ಬೆಂಗಳೂರು : ಚನ್ನಪಟ್ಟಣ ಬೈ ಎಲೆಕ್ಷನ್ ಗೆ (Channapattana by election) ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬ ಕುತೂಹಲಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ತೆರೆ ಎಳೆದಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ವೀರಭದ್ರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಚನ್ನಪಟ್ಟಣ ಬೈ ಎಲೆಕ್ಷನ್ ಗೆ ನಾನೇ ಅಭ್ಯರ್ಥಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
Join Our Telegram: https://t.me/dcgkannada
ಈ ಮೂಲಕ ಚನ್ನಪಟ್ಟಣದ ಉಪಚುನಾಣೆ (Channapattana by election) ಕಾವು ಮತ್ತಷ್ಟು ತಾರಕಕ್ಕೆ ಏರುವುದು ಸ್ಪಷ್ಟವಾಗಿದೆ. ಇನ್ನು, NDA ಅಭ್ಯರ್ಥಿ ಯಾರು ಎಂದು ಸ್ಪಷ್ಟವಾಗಿಲ್ಲ.
ಚನ್ನಪಟ್ಟಣದ ಅಭಿವೃದ್ಧಿಗಾಗಿ ನಮ್ಮ ಸರ್ಕಾರ ಬದ್ಧ:
ಚನ್ನಪಟ್ಟಣದಲ್ಲಿ ಇಂದು ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗೌರವ ವಂದನೆ ಸ್ವೀಕರಿಸಿದ ಡಿಸಿಎಂ ಡಿಕೆಶಿ ಮಾತನಾಡಿ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿದೆ. ಬೊಂಬೆ ನಾಡು ಎಂದೇ ಪ್ರಖ್ಯಾತವಾಗಿರುವ ಚನ್ನಪಟ್ಟಣದಲ್ಲಿ ಧ್ವಜಾರೋಹಣ ನೆರವೇರಿಸಿದ್ದು ನಿಜಕ್ಕೂ ಖುಷಿ ತಂತು. ಇಲ್ಲಿನ ಜನರು ತೋರುತ್ತಿರುವ ಪ್ರೀತಿ, ಮಮಕಾರಕ್ಕೆ ಮನಸೋತಿದ್ದೇನೆ. ಚನ್ನಪಟ್ಟಣದ ಅಭಿವೃದ್ಧಿಗಾಗಿ ನಮ್ಮ ಸರ್ಕಾರ ಬದ್ಧವಾಗಿದ್ದು, ಅದನ್ನು ಮಾಡಿಯೇ ತೀರುತ್ತೇವೆ ಎಂದು ಹೇಳಿದರು.
ಇದನ್ನೂ ಓದಿ: Independence day: ಒಗ್ಗಟ್ಟಾಗಿ ದೇಶ ಕಟ್ಟಿ ಮುನ್ನೆಡಿಸೋಣ- ಶಾಸಕ ವಿಜಯಾನಂದ