ನಾಡು ನುಡಿ ವಿಚಾರದಲ್ಲಿ ರಾಜಿ ಪ್ರಶ್ನೆ ಇಲ್ಲ ಎಂದ ಕೇಂದ್ರ ಸಚಿವರು

ನಾಡು ನುಡಿ ವಿಚಾರದಲ್ಲಿ ರಾಜಿ ಪ್ರಶ್ನೆ ಇಲ್ಲ ಎಂದ ಕೇಂದ್ರ ಸಚಿವರು

ನವದೆಹಲಿ: ಉತ್ತರ ಪ್ರದೇಶದ ನೋಯ್ಡಾದಲ್ಲಿ ದೆಹಲಿ ಕರ್ನಾಟಕ ಸಂಘಕ್ಕೆ ಜಾಗ ಕೊಡಿಸುವ ಬಗ್ಗೆ ಆ ರಾಜ್ಯದ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್ ಅವರ ಜತೆ ಚರ್ಚೆ ಮಾಡಲಾಗುವುದು ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಭರವಸೆ ನೀಡಿದರು.

ರಾಜ್ಯದ ಕೇಂದ್ರ ಸಚಿವರು, ಸಂಸದರಿಗೆ ದೆಹಲಿ ಕರ್ನಾಟಕ ಸಂಘ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಸಚಿವರು ಪಾಲ್ಗೊಂಡು ಮಾತನಾಡಿದರು.

ಈಗಾಗಲೇ ನೋಯ್ಡಾದಲ್ಲಿ ಜಾಗ ಪಡೆಯುವ ಬಗ್ಗೆ ಸಂಘದ ವತಿಯಿಂದ ಪ್ರಯತ್ನಗಳು ನಡೆದಿವೆ. ಹೀಗಾಗಿ ಕೇಂದ್ರ ಸಂಪುಟದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಎಲ್ಲಾ ಸಚಿವರು, ಸಂಸದರ ಜತೆ ಸೇರಿ ಉತ್ತರ ಪ್ರದೇಶದ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿ ಮನವಿ ಮಾಡಲಾಗುವುದು ಇಂದು ಅವರು ಹೇಳಿದರು.

ನಾವು ಎಲ್ಲಿಯೇ ಇದ್ದರೂ ಕನ್ನಡಿಗರಿಗೆ ಉಳಿಯಬೇಕು. ನಮ್ಮ ಭಾಷೆ, ಸಂಸ್ಕೃತಿ, ನಾಡು ನುಡಿಯನ್ನು ಬಿಟ್ಟು ಬದುಕಬಾರದು. ಈ ನಿಟ್ಟಿನಲ್ಲಿ ದೆಹಲಿ ಕನ್ನಡಿಗರ ಬದ್ಧತೆ, ಕನ್ನಡತನದ ಬಗ್ಗೆ ನನಗೆ ಸಂತಸವಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ನಾಡು ನುಡಿ, ನೆಲ ಜಲದ ವಿಷಯ ಬಂದಾಗ ರಾಜಿ ಪ್ರಶ್ನೆ ಇಲ್ಲ. ಎಲ್ಲರೂ ಒಟ್ಟಾಗಿ ರಾಜ್ಯದ ಹಿತಕ್ಕಾಗಿ ಕೆಲಸ ಮಾಡುತ್ತೇವೆ ಎಂದು ಕುಮಾರಸ್ವಾಮಿ ಅವರು ಹೇಳಿದರು. ಅಲ್ಲದೆ; ದೆಹಲಿ ಕರ್ನಾಟಕ ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ಕೇಂದ್ರ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದ ಹೆಚ್.ಡಿ. ಕುಮಾರಸ್ವಾಮಿ ಅವರೂ ಸೇರಿದಂತೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ ಹಾಗೂ ಸಂಸದರಾದ ಸಿ.ಎನ್.ಮಂಜುನಾಥ್, ಮಲ್ಲೇಶ್ ಬಾಬು, ಸುಧಾಕರ್, ಮಲ್ಲೇಶ್ ಬಾಬು, ವಿಶ್ವೇಶ್ವರ ಹೆಗಡೆ ಕಾಗೇರಿ, ಪಿ.ಸಿ.ಮೋಹನ್, ಸಾಗರ ಖಂಡ್ರೆ, ಬಸವರಾಜ್ ಬೊಮ್ಮಾಯಿ, ಗೋವಿಂದ ಕಾರಜೋಳ, ರಾಜ್ಯಸಭಾ ಸದಸ್ಯ ನಾರಾಯಣ ಸಾ ಭಾಂಢಗೆ ಅವರನ್ನು ಈ ಸಂದರ್ಭದಲ್ಲಿ ಕರ್ನಾಟಕ ಸಂಘದ ವತಿಯಿಂದ ಆತ್ಮೀಯವಾಗಿ ಅಭಿನಂದಿಸಲಾಯಿತು.

ಸಂಘದ ಅಧ್ಯಕ್ಷ ಸಿ.ಪಿ.ನಾಗರಾಜ್, ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ ಸೇರಿ ಸಂಘದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Latest News

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಇಳಕಲ್ಲ: ತಾಲೂಕಿನ ಗಡಿಸುಂಕಾಪುರ ಗ್ರಾಮದ ಹತ್ತಿರ ಇಳಕಲ್ ದತ್ತ ಬರುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಮುದ್ದೇಬಿಹಾಳ : ಪಟ್ಟಣದ ಏಪಿಎಂಸಿಯ ಜಾಗೆಯ ಕುರಿತು ಕಲಬುರ್ಗಿ ಉಚ್ಛ ನ್ಯಾಯಾಲಯ ಸರ್ವೆ ನಂ.98ಕ್ಕೆ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ,

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ ಪಟ್ಟಣದ ಶ್ರೀ ಅಭಿನವ ತಿರುಪತಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ 11 ನೇ ರಾಜ್ಯ ಪೆಂಕಾಕ್ ಸಿಲಾಸ್ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳಾದ ಶಕುಂತಲಾ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ )25 ರಿಂದ 30 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ವಿಕ್ರಾಂತ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ ) 20 ರಿಂದ 25 ಕೆಜಿ ವಿಭಾಗದಲ್ಲಿ ಕಂಚಿನ ಪದಕ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ ಬೇಕು. ಪ್ರತಿಯೊಬ್ಬ ನಾಗರಿಕರಲ್ಲಿಯೂ ಇದು ನಮ್ಮ ನಗರ, ನಮ್ಮ ಓಣಿ, ನನ್ನ ಮನೆ ಎಂಬ ಹೆಮ್ಮೆ ಮೂಡಿದಾಗ ಮಾತ್ರ ಸ್ವಚ್ಛ ನಗರ ಹೊಂದಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಹೆಮ್ಮ ಮೂಡುವಂತೆ ನಾವು ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡ ಜಿಲ್ಲಾಡಳಿತ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ