Siddaramaiah: ಪರಿಸರ ಪ್ರವಾಸೋದ್ಯಮ ಆಹ್ಲಾದಿಸಲು ಚಾಮರಾಜನಗರ ಉತ್ತಮ ಜಿಲ್ಲೆ: ಸಿಎಂ

Siddaramaiah: ಪರಿಸರ ಪ್ರವಾಸೋದ್ಯಮ ಆಹ್ಲಾದಿಸಲು ಚಾಮರಾಜನಗರ ಉತ್ತಮ ಜಿಲ್ಲೆ: ಸಿಎಂ

ಚಾಮರಾಜನಗರ ಆ 10: ನೀವು ನನ್ನ ಕುರ್ಚಿ ಅಲ್ಲಾಡಿಸ್ತಾನೇ ಇರಿ. ನನ್ನ‌ ಕುರ್ಚಿ ಗಟ್ಟಿ ಆಗ್ತನೇ ಇರ್ತದೆ: ಬಿಜೆಪಿ-ಜೆಡಿಎಸ್ ಷಡ್ಯಂತ್ರವನ್ನು ಸಿಎಂ ಸಿದ್ದರಾಮಯ್ಯ (Siddaramaiah) ಲೇವಡಿ ಮಾಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋಧ್ಯಮ ಇಲಾಖೆ ಮತ್ತು ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ’ “ಭರಚುಕ್ಕಿ ಜಲಪಾತೋತ್ಸವ” ವನ್ನು ಉದ್ಘಾಟಿಸಿ ಮಾತನಾಡಿದರು.

Join Our Telegram: https://t.me/dcgkannada

ಪರಿಸರ ಪ್ರವಾಸೋಧ್ಯಮ ಆಹ್ಲಾದಿಸಲು ಚಾಮರಾಜನಗರ ಉತ್ತಮ ಜಿಲ್ಲೆಯಾಗಿದೆ. ಆದರೆ ಆರ್ಥಿಕವಾಗಿ, ಸಾಮಾಜಿಕವಾಗಿ ಬಹಳ ಹಿಂದೆ ಉಳಿದಿದೆ ಎಂದರು.

ಈ ಜಿಲ್ಲೆಗೆ ಕಾಲಿಟ್ಟರೆ ಅಧಿಕಾರ ಹೋಗ್ತದೆ ಎನ್ನುವ ಮೂಢನಂಬಿಕೆ ಬಿತ್ತಿದ್ದರು. ಆದರೂ ನಾನು ಹತ್ತಕ್ಕೂ ಹೆಚ್ವು ಬಾರಿ ಜಿಲ್ಲೆಗೆ ಮುಖ್ಯಮಂತ್ರಿಯಾಗಿ ಬಂದಿದ್ದೇನೆ. ಇಲ್ಲಿಗೆ ಬಂದಾಗೆಲ್ಲಾ ನನ್ನ ಕುರ್ಚಿ ಹೆಚ್ಚು ಗಟ್ಟಿಯಾಗಿದೆ ಎಂದರು. (Siddaramaiah)

ನನ್ನ ಕುರ್ಚಿಯನ್ನು ಬಿಜೆಪಿ-ಜೆಡಿಎಸ್ ನವರು ಅಲ್ಲಾಡಿಸ್ತಾನೇ ಇದಾರೆ. ಅವರು ಎಷ್ಟೇ ಅಲ್ಲಾಡಿಸಿದ್ರೂ ನಾನು ಇನ್ನಷ್ಟು ಗಟ್ಟಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದು ಬಡವರ, ಶೋಷಿತರ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸ್ತಲೇ ಇರ್ತೇನೆ ಎಂದು ಬಿಜೆಪಿ-ಜೆಡಿಎಸ್ ಅವರ ಜಂಟಿ ಷಡ್ಯಂತ್ರವನ್ನು ಲೇವಡಿ ಮಾಡಿದರು.

ಇದನ್ನೂ‌ ಓದಿ: BJP-JDS ಪಾದಯಾತ್ರೆ ಸಮಾರೋಪಕ್ಕೂ ಮುನ್ನ ಚಾಮುಂಡಿ ಮೊರೆ ಹೋದ‌ ಸಿಎಂ ಸಿದ್ದರಾಮಯ್ಯ‌

ಸಿದ್ದರಾಮಯ್ಯರ (Siddaramaiah) ಕಾಲುಗುಣ ಸರಿ ಇಲ್ಲ. ಅದಕ್ಕೆ ರಾಜ್ಯದಲ್ಲಿ ಮಳೆ ಇಲ್ಲ ಎಂದು ನನ್ನ ಬಗ್ಗೆ ಆರೋಪಿಸಿದ್ದರು. ಆದರೆ, ಈ ಬಾರಿ ಉತ್ತಮ ಮಳೆಯಾಗಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಹೀಗಾಗಿ ನನ್ನ ಬಗ್ಗೆ ಮೂಡಿಸಿದ್ದ ಮತ್ತೊಂದು ಮೂಢನಂಬಿಕೆ ಕೂಡ ಸುಳ್ಳಾಗಿದೆ ಎಂದರು.

ಚಾಮರಾಜನಗರ ಜಿಲ್ಲೆಯಲ್ಲಿ ಪ್ರವಾಸೋಧ್ಯಮ ಅಭಿವೃದ್ಧಿಪಡಿಸಲು ಸರ್ಕಾರ ಅಗತ್ಯ ಎಲ್ಲ ನೆರವನ್ನೂ ನೀಡಲಿದೆ. ಅಗತ್ಯಬಿದ್ದರೆ ಹೊಸ ಪ್ರವಾಸೋಧ್ಯಮ ನೀತಿಯನ್ನೂ ರಚಿಸಲಾಗುವುದು ಭರವಸೆ ನೀಡಿದರು.

ಬಿಳಿಗಿರಿರಂಗನಬೆಟ್ಟ, ಗಗನಚುಕ್ಕಿ ರೋಪ್ ವೇ, ಇಲ್ಲಿನ ದೇವಸ್ಥಾನ ಅಭಿವೃದ್ಧಿ, ಸುಬರ್ಣಾವತಿ ಜಲಾಶಯದಲ್ಲಿ ಜಲ ಸಾಹನ ಕ್ರೀಡೆಗಳನ್ನು ಆರಂಭಿಸುವುದೂ ಸೇರಿ ಎಲ್ಲಾ ಯೋಜನೆಗಳಿಗೂ ಸರ್ಕಾರ ಜೊತೆಗೆ ನಿಲ್ಲಲಿದೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮದ ಮೂಲಕ ಆರ್ಥಿಕವಾಗಿ ವೇಗದ ಪ್ರಗತಿ ಕಾಣಿಸಲು ಎಲ್ಲಾ ಸಹಕಾರವನ್ನೂ ಸರ್ಕಾರ ನೀಡಲಿದೆ ಎಂದು ಭರವಸೆ ನೀಡಿದರು.

ಸಚಿವರಾದ ಎಚ್.ಕೆ.ಪಾಟೀಲ್, ಕೆ.ವೆಂಕಟೇಶ್, ಶಿವರಾಜ ತಂಗಡಗಿ, ಶಾಸಕರಾದ ಹನೂರು ಮಂಜುನಾಥ್, ಪುಟ್ಟರಂಗಶೆಟ್ಟಿ, ಗಣೇಶ್ ಪ್ರಸಾದ್, ಸಂಸದರಾದ ಸುನಿಲ್ ಬೋಸ್, ವಿಧಾನ‌ ಪರಿಷತ್ ಸದಸ್ಯರಾದ ಡಾ.ತಿಮ್ಮಯ್ಯ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿದ್ದರು.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ