Champai Soren Former CM joins BJP

Champai Soren: ಬಿಜೆಪಿಗೆ ಮಾಜಿ ಸಿಎಂ ಸೇರ್ಪಡೆ..?!

Champai Soren: ಬಿಜೆಪಿಗೆ ಮಾಜಿ ಸಿಎಂ ಸೇರ್ಪಡೆ..?!













ಜಾರ್ಖಂಡ್‌: ಮಾಜಿ ಸಿಎಂ ಹಾಗೂ JMM ಶಾಸಕ ಚಂಪೈ ಸೊರೆನ್ (Champai Soren) ಬಿಜೆಪಿ ಸೇರಲಿದ್ದಾರಂತೆ. ಈಗಾಗಲೇ ಅವರು ದೆಹಲಿ ತಲುಪಿದ್ದು, ಅಮಿತ್ ಶಾ ಅವರ ಸಮ್ಮುಖದಲ್ಲಿ ತಮ್ಮ ಇತರೆ ಮೂವರು JMM ಶಾಸಕರೊಂದಿಗೆ ಬಿಜೆಪಿ ಸೇರಲಿದ್ದಾರೆ ಎಂದು ವರದಿಯಾಗಿದೆ.

ಇತ್ತೀಚೆಗೆ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಜೈಲಿಗೆ ಹೋಗಿದ್ದಾಗ ಅವರ ಜವಾಬ್ದಾರಿಯನ್ನು ನಿಭಾಯಿಸಿದ್ದರು.

Join Our Telegram: https://t.me/dcgkannada

ಚಂಪೈ ಸೊರೇನ್ (Champai Soren) ಬಿಜೆಪಿಗೆ ಸೇರುತ್ತಾರೆ ಎಂಬ ಊಹಾಪೋಹಗಳ ನಡುವೆ ಅವರು ತಮ್ಮ ಸಿಬ್ಬಂದಿಯೊಂದಿಗೆ ಇಂದು ಮುಂಜಾನೆ ದೆಹಲಿಗೆ ತೆರಳಿರುವುದು ಇದಕ್ಕೆ ಮತ್ತಷ್ಟು ಪುಷ್ಟಿ ನೀಡಿದಂತಿದೆ.

ಭೂ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಹೇಮಂತ್ ಸೊರೇನ್ ಅವರು ಜನವರಿ 31ರಂದು ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿದ್ದರು. ಅದಕ್ಕೂ ಕೆಲ ಕ್ಷಣ ಮುನ್ನ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ: Accident: ಟೋಲ್ ಸಿಬ್ಬಂದಿ ಎಡವಟ್ಟು.. ಸರಣಿ ಅಪಘಾತ..

ಬಳಿಕ, ಚಂಪೈ ಸೊರೇನ್ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿತ್ತು. ಫೆ.2ರಂದು ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

ಐದು ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ಹೇಮಂತ್ ಸೊರೇನ್ ಪುನಃ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿರುವುದಕ್ಕೆ ಚಂಪೈ ಸೊರೇನ್ ಅಸಮಾಧಾನಗೊಂಡಿದ ಎನ್ನಲಾಗಿದೆ.

ರಾಜ್ಯಪಾಲರ ನಡೆ ಖಂಡಿಸಿ ನಾಳೆ ಕಾಂಗ್ರೆಸ್ ಪ್ರತಿಭಟನೆ : ಡಿಕೆಶಿ

ಬೆಂಗಳೂರು : ರಾಜ್ಯಪಾಲರು ವಿವಾದವೇ ಅಲ್ಲದ ವಿಚಾರವನ್ನು ವಿವಾದ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆಗೆ ಮುಂದಾಗಿದ್ದಾರೆ. ಇದನ್ನು ಖಂಡಿಸಿ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಶಾಂತಿಯುತವಾಗಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ರಾಜ್ಯಪಾಲರ ನಡೆಯನ್ನು ಖಂಡಿಸಿ ಪಕ್ಷವು ರಾಷ್ಟ್ರಪತಿಗೆ ಮನವಿಯನ್ನು ಸಲ್ಲಿಸಲಿದೆ. ಯಾವುದೇ ದಾಂದಲೆ ಇಲ್ಲದೆ ಶಾಂತಿಯುತವಾಗಿ ಎಚ್ಚರಿಕೆಯಿಂದ ಪ್ರತಿಭಟನೆ ನಡೆಸಲಾಗುವುದು. ಗಾಂಧಿ ಪ್ರತಿಪಾದಿಸಿದ ಶಾಂತಿ ಮಾರ್ಗದಲ್ಲಿ ಪ್ರತಿಭಟನೆ ನಡೆಸಿ ದೇಶಕ್ಕೆ ಸಂದೇಶ ನೀಡುವುದಾಗಿ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.

ರಾಜ್ಯಪಾಲರು ತೀರ್ಮಾನ ಸರಿಯಾಗಿ ಮಾಡಿಲ್ಲ. ಸಚಿವ ಸಂಪುಟ, ಪಕ್ಷ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿದೆ. ಹಿಂದಿನ ಸಂಪುಟ ಸಭೆಯಲ್ಲ ನಾವು ಕೈಗೊಂಡ ನಿರ್ಣಯವನ್ನು ರಾಜ್ಯಪಾಲರು ಸ್ವೀಕರಿಸಿಲ್ಲ. ರಾಜಭವನವನ್ನು ದುರಪಯೋಗ ಮಾಡಿ ನಿರ್ಧಾರ ಹೊರಡಿಸಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಿದ್ದರು.

Latest News

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ,

ಆರ್.ಎಂ.ಎಸ್.ಎ ಶಾಲೆಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಆರ್.ಎಂ.ಎಸ್.ಎ ಶಾಲೆಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ತಾಲ್ಲೂಕಿನ ಬಿದರಕುಂದಿ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯ (ಆರ್.ಎಂ.ಎಸ್.ಎ) ಶಾಲೆಯ ಸನ್

ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ

ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ

ಮುದ್ದೇಬಿಹಾಳ : ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು ಕೂಡಲೇ ಸರ್ಕಾರವನ್ನು ರಾಜ್ಯಪಾಲರು ವಜಾಗೊಳಿಸಬೇಕೆಂದು ಆಗ್ರಹಿಸಿ

ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ಹುನಗುಂದ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಅಮರೇಶ ನಾಗೂರ ಹಾಗೂ ಪ್ರಧಾನ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ ಇದೇ 29 ನೇ ಭಾನುವಾರ ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಅರಮನೆ ಮೈದಾನದ ದಿ ಗ್ರಾಂಡ್‌ ಕ್ಯಾಸಲ್‌, ಗೇಟ್‌ ಸಂಖ್ಯೆ 6 ರಲ್ಲಿ ಸಂಜೆ 5 ರಿಂದ ಈ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಯೋಗದಲ್ಲಿ ಉತ್ಕೃಷ್ಟ ಸಾಧನೆ ಮಾಡಿದ ವಿಶ್ವದ ಐವರು ಶ್ರೇಷ್ಠ ಯೋಗ ಸಾಧಕರಿಗೆ ಪ್ರಶಸ್ತಿ

ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ

ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ

ನಾರಾಯಣಪುರ : ಅಣೆಕಟ್ಟಿನ ಪ್ರಸ್ತುತ ನೀರಿನ ಸಂಗ್ರಹವು 80.27% ಇರುತ್ತದೆ. ಕೃಷ್ಣಾ ನದಿಗೆ ಹೊರಹರಿವು 84,445 ಕ್ಯೂಸೆಕ್ ಇರುವದರಿಂದ ಆಣೆಕಟ್ಟಿನ ಮೇಲ್ಭಾಗದ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಆಲಮಟ್ಟಿ ಅಣೆಕಟ್ಟೆಯ ಹೊರಹರಿವು ಹೆಚ್ಚಾಗಲಿದೆ ಎಂದು ಪರಿಗಣಿಸಲಾಗಿದೆ. ನಾರಾಯಣಪುರ ಆಣೆಕಟ್ಟೆಗೆ ಸುಮಾರು 1,10,000 ಕ್ಯೂಸೆಕ್ ಒಳಹರಿವು ಬರುವ ಸಾಧ್ಯತೆಯಿದೆ. ಮದ್ಯಾಹ್ನ 3 ಗಂಟೆ ನಂತರ, ಪ್ರಸ್ತುತ ಇರುವ ಹೊರಹರಿವನ್ನು 84,445 ಕ್ಯೂಸೆಕ್ ರಿಂದ 1,10,000 ಕ್ಯೂಸೆಕ್ ಗೆ ಹಂತ ಹಂತವಾಗಿ ಹೆಚ್ಚಿಸಲಾಗುವುದು