
ಮುದ್ದೇಬಿಹಾಳ : ತಾಲ್ಲೂಕಿನಾದ್ಯಂತ ಸೋಮವಾರ ಮುಸ್ಲಿಂರ ಪವಿತ್ರ ಹಬ್ಬ ಈದ್ ಉಲ್ ಫಿತ್ರ ಆಚರಣೆಯನ್ನು ಶ್ರದ್ದಾ, ಭಕ್ತಿಯಿಂದ ಆಚರಿಸಲಾಯಿತು.

ಚಂದ್ರ ದರ್ಶನ ಸಮೀತಿ ನಿರ್ದೇಶನದಂತೆ ಭಾನುವಾರ ಚಂದ್ರದರ್ಶನವಾದ ಹಿನ್ನೆಲೆಯಲ್ಲಿ ಸೋಮವಾರ ಹಬ್ಬದ ಆಚರಣೆಗೆ ಕರೆ ನೀಡಲಾಗಿತ್ತು. ಪಟ್ಟಣದ ಮಸೀದಿಗಳ ಮೂಲಕ ಮೆರವಣಿಗೆಯಲ್ಲಿ ಕಿಲ್ಲಾದಲ್ಲಿರುವ ಮಸೀದಿಗೆ ಆಗಮಿಸಿದ ಮುಸ್ಲಿಂ ಬಾಂಧವರು ಅಲ್ಲಿಂದ ತಕಬೀರ ಹೇಳುತ್ತಾ ತಾಳಿಕೋಟಿ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ಆಗಮಿಸಿದರು.
ಬಳಿಕ ಅಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಸಾಮೂಹಿಕ ಪ್ರಾರ್ಥನೆ ಬಳಿಕ ಸ್ನೇಹಿತರು,ಕುಟುಂಬಸ್ಥರೊಂದಿಗೆ ಪರಸ್ಪರ ಹಬ್ಬದ ಶುಭಾಷಯ ವಿನಿಮಯ ಮಾಡಿಕೊಂಡರು. ಹಿಂದೂ ಬಾಂಧವರನ್ನು ತಮ್ಮ ಮನೆಗಳಿಗೆ ಕರೆಯಿಸಿಕೊಂಡು ಸುರಕುರ್ಮಾ, ಔತಣದ ಆತಿಥ್ಯ ನೀಡಿ ಸತ್ಕರಿಸಿದರು. ಮುಂಜಾಗ್ರತಾ ಕ್ರಮವಾಗಿ ಸಿಪಿಐ ಮಹ್ಮದಫಸಿವುದ್ದೀನ, ಪಿಎಸ್‌ಐ ಸಂಜಯ ತಿಪರೆಡ್ಡಿ ಸಿಬ್ಬಂದಿ ಬಿಗಿ ಭದ್ರತೆ ಒದಗಿಸಿದ್ದರು. ಮೌಲಾನಾ ಮುಫ್ತಿ ಅಫ್ತಾಬ ಈದ್ ಉಲ್ ಫಿತ್ರನ ಸಂದೇಶ ಹೇಳಿದರು.