BPL ration card good news

Ration Card: ರೇಷನ್ ಕಾರ್ಡ್ ರದ್ದು.. ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ

Ration Card: ರೇಷನ್ ಕಾರ್ಡ್ ರದ್ದು.. ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ

ಬೆಂಗಳೂರು: ನಗರ, ಜಿಲ್ಲಾ ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸಮರ್ಪಕವಾಗಿ ಕೈಗೊಳ್ಳಲಾಗುತ್ತಿದ್ದು, ಕೆಲವು ಸಾರ್ವಜನಿಕರು ಗಣತಿದಾರರು ತಮ್ಮ ಪಡಿತರ ಚೀಟಿಯ (Ration Card) ರದ್ದತಿಗೆ ಬಂದಿದ್ದಾರೆಂಬ ತಪ್ಪು ಕಲ್ಪನೆಯಿಂದ ಸರಿಯಾದ ಮಾಹಿತಿ ನೀಡಲು ಸಹಕರಿಸದೆ ಸಮೀಕ್ಷೆಗೆ ಅಡ್ಡಿಯಾಗುತ್ತಿರುವುದು ಕಂಡುಬಂದಿರುತ್ತದೆ.

ಈ ಸಮೀಕ್ಷೆಯು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾಗಿದ್ದು, ಹಿಂದುಳಿದ ವರ್ಗಗಳ ಹಾಗೂ ಇತರೆ ಎಲ್ಲ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ದತ್ತಾಂಶವನ್ನು ಸಂಗ್ರಹಿಸಲು ಮಾತ್ರ ನಡೆಸಲಾಗುತ್ತಿದೆ.
ಯಾವುದೇ ಪಡಿತರ ಚೀಟಿ ರದ್ದತಿ ಕಾರ್ಯವನ್ನು ಸಮೀಕ್ಷೆಯಲ್ಲಿ ಮಾಡಲಾಗುವುದಿಲ್ಲ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ. ಜಗದೀಶ ಅವರು ಸ್ಪಷ್ಟಪಡಿಸಿದ್ದಾರೆ.

ರಾಜ್ಯಾದ್ಯಂತ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಅಸಮಾನತೆಗಳನ್ನು ಹೋಗಲಾಡಿಸುವ ಯೋಜನೆಗಳನ್ನು ರೂಪಿಸಲು ಈ ದತ್ತಾಂಶ ಸಹಕಾರಿಯಾಗಲಿದೆ.

ಹಾಗಾಗಿ ಸಾರ್ವಜನಿಕರು ಈ ಸಮೀಕ್ಷೆ ಬಗ್ಗೆ ಯಾವುದೇ ತಪ್ಪು ಕಲ್ಪನೆ ಹೊಂದದೆ ಮತ್ತು ವದಂತಿಗಳಿಗೆ ಕಿವಿಕೊಡದೇ ನಿಶ್ಚಿಂತೆಯಿಂದ ಭಾಗವಹಿಸಿ ಸಮೀಕ್ಷೆಯನ್ನು ಯಶಸ್ವಿಗೊಳಿಸಲು ಸಹಕರಿಸಬೇಕೆಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ