Channapatna by-election: Explosive bomb exploded by C.P. Yogeshwar

Channapattana by election: ದಿಲ್ಲಿಯಲ್ಲಿ ಮುಂದುವರಿದ ಚನ್ನಪಟ್ಟಣ ಟಿಕೆಟ್ ಕಸರತ್ತು.. ನಡ್ಡಾ, ಸಂತೋಷ್ ಭೇಟಿ ಮಾಡಿದ ಬಿಜೆಪಿ ನಿಯೋಗ

Channapattana by election: ದಿಲ್ಲಿಯಲ್ಲಿ ಮುಂದುವರಿದ ಚನ್ನಪಟ್ಟಣ ಟಿಕೆಟ್ ಕಸರತ್ತು.. ನಡ್ಡಾ, ಸಂತೋಷ್ ಭೇಟಿ ಮಾಡಿದ ಬಿಜೆಪಿ ನಿಯೋಗ

Ad
Ad

ನವದೆಹಲಿ: ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ಟಿಕೆಟ್ (Channapattana by election) ಕಾವು ಏರುತ್ತಿದ್ದು, ಇದೇ ವಿಚಾರವಾಗಿ ಶುಕ್ರವಾರ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದ ಬಿಜೆಪಿ ನಿಯೋಗ ವರಿಷ್ಠರನ್ನು ಭೇಟಿ ಮಾಡಿದ್ದಾರೆ.

Ad
Ad

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಈ ವೇಳೆ ಉಪ ಚುನಾವಣೆ ಟಿಕೆಟ್ ಆಕಾಂಕ್ಷಿ ಸಿ.ಪಿ.ಯೋಗೇಶ್ವರ್ ಅವರು ಬಿಎಸ್ಪಿ ಅಥವಾ ಬೇರೆ ಪಕ್ಷ ಸೇರುವ ಸಾಧ್ಯತೆಯನ್ನು ರಾಜ್ಯದ ನಾಯಕರು ತಳ್ಳಿಹಾಕಿದ್ದಾರೆ. ಅವರು ಬಿಜೆಪಿಯಲ್ಲೇ ಉಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.

ಶಾಸಕರಾದ ಅರವಿಂದ್ ಬೆಲ್ಲದ್, ಸಿ.ಎನ್.ಅಶ್ವತ್ಥನಾರಾಯಣ ಹಾಗೂ ಚನ್ನಪಟ್ಟಣ ಟಿಕೆಟ್ ಆಕಾಂಕ್ಷಿ ಸಿ.ಪಿ. ಯೋಗೇಶ್ವರ್ ಅವರನ್ನೊಳಗೊಂಡ ನಿಯೋಗ ಜೆ.ಪಿ.ನಡ್ಡಾ ಹಾಗೂ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿಯಾಗಿ ಉಪಚುನಾವಣೆ ಕುರಿತು ಚರ್ಚಿಸಿತು.

ಭೇಟಿ ಬಳಿಕ ಸುದ್ದಿಗಾರರೊಂದಿಗೆ ಆರ್.ಅಶೋಕ್ ಮಾತನಾಡಿ, ಗುರುವಾರ ರಾತ್ರಿ ಚನ್ನಪಟ್ಟಣ ಉಪಚುನಾವಣೆ ಕುರಿತು ಸುದೀರ್ಘ ಚರ್ಚೆಯಾಗಿದೆ. ಶುಕ್ರವಾರ ಬಿ.ಎಲ್. ಸಂತೋಷ್ ಮತ್ತು ನಡ್ಡಾ ಅವರೊಂದಿಗೂ ಮಾತುಕತೆ ನಡೆಸಿದ್ದೇವೆ. ಟಿಕೆಟ್ ಬಗ್ಗೆ ಎನ್‌ಡಿಎ ನಾಯಕರು ನಿರ್ಧಾರ ಮಾಡುತ್ತಾರೆ ಎಂದರು.

ಇದೇ ವೇಳೆ ಯೋಗೇಶ್ವರ್ ಬಿಎಸ್ಪಿ ಅಥವಾ ಬೇರೆ ಪಕ್ಷ ಸೇರಿ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಾರೆಂಬ ಸುದ್ದಿಗಳ ಕುರಿತು ಪ್ರತಿಕ್ರಿಯಿಸಿದ ಅವರು ಅಂಥ ಸಾಧ್ಯತೆಗಳನ್ನು ತಳ್ಳಿಹಾಕಿದರು. ಯೋಗೇಶ್ವ‌ರ್ ಅವರು ಬೇರೆ ಪಕ್ಷಕ್ಕೆ ಸೇರ್ಪಡೆಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂಬುದು ಊಹಾಪೋಹ. ಅವರು ಬಿಜೆಪಿಯಲ್ಲೇ ಇರಲಿದ್ದಾರೆ. (Channapattana by election)

ಟಿಕೆಟ್ ವಿಚಾರವಾಗಿ ಜೆಡಿಎಸ್ ವರಿಷ್ಠ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ನಮ್ಮ
ವರಿಷ್ಠರು ಸೇರಿ ನಿರ್ಧಾರ ಮಾಡುತ್ತಾರೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: Death news: ಮಾಜಿ ಸಚಿವ ಶ್ರೀನಿವಾಸ್ ಇನ್ನಿಲ್ಲ

ಡಿಕೆಶಿಗೆ ಟಾಂಗ್

ಇದೇ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಟಾಂಗ್ ನೀಡಿದ ಅಶೋಕ್, ಅವರು ಆಚನ್ನಪಟ್ಟಣಕ್ಕೆ ಹೋಗಿ ಜನರ ಕಿವಿ ಮೇಲೆ ಹೂವಿಡಲು ಸಾಧ್ಯವಿಲ್ಲ. ಕ್ಷೇತ್ರದ ಜನರು ಜಾಣರಿದ್ದಾರೆ. ಡಿ.ಕೆ.ಶಿವಕುಮಾರ್ ವಿಸಿಟಿಂಗ್ ಡಾಕ್ಟರ್ ಇದ್ದಂತೆ. ಚುನಾವಣೆ ಇದ್ದಾಗ ಮಾತ್ರ ಕ್ಷೇತ್ರಕ್ಕೆ ಹೋಗುತ್ತಾರೆ ಎಂದು ವ್ಯಂಗ್ಯವಾಡಿದರು.

Latest News

ಹೋಳಿ, ರಂಜಾನ್ ಶಾಂತಿಪಾಲನಾ ಸಭೆ:ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬಾರದಂತೆ ಹಬ್ಬದಾಚರಣೆhu ಮಾಡಿ

ಹೋಳಿ, ರಂಜಾನ್ ಶಾಂತಿಪಾಲನಾ ಸಭೆ:ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬಾರದಂತೆ ಹಬ್ಬದಾಚರಣೆhu ಮಾಡಿ

ಮುದ್ದೇಬಿಹಾಳ : ಹೋಳಿ ಹಾಗೂ ರಂಜಾನ್ ಹಬ್ಬಗಳು ಶಾಂತಿ,ಸಹೋದರತೆ ಪ್ರೀತಿ ಹಾಗೂ ಸಹೋದರತೆಯ ಸಂಕೇತಗಳಾಗಿದ್ದು

ಕ್ಷೌರಿಕ ಜನಾಂಗಕ್ಕೆ ಅಪಮಾನ-ಕ್ಷಮೆಯಾಚನೆಗೆ ಆಗ್ರಹ

ಕ್ಷೌರಿಕ ಜನಾಂಗಕ್ಕೆ ಅಪಮಾನ-ಕ್ಷಮೆಯಾಚನೆಗೆ ಆಗ್ರಹ

ಮುದ್ದೇಬಿಹಾಳ : ಪಟ್ಟಣದ ಹೆಸ್ಕಾಂನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಟಿಸಿ ದುರಸ್ತಿ ಕೇಂದ್ರದ ಉದ್ಘಾಟನಾ¸ ಸಮಾರಂಭದಲ್ಲಿ

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನೇಮಕಗೊಂಡಿರುವ ಮೂವರು

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಮುದ್ದೇಬಿಹಾಳ : ಕೌಟುಂಬಿಕ ಹಿನ್ನೆಲೆಯ ದಂಪತಿಗಳಿಬ್ಬರ ಪ್ರಕರಣವನ್ನು ಇಲ್ಲಿನ ಲೋಕ ಅದಾಲತ್‌ನಲ್ಲಿ ರಾಜೀ ಸಂಧಾನದ

ಇಟಗಿ ಗ್ರಾಮದ ಶರಣಮ್ಮ ಬ. ಪಾಟೀಲ ನಿಧನ

ಇಟಗಿ ಗ್ರಾಮದ ಶರಣಮ್ಮ ಬ. ಪಾಟೀಲ ನಿಧನ

ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಇಟಗಿ ಗ್ರಾಮದ ಶರಣಮ್ಮ ಬಸನಗೌಡ ಪಾಟೀಲ (72) ಅವರು ಬುಧವಾರ ಫೆ.12ರ ಬೆಳಗಿನ ಜಾವ ಸುಮಾರು 12:30ಕ್ಕೆ ನಿಧನರಾದರು. ಮೃತರಿಗೆ ಪತಿ, ಇಬ್ಬರು ಪುತ್ರರು, ನಾಲ್ವರು ಮೊಮ್ಮಕ್ಕಳು ಇದ್ದಾರೆ. ಮೃತರ ಅಂತ್ಯಕ್ರಿಯೆ ಬುಧವಾರ ಫೆ.12ರ ಮಧ್ಯಾಹ್ನ 2 ಗಂಟೆಗೆ ಸ್ವಗ್ರಾಮ ಇಟಗಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಸರಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣಕ್ಕೆ ಅಧಿಕಾರಿಗಳೇ ಗೈರು ಹಾಜರಿ

ಸರಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣಕ್ಕೆ ಅಧಿಕಾರಿಗಳೇ ಗೈರು ಹಾಜರಿ

ಬೀಳಗಿ: ನಮ್ಮೆಲ್ಲರ ಸಂಘಟಿತ ಹೋರಾಟದ ಫಲವಾಗಿ 7ನೇ ವೇತನ ಆಯೋಗ ಯಥಾವತ್ತಾಗಿ ಜಾರಿಗೆ ಬಂದಿದಲ್ಲದೆ, ನಮ್ಮ ಕುಟುಂಬ ವರ್ಗದಲ್ಲಿ ಅನಾರೋಗ್ಯಕೀಡಾದ ಸಂದರ್ಭದಲ್ಲಿ ಉಚಿತ ಚಿಕಿತ್ದೆಗಾಗಿ ಆರೋಗ್ಯ ಸಂಜವೀನಿ ಅನುಷ್ಟಾನಗೊಳಿಸಲು ಯಶಸ್ಬಿಯಾಗಿದ್ದು, 2006 ರಿಂದ ನೇಮಕಗೊಂಡ ಸರಕಾರಿ ನೌಕರರ ಹಿತ ದೃಷ್ಡಿಯಿಂದ ಸರಕಾರ ಜಾರಿಗೊಳಿಸಿದ ಎನ್ ಪಿ ಎಸ್ ರದ್ದುಗೊಳಿಸಿ ಓ ಪಿ ಎಸ್ ಜಾರಿಯಾಗಲು ಹೋರಾಟ ಮಾಡಿ ಯಶಸ್ವಿಯಾಗಲು ಪ್ರತಿಯೊಬ್ಬರು ಸಂಘಟೀತರಾಗೋಣ ಎಂದು ಕ.ರಾ.ಸ. ನೌಕರರ ಸಂಘದ ಜಿಲ್ಲಾಧ್ಯಕ್ಷ ಎಮ್.