ನಾಡು ನುಡಿ ವಿಚಾರದಲ್ಲಿ ರಾಜಿ ಪ್ರಶ್ನೆ ಇಲ್ಲ ಎಂದ ಕೇಂದ್ರ ಸಚಿವರು

ನಾಡು ನುಡಿ ವಿಚಾರದಲ್ಲಿ ರಾಜಿ ಪ್ರಶ್ನೆ ಇಲ್ಲ ಎಂದ ಕೇಂದ್ರ ಸಚಿವರು

ನವದೆಹಲಿ: ಉತ್ತರ ಪ್ರದೇಶದ ನೋಯ್ಡಾದಲ್ಲಿ ದೆಹಲಿ ಕರ್ನಾಟಕ ಸಂಘಕ್ಕೆ ಜಾಗ ಕೊಡಿಸುವ ಬಗ್ಗೆ ಆ ರಾಜ್ಯದ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್ ಅವರ ಜತೆ ಚರ್ಚೆ ಮಾಡಲಾಗುವುದು ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಭರವಸೆ ನೀಡಿದರು.

ರಾಜ್ಯದ ಕೇಂದ್ರ ಸಚಿವರು, ಸಂಸದರಿಗೆ ದೆಹಲಿ ಕರ್ನಾಟಕ ಸಂಘ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಸಚಿವರು ಪಾಲ್ಗೊಂಡು ಮಾತನಾಡಿದರು.

ಈಗಾಗಲೇ ನೋಯ್ಡಾದಲ್ಲಿ ಜಾಗ ಪಡೆಯುವ ಬಗ್ಗೆ ಸಂಘದ ವತಿಯಿಂದ ಪ್ರಯತ್ನಗಳು ನಡೆದಿವೆ. ಹೀಗಾಗಿ ಕೇಂದ್ರ ಸಂಪುಟದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಎಲ್ಲಾ ಸಚಿವರು, ಸಂಸದರ ಜತೆ ಸೇರಿ ಉತ್ತರ ಪ್ರದೇಶದ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿ ಮನವಿ ಮಾಡಲಾಗುವುದು ಇಂದು ಅವರು ಹೇಳಿದರು.

ನಾವು ಎಲ್ಲಿಯೇ ಇದ್ದರೂ ಕನ್ನಡಿಗರಿಗೆ ಉಳಿಯಬೇಕು. ನಮ್ಮ ಭಾಷೆ, ಸಂಸ್ಕೃತಿ, ನಾಡು ನುಡಿಯನ್ನು ಬಿಟ್ಟು ಬದುಕಬಾರದು. ಈ ನಿಟ್ಟಿನಲ್ಲಿ ದೆಹಲಿ ಕನ್ನಡಿಗರ ಬದ್ಧತೆ, ಕನ್ನಡತನದ ಬಗ್ಗೆ ನನಗೆ ಸಂತಸವಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ನಾಡು ನುಡಿ, ನೆಲ ಜಲದ ವಿಷಯ ಬಂದಾಗ ರಾಜಿ ಪ್ರಶ್ನೆ ಇಲ್ಲ. ಎಲ್ಲರೂ ಒಟ್ಟಾಗಿ ರಾಜ್ಯದ ಹಿತಕ್ಕಾಗಿ ಕೆಲಸ ಮಾಡುತ್ತೇವೆ ಎಂದು ಕುಮಾರಸ್ವಾಮಿ ಅವರು ಹೇಳಿದರು. ಅಲ್ಲದೆ; ದೆಹಲಿ ಕರ್ನಾಟಕ ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ಕೇಂದ್ರ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದ ಹೆಚ್.ಡಿ. ಕುಮಾರಸ್ವಾಮಿ ಅವರೂ ಸೇರಿದಂತೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ ಹಾಗೂ ಸಂಸದರಾದ ಸಿ.ಎನ್.ಮಂಜುನಾಥ್, ಮಲ್ಲೇಶ್ ಬಾಬು, ಸುಧಾಕರ್, ಮಲ್ಲೇಶ್ ಬಾಬು, ವಿಶ್ವೇಶ್ವರ ಹೆಗಡೆ ಕಾಗೇರಿ, ಪಿ.ಸಿ.ಮೋಹನ್, ಸಾಗರ ಖಂಡ್ರೆ, ಬಸವರಾಜ್ ಬೊಮ್ಮಾಯಿ, ಗೋವಿಂದ ಕಾರಜೋಳ, ರಾಜ್ಯಸಭಾ ಸದಸ್ಯ ನಾರಾಯಣ ಸಾ ಭಾಂಢಗೆ ಅವರನ್ನು ಈ ಸಂದರ್ಭದಲ್ಲಿ ಕರ್ನಾಟಕ ಸಂಘದ ವತಿಯಿಂದ ಆತ್ಮೀಯವಾಗಿ ಅಭಿನಂದಿಸಲಾಯಿತು.

ಸಂಘದ ಅಧ್ಯಕ್ಷ ಸಿ.ಪಿ.ನಾಗರಾಜ್, ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ ಸೇರಿ ಸಂಘದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Latest News

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ : ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ಸಮಗ್ರ ಪ್ರಶಸ್ತಿ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ : ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ಸಮಗ್ರ ಪ್ರಶಸ್ತಿ

ಮುದ್ದೇಬಿಹಾಳ : ತಾಲ್ಲೂಕಿನ ಕೊಪ್ಪ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹುಲ್ಲೂರ ಕ್ಲಸ್ಟರ್

ಮನೆಮನೆಗೆ ಪೋಲಿಸ್ ಭೇಟಿ ನೀಡಿ ಕಾನೂನು ಅರಿವು ಕಾರ್ಯಕ್ರಮ

ಮನೆಮನೆಗೆ ಪೋಲಿಸ್ ಭೇಟಿ ನೀಡಿ ಕಾನೂನು ಅರಿವು ಕಾರ್ಯಕ್ರಮ

ನಾಲತವಾಡ: ಸ್ಥಳೀಯ ಹೊರ ಪೋಲಿಸ್ ಠಾಣೆ ಆರಕ್ಷಕ ಸಿಬ್ಬಂದಿ ಘಾಳಪೂಜಿ, ಬಿಜ್ಜೂರ, ಖಾನೀಕೇರಿ, ಲೊಟಗೇರಿ

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ನಾಲತವಾಡ: ಸಮೀಪದ ಲೊಟಗೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಸ್ಕೃತಿಯ ಕಾಂತಿ ಮಕ್ಕಳ ಮೂಲಕ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಎರಡು ದಿನಗಳ ಹಿಂದಷ್ಟೇ ರಾಜ್ಯದ ಸರ್ಕಾರಿ,ಖಾಸಗಿ.ಗುತ್ತಿಗೆ,ಹೊರಗುತ್ತಿಗೆ ಕ್ಷೇತ್ರದಲ್ಲಿ ಸೇವೆ

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆಯ ಅಭಿವೃದ್ಧಿಗೆ ಕೈ ಜೋಡಿಸೋಣ

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆಯ ಅಭಿವೃದ್ಧಿಗೆ ಕೈ ಜೋಡಿಸೋಣ

ಮುದ್ದೇಬಿಹಾಳ : ಮುಸ್ಲಿಂ ಸಮಾಜದ ಪ್ರಾತಿನಿಧಿಕ ಸಂಸ್ಥೆ ಅಂಜುಮನ್ ಇಸ್ಲಾಂ ಕಮೀಟಿಗೆ ಆಡಳಿತ ಮಂಡಳಿ ರಚನೆಗೊಂಡರೆ ಸಮಾಜದ ಶೈಕ್ಷಣಿಕ ಹಾಗೂ ಔದ್ಯೋಗಿಕ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಲು ಆದ್ಯತೆ ದೊರೆಯುತ್ತದೆ ಎಂದು ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಹರನಾಳ ಪಿಕೆಪಿಎಸ್ ಅಧ್ಯಕ್ಷ ಕಾಶೀಂಪಟೇಲ್ ಮೂಕಿಹಾಳ ಹಾಗೂ ಅಂಜುಮನ್ ಸಂಸ್ಥೆಯ ಮತದಾರ ಸದಸ್ಯರ ದಾಖಲಾತಿ ಅಧಿಕಾರಿಯಾಗಿ ನೇಮಕವಾದ ಹುಸೇನ ನಾಯಕೋಡಿ ಅವರ

ಬಸರಕೋಡ ಪಿಕೆಪಿಎಸ್‌ಗೆ ಅವಿರೋಧ ಆಯ್ಕೆ : ಮತ್ತೆ ಹೇಮರೆಡ್ಡಿ ಮೇಟಿ ಪೆನಲ್‌ಗೆ ಮುನ್ನಡೆ

ಬಸರಕೋಡ ಪಿಕೆಪಿಎಸ್‌ಗೆ ಅವಿರೋಧ ಆಯ್ಕೆ : ಮತ್ತೆ ಹೇಮರೆಡ್ಡಿ ಮೇಟಿ ಪೆನಲ್‌ಗೆ ಮುನ್ನಡೆ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ವಿವಿಧೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ 12 ಸ್ಥಾನಗಳಿಗೆ ಸೋಮವಾರ ಅವಿರೋಧ ಆಯ್ಕೆ ನಡೆದಿದ್ದು ಹಿಂದಿನ ಅಧ್ಯಕ್ಷ ಹೇಮರೆಡ್ಡಿ ಮೇಟಿ ಪೆನಲ್‌ಗೆ ಮುನ್ನಡೆ ದೊರೆತಿದೆ. ಚುನಾವಣಾಧಿಕಾರಿ, ಸಹಕಾರ ಅಭಿವೃದ್ಧಿ ಅಧಿಕಾರಿ ವಿ.ಎಸ್.ಉತ್ನಾಳ ಅವರು 12 ನಿರ್ದೇಶಕರು ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು. ಸಾಮಾನ್ಯ ವರ್ಗದಿಂದ ಹಿಂದಿನ ಅಧ್ಯಕ್ಷ ಹೇಮಣ್ಣ ಮೇಟಿ, ಬಸವರಾಜ ಪಾಟೀಲ, ಶಾಂತಪ್ಪ ಸಂಕನಾಳ, ಬಾಬು ಸೂಳಿಭಾವಿ,ಸಿಂದೂಬಲ್ಲಾಳ ನಾಡಗೌಡ, ಹಿಂದುಳಿದ ಅ