪ್ರಕಾಶ್ ಅವರನ್ನು ಅವರ ಪತ್ನಿಯಿಂದಲೇ ಭೀಕರವಾಗಿ ಹತ್ಯೆಯಾಗಿದ್ದಾರೆ. ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ನಿವಾಸದಲ್ಲಿ ಈ ಕೊಲೆ ನಡೆದಿದೆ. ನಿವೃತ ಅಧಿಕಾರಿ ಓಂ ಪ್ರಕಾಶ್ ಕೊಲೆ ಬಗ್ಗೆ ಅವರ ಪತ್ನಿಯೇ ಮಾಹಿತಿಯನ್ನು ನೀಡಿದ್ದಾರೆ. ಸ್ವತಃ ಓಂ ಪ್ರಕಾಶ್ ಅವರ ಪತ್ನಿಯೇ ಅವರನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಕೊಲೆಯಾದ ಬಳಿಕ ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು.