Celebration of Independence Day at Triveni Educational Institution

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು ಸಾಧ್ಯವಿದೆ ರನ್ನ ಪ್ರತಿಷ್ಠಾನ ನಿರ್ದೇಶಕಿ ಶ್ರೀಮತಿ ಸುಲೋಚನಾ ಜವಳಗಿ ಎಂದು ಹೇಳಿದರು.

ಶುಕ್ರವಾರ ನಗರದ ತ್ರಿವೇಣಿ ಶಿಕ್ಷಣ ಸಂಸ್ಥೆಯ ಶ್ರೀ ಸಂಗಮನಾಥ ಅಂತಾರಾಷ್ಟ್ರೀಯ ಸಿ.ಬಿ.ಎಸ್.ಇ ಹಾಗೂ ಕನ್ನಡ ಮಾಧ್ಯಮ ಶಾಲೆಗಳ ಸಂಯಕ್ತ ಆಶ್ರಯದಲ್ಲಿ ಶಾಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ವಹಿಸಿ ಮಾತನಾಡಿದರು.

ತ್ರಿವೇಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಿಶಿರ ಮಲಘಾಣ ಮಾತನಾಡಿ ದೇಶದ ಅಖಂಡತೆ, ಐಕ್ಯತೆ ಹಾಗೂ ಸಮಗ್ರತೆಗೆ ಸವಾಲೊಡ್ಡಿರುವ ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತೆಸೆದಾಗ ಮಾತ್ರವೇ ಭಾರತದ ಸಮಗ್ರ ಅಭಿವೃದ್ಧಿ ಸಾಧ್ಯವಿದೆ ನುಡಿದರು.

ಕಾರ್ಯಕ್ರಮದಲ್ಲಿ ಶ್ರೀಮತಿ ಸುಲೋಚನಾ‌ ಚಂದಾ, ತ್ರಿವೇಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಿಶಿರ ಮಲಘಾಣ ನಿರ್ದೇಶಕಿ ಶಿವಾನಿ ಮಲಘಾಣ, ಸೂರಜ್ ಸೋನವಾಲಕರ, ಆಶಾಕಿರಣ ಸೋನವಾಲಕರ, ಚಿದಾನಂದ ಪಾಟೀಲ್, ಪ್ರಭು ಅವಟಿ, ಆಡಳಿತಾಧಿಕಾರಿ ಮಲ್ಲು ಕಳ್ಳೆನವರ, ಪ್ರಾಚಾರ್ಯ ಸುರೇಶ ಭಜಂತ್ರಿ,ಮುಖ್ಯ ಶಿಕ್ಷಕ ವೆಂಕಟೇಶ ಗುಡೆಪ್ಪನವರ ಇದ್ದರು.

ಇದೇ ಸಂದರ್ಭದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದ ಶಾಲಾ‌ ಸಂಸತ್ ಸದಸ್ಯರಿಗೆ ಪದಗ್ರಹಣ ಮಾಡಲಾಯಿತು. ನಂತರ ಭಾಷಣ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು