ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು ಸಾಧ್ಯವಿದೆ ರನ್ನ ಪ್ರತಿಷ್ಠಾನ ನಿರ್ದೇಶಕಿ ಶ್ರೀಮತಿ ಸುಲೋಚನಾ ಜವಳಗಿ ಎಂದು ಹೇಳಿದರು.
ಶುಕ್ರವಾರ ನಗರದ ತ್ರಿವೇಣಿ ಶಿಕ್ಷಣ ಸಂಸ್ಥೆಯ ಶ್ರೀ ಸಂಗಮನಾಥ ಅಂತಾರಾಷ್ಟ್ರೀಯ ಸಿ.ಬಿ.ಎಸ್.ಇ ಹಾಗೂ ಕನ್ನಡ ಮಾಧ್ಯಮ ಶಾಲೆಗಳ ಸಂಯಕ್ತ ಆಶ್ರಯದಲ್ಲಿ ಶಾಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ವಹಿಸಿ ಮಾತನಾಡಿದರು.
ತ್ರಿವೇಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಿಶಿರ ಮಲಘಾಣ ಮಾತನಾಡಿ ದೇಶದ ಅಖಂಡತೆ, ಐಕ್ಯತೆ ಹಾಗೂ ಸಮಗ್ರತೆಗೆ ಸವಾಲೊಡ್ಡಿರುವ ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತೆಸೆದಾಗ ಮಾತ್ರವೇ ಭಾರತದ ಸಮಗ್ರ ಅಭಿವೃದ್ಧಿ ಸಾಧ್ಯವಿದೆ ನುಡಿದರು.
ಕಾರ್ಯಕ್ರಮದಲ್ಲಿ ಶ್ರೀಮತಿ ಸುಲೋಚನಾ ಚಂದಾ, ತ್ರಿವೇಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಿಶಿರ ಮಲಘಾಣ ನಿರ್ದೇಶಕಿ ಶಿವಾನಿ ಮಲಘಾಣ, ಸೂರಜ್ ಸೋನವಾಲಕರ, ಆಶಾಕಿರಣ ಸೋನವಾಲಕರ, ಚಿದಾನಂದ ಪಾಟೀಲ್, ಪ್ರಭು ಅವಟಿ, ಆಡಳಿತಾಧಿಕಾರಿ ಮಲ್ಲು ಕಳ್ಳೆನವರ, ಪ್ರಾಚಾರ್ಯ ಸುರೇಶ ಭಜಂತ್ರಿ,ಮುಖ್ಯ ಶಿಕ್ಷಕ ವೆಂಕಟೇಶ ಗುಡೆಪ್ಪನವರ ಇದ್ದರು.
ಇದೇ ಸಂದರ್ಭದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದ ಶಾಲಾ ಸಂಸತ್ ಸದಸ್ಯರಿಗೆ ಪದಗ್ರಹಣ ಮಾಡಲಾಯಿತು. ನಂತರ ಭಾಷಣ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.