BY vijayendra: ರಾಜಾಹುಲಿಗೀಗ 82 ವರ್ಷ.. ಈ ದರಿದ್ರ ಸರ್ಕಾರಕ್ಕೆ‌ ಇನ್ನೂ ರಾಜಾಹುಲಿಯ ಭಯ

BY vijayendra: ರಾಜಾಹುಲಿಗೀಗ 82 ವರ್ಷ.. ಈ ದರಿದ್ರ ಸರ್ಕಾರಕ್ಕೆ‌ ಇನ್ನೂ ರಾಜಾಹುಲಿಯ ಭಯ

ಮೈಸೂರು: ಈ ಕಾಂಗ್ರೆಸ್‌ ಸರ್ಕಾರ ದರಿದ್ರ‌ ಸರ್ಕಾರ. ಈ ಸರ್ಕಾರಕ್ಕೆ ಅಂಗವಿಕಲರಿಗೆ ಮಾಶಾಸನ ಕೊಡುವ ಯೋಗ್ಯತೆ ಇಲ್ಲ. ಕಳೆದ ಆರು ತಿಂಗಳಿಂದ ಮಾಸಾಶನ ನೀಡಿಲ್ಲ. ಇಂತಹ ದರಿದ್ರ ಸರ್ಕಾರ ಒಂದಾದ ಮೇಲೆ ಒಂದರಂತೆ ಹಗರಣದಲ್ಲಿ ಮುಳುಗಿದೆ ಎಂದು ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ.ವಿಜಯೇಂದ್ರ(BY vijayendra) ಟೀಕಿಸಿದರು.

Join Our Telegram: https://t.me/dcgkannada

ಮೈಸೂರಿನಲ್ಲಿ ಆಯೋಜಿಸಿದ್ದ ಬಿಜೆಪಿ-ಜೆಡಿಎಸ್ ಪಾದಯಾತ್ರೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಅವರಿಗೆ ಸಿದ್ದರಾಮಯ್ಯ‌ ಅನ್ನಲ್ಲ. ಅಂದ್ರೆ, ಹಿಂದುಳಿದ ನಾಯಕನ ತುಳಿಯುವ ಪ್ರಯತ್ನ‌ ಅಂತಾರೆ. ಆದ್ದರಿಂದ ಮಾನ್ಯ ಮುಖ್ಯಮಂತ್ರಿಗಳೇ ನಿಮ್ಮ ದರಿದ್ರ ಸರ್ಕಾರ ಬೇಡ.‌ ನಿಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ವಿಜಯೇಂದ್ರ (BY vijayendra) ಒತ್ತಾಯಿಸಿದರು.

ದುರಹಂಕಾರದಿಂದ‌ ವಿಪಕ್ಷಗಳಿಗೆ ಧಮ್ಕಿ ಹಾಕುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಸವಾಲು ಹಾಕುವೆ. ಬನ್ನಿ ಹಗರಣ ಬಿಚ್ಚಿಡಿ. ಅದರ ಬಗ್ಗೆ ಚರ್ಚೆ ಮಾಡೋಣ.‌ ಅದು ಬಿಟ್ಟು ವಿಪಕ್ಷಗಳಿಗೆ ಧಮ್ಕಿ ಹಾಕುವುದನ್ನು ಬಿಟ್ಟು ಬಿಡಿ ಎಂದು ಗರಂ ಆಗಿ‌ ಹೇಳಿದರು.

ಇದನ್ನೂ ಓದಿ: BJP-JDS ಪಾದಯಾತ್ರೆ ಸಮಾರೋಪಕ್ಕೂ ಮುನ್ನ ಚಾಮುಂಡಿ ಮೊರೆ ಹೋದ‌ ಸಿಎಂ ಸಿದ್ದರಾಮಯ್ಯ‌

ಯಡಿಯೂರಪ್ಪ ಬಡವರ, ರೈತರ ನಾಯಕ. ಅವರ ರಾಜಕೀಯ ನಿವೃತ್ತಿ ಬಗ್ಗೆ ಮಾತಾಡುತ್ತಿರಲ್ಲ. ಅವರಿಗೆ 82 ವಯಸ್ಸಾಗಿದೆ. ಅವರನ್ನು ಕಂಡಿರೆ ನಿಮಗೆ ಇನ್ನೂ ಭಯ ಇದೆವೇ ಎಂದು ಕೆಣಕಿದರು.

ನಿಮ್ಮ ಸ್ಥಾನ ಉಳಿಸಿಕೊಳ್ಳಿ. ಯಡಿಯೂರಪ್ಪ ಬಗ್ಗೆ ಮಾತಾಡೋದು ಬಿಡಿ. ಅವರ ಮೇಲೆ ಮಾರಾಣಾಂತಿಕ ಹಲ್ಲೆ ಆದಾಗ, ಅವರು ಕೊನೆಯ ಉಸಿರು ಇರುವವರೆಗೂ ಹೋರಾಟ ಮಾಡುವ ಪ್ರತಿಜ್ಞೆ ಮಾಡಿದ್ದಾರೆ. ಅವರು ಬಡವರ ಪರ, ರೈತರ ಪರ ಇರುತ್ತಾರೆ. ಅವರ ರಾಜೀನಾಮೆ ಕುರಿತು ನೀಡಿದ ಹೇಳಿಕೆ ಹಿಂದಕ್ಕೆ ಪಡೆಯಿರಿ ಎಂದು ಸಲಹೆ ನೀಡಿದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ