ಮುದ್ದೇಬಿಹಾಳ : ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಮಾದರಿ ಎಸ್.ಸಿ.ಎಸ್.ಟಿ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನಿತ್ಯವೂ ವಿದ್ಯಾರ್ಥಿಗಳ ಓಡಾಟಕ್ಕೆ ನಗರ ಸಾರಿಗೆ ಬಸ್‌ನ್ನು ಮಂಗಳವಾರದಿಂದ ಆರಂಭಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಎಸ್.ಎಲ್.ಪಾಟೀಲ್ ತಿಳಿಸಿದ್ದಾರೆ.
ಪಟ್ಟಣದ ಬಸ್ ನಿಲ್ದಾಣದಿಂದ ಕಾಲೇಜಿಗೆ ಸುಮಾರು 1.50 ಕಿ.ಮೀ ದೂರವಿದ್ದು ವಿದ್ಯಾರ್ಥಿಗಳು, ಉಪನ್ಯಾಸಕರ ಓಡಾಟಕ್ಕೆ ಸಮಸ್ಯೆಯಾಗಿದ್ದನ್ನು ಸಾರಿಗೆ ಘಟಕದ ಅಧಿಕಾರಿಗಳ ಗಮನಕ್ಕೆ ತಂದಾಗ ಕೂಡಲೇ ನಗರ ಸಾರಿಗೆ ಬಸ್ ಆರಂಭಕ್ಕೆ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಿದರು. ಕಾಲೇಜಿನ ಆವರಣಕ್ಕೆ ಆಗಮಿಸಿದ ಬಸ್‌ನ್ನು ಪ್ರಾಚಾರ್ಯ ಎಸ್.ಎಲ್.ಪಾಟೀಲ್ ಹಾಗೂ ಉಪನ್ಯಾಸಕರು, ಸಿಬ್ಬಂದಿ ಸ್ವಾಗತಿಸಿದರು. ಬಸ್ ಸಂಚಾರದ ಸಮಯ: ಬೆಳಗ್ಗೆ 8.30, 9, 9.30ಕ್ಕೆ ಆಗಮಿಸಲಿದ್ದು ಮದ್ಯಾಹ್ನ 1.30, 2, 3.00 ಕ್ಕೆ ಸಂಚರಿಸಲಿದೆ ಎಂದು ಸಾರಿಗೆ ಘಟಕದ ವ್ಯವಸ್ಥಾಪಕ ಎ.ಎಚ್.ಮದಭಾವಿ ತಿಳಿಸಿದ್ದಾರೆ.